ಲುಧಿಯಾನ: ಪಂಜಾಬ್ ರಾಜ್ಯದ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ ಕನಿಷ್ಟ 11 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳವನ್ನು ಸೀಲ್ ಮಾಡಿದ್ದಾರೆ. ಅಲ್ಲದೆ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುವಾ
ನವದೆಹಲಿ: ಏ 29. ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ತೀರ್ಪನ್ನು ಇಂದು ಸಾಕೇತ್ ನ್ಯಾಯಾಲಯ ತನ್ನ ಆದೇಶವನ್ನುಪ್ರಕಟಿಸುವ ಸಾಧ್ಯತೆಯಿದೆ. ಏ.15ರಂದು ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾ ವಿರುದ್ಧ ಆರೋಪಗಳ ಕುರಿತು ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಈ ನಡುವೆ ಮಗಳ ಮೃತದೇಹ ಅವಶೇಷವನ್ನು ಶ್ರದ್ಧಾ ತಂದೆ ವಿಕಾಸ್‌ಗೆ
ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅಕ್ಷರಶಃ ರನ್ ಗಳ ಮೇಘಸ್ಫೋಟವೇ ಸಂಭವಿಸಿತ್ತು. ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಪ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ
ನವದೆಹಲಿ: ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೊದಲ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ದೇಶದ ದಕ್ಷಿಣ ಪ್ರದೇಶದಲ್ಲಿ 46-55 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಆದಾಗ್ಯೂ, ಈ ಶಾಖ ಸೂಚ್ಯಂಕವು ಅಮೆರಿಕ ರಾಷ್ಟ್ರೀಯ ಸಾಗರ ಮತ್ತು ವಾಯುಮಂಡಲದ ಆಡಳಿತ ಸೂತ್ರವನ್ನು ಆಧರಿಸಿದೆ. ಭಾರತದ ಮೇಲಿನ ತಾಪಮಾನವನ್ನು ಮೌಲ್ಯೀಕರಿಸಿಲ್ಲ. ಶಾಖ
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಶುಕ್ರವಾರ ತಮ್ಮ ಬೆಂಬಲ ಸೂಚಿಸಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್(ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು
ಇಂಫಾಲ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಚುರಾಚಂದಪುರ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಲಿದ್ದು, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ. ಮೀಸಲು ಹಾಗೂ ಸಂರಕ್ಷಿತ ಅರಣ್ಯಗಳು ಮತ್ತು ನೀರಾವರಿ ಪ್ರದೇಶಗಳಂತಹ ಭಾಗಗಳಲ್ಲಿ
ನವದೆಹಲಿ:ಏ 27. ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ವಿಸ್ತರಿಸಿದೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಸಿಬಿ ದೆಹಲಿಯ
ನವದೆಹಲಿ: ಚತ್ತೀಸ್ ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ. ಅರನ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಪೊಲೀಸ್ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ ಜಿ) ಗಳ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ
ದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆ ಆಮ್ ಆದ್ಮಿ ಪಕ್ಷದ (ಎಎಪಿ) ಶೆಲ್ಲಿ ಒಬೆರಾಯ್ ದೆಹಲಿಯ ಮೇಯರ್
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್