ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ. ಚೀನಾ ದೇಶವು 1 ಲಕ್ಷ ಕೋತಿಗಳ ಆಮದಿಗೆ ಬೇಡಿಕೆ ಇಟ್ಟಿದೆ ಎಂಬ ವಿಚಾರವನ್ನು ಶ್ರೀಲಂಕಾ ಸರ್ಕಾರ ದೃಢಪಡಿಸಿದೆ. ಅಷ್ಟೇ ಅಲ್ಲ, ಕೋತಿಗಳನ್ನು
ಅಮೃತಸರ: ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಅವರು ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ವಲಸೆ ಅಧಿಕಾರಿಗಳು ಇಲ್ಲಿನ ಶ್ರೀ ಗುರು ರಾಮ್ ದಾಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.ಆಕೆಯನ್ನು ವಲಸೆ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಂಗ್ ಈ ವರ್ಷದ ಫೆಬ್ರುವರಿಯಲ್ಲಿ
ಜಮ್ಮು: ಜಮ್ಮು ಕಾಶ್ಮೀರದ ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಹುರಿದಿದ್ದು ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ವರದಿಗಳ ಪ್ರಕಾರ, ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿದ್ದ ನಾಲ್ವರು ಯೋಧರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹುತಾತ್ಮರಾಗಿದ್ದಾರೆ. ಆದರೂ ಸೇನೆಯ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ.
ಬಟಿಂಡಾ: ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ. ಬಟಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನಾ ಅವರು ಬಂಧಿತ ಯೋಧನನ್ನು ದೇಸಾಯಿ ಮೋಹನ್ ಎಂದು ಗುರುತಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶವು ವೈಯಕ್ತಿಕವಾಗಿದೆ. ಆತ ಆ ಯೋಧರೊಂದಿಗೆ ಹಗೆತನ ಹೊಂದಿದ್ದರು. ಗಮನಾರ್ಹವೆಂದರೆ,
ಕೋಲಾರ: ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ
ಖಾರ್ಟೂಮ್: ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ
ಕಡಪ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ. ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್
ಕೋಲ್ಕತ್ತಾ: ಅರೆಬರೆ ಬಟ್ಟೆಗಳನ್ನು ಧರಿಸುವ ಯುವತಿಯರು ರಾಮಾಯಣದಲ್ಲಿ ಬರುವ ರಾಕ್ಷಸಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟ್ ನಲ್ಲಿ ಹಂಚಿಕೊಂಡಿರುವ ಮೊಯಿತ್ರಾ, ಶುಕ್ರವಾರ ಬೆಳಗ್ಗೆ ಬಿಜೆಪಿ ನಾಯಕರು
ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ ಪುತ್ರ ಅಸದ್ ಹಾಗೂ ಅವರ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು
ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ