ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿ ವಿರುದ್ಧ ಕೇಂದ್ರ ತನಿಖಾ ದಳ ಪ್ರಕರಣ ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರ ನಿವಾಸ ಮತ್ತು
2025 ರ ಏಷ್ಯಾಕಪ್ಗೆ (Asia Cup 2025) ಟೀಂ ಇಂಡಿಯಾವನ್ನು ಆಯ್ಕೆ ಮಾಡಿದ ಎರಡು ದಿನಗಳ ಬಳಿಕ ಆಯ್ಕೆ ಮಂಡಳಿಯ ಮುಖ್ಯಸ್ಥ ಅಜಿತ್ ಅಗರ್ಕರ್ಗೆ ( Ajit Agarkar) ಬಿಸಿಸಿಐ (BCCI) ವಿಶೇಷ ಉಡುಗೊರೆಯನ್ನು ನೀಡಿದೆ. ವಾಸ್ತವವಾಗಿ ಅಜಿತ್ ಅಗರ್ಕರ್ ಅವರನ್ನು 2023 ರ ಜೂನ್ನಲ್ಲಿ ಭಾರತ ತಂಡದ ಮುಖ್ಯ
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಇಂದು ಬುಧವಾರ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ
ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಬಣದ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಇಂದು ಗುರುವಾರ ನಾಮಪತ್ರ ಸಲ್ಲಿಸಿದರು. ಎನ್ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ.
ನವದೆಹಲಿ: ಒಂದು ತಿಂಗಳ ಕಾಲ ನಡೆದ ಸಂಸತ್ ಮುಂಗಾರು ಅಧಿವೇಶನಕ್ಕೆ ಗುರುವಾರ ತೆರೆ ಬಿದಿದ್ದು, ಪ್ರತಿಪಕ್ಷಗಳ ಪ್ರತಿಭಟನೆ, ಮುಂದೂಡಿಕೆ ಮತ್ತು ಸಭಾತ್ಯಾಗದ ನಡುವೆಯೇ ಲೋಕಸಭೆಯಲ್ಲಿ ಹನ್ನೆರಡು ಮಸೂದೆಗಳು ಮತ್ತು ರಾಜ್ಯಸಭೆಯಲ್ಲಿ 15 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಈ ಬಾರಿಯ ಮುಂಗಾರು ಅಧಿವೇಶನ ಜುಲೈ 21 ರಂದು ಆರಂಭವಾಯಿತು. ಎರಡೂ ಸದನಗಳಲ್ಲಿ ಆಪರೇಷನ್ ಸಿಂಧೂರ್
ಮುಂಬೈ: ವರುಣನ ಅಬ್ಬರಕ್ಕೆ ಮಹಾರಾಷ್ಟ್ರ ರಾಜ್ಯ ತತ್ತರಿಸಿದೆ. ಕಳೆದ ಎರಡು ದಿನಗಳಿಂದ ಅನೇಕ ಜಿಲ್ಲೆಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಆರು ಜನರು ಸಾವನ್ನಪ್ಪಿದ್ದು, ನೂರಾರು ಮಂದಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮಂಗಳವಾರ ರಾಜಧಾನಿ ಮುಂಬೈಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ವಿಪತ್ತು ನಿರ್ವಹಣಾ ಇಲಾಖೆಯೊಂದಿಗೆ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ ಮುಖ್ಯಮಂತ್ರಿ
ಜೈಪುರ: ರಾಜಸ್ಥಾನದ ಮಣಿಕಾ ವಿಶ್ವಕರ್ಮ 2025 ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ, ಮುಂದಿನ ನವೆಂಬರ್ 21ರಂದು ಥೈಲ್ಯಾಂಡ್ನಲ್ಲಿ ನಡೆಯಲಿರುವ 74 ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಶ್ರೀ ಗಂಗಾನಗರದ ಮಣಿಕಾ ಈ ಗೆಲುವನ್ನು ರಾಜಸ್ಥಾನ ಮತ್ತು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು
ಇಸ್ಲಾಮಾಬಾದ್:ಆ. 17ಪಾಕಿಸ್ತಾನದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 142 ಮಕ್ಕಳು ಸೇರಿದಂತೆ 325ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಪ್ರವಾಹ, ಭೂಕುಸಿತಗಳು ಮತ್ತು ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ಇದರಿಂದಾಗಿ ಜನನಿಬಿಡ ಪ್ರದೇಶಗಳಲ್ಲಿ ಅಸ್ತವ್ಯಸ್ಥ ಆಗಿದ್ದು, ಜನರು, ಪ್ರಾಣಿಗಳು
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ