ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ನವದೆಹಲಿ: ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಅಂದರೆ ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ನಂತರ, ಸುತ್ತಮುತ್ತಲ ಪ್ರದೇಶ ಮತ್ತು ವಸ್ತುಗಳೂ

ಶ್ರೀನಗರ: ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳ ಜತೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹತನಾದ ಉಗ್ರನನ್ನು

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್) ಹೆಡ್ ಕಾನ್‌ಸ್ಟೆಬಲ್ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯ ಬಟಮ್ ಗ್ರಾಮದ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ನಾರಾಯಣಪುರ ಹೆಚ್ಚುವರಿ