ಇಂಫಾಲ್: ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದರಿಂದ ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು
ಟೆಲ್ ಅವೀವ್: ಅಕ್ಟೋಬರ್ 7ರಂದು ಇಸ್ರೇಲಿಗರ ಮೇಲಿನ ದಾಳಿಯ ರೂವಾರಿ, ಹಮಾಸ್ ಉಗ್ರ ಸಂಘಟನೆ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಕೊನೆಗೂ ಇಸ್ರೇಲ್ ಸೇನೆ ಹೊಡೆದುರುಳಿಸಿದ್ದು, ಇಡೀ ಇಸ್ರೇಲ್ ಇದೀಗ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಗಾಜಾದಲ್ಲಿ ನಡೆದ ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆ ಗುರುವಾರ ಹೇಳಿಕೊಂಡಿದೆ.
ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ. ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದಲ್ಲಿರುವ ಇಎಸ್‌ಐ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು (ಅ.18) ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಈ ವೇಳೆ ಕೇವಲ 20 ನಿಮಿಷದಲ್ಲಿ
ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಮರ್ ಅಬ್ದುಲ್ಲಾ
ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ಅಚ್ಚರಿಯಾದರೂ ಇದು ಸತ್ಯ.. ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಇದು ಕಳೆದ 50 ವರ್ಷಗಳಲ್ಲೇ ಮೊದಲ
ಚೆನ್ನೈ: 12578 ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್ ರೈಲು ಚೆನ್ನೈ-ಗುಡೂರು ವಿಭಾಗದಲ್ಲಿ ಚೆನ್ನೈ ಸೆಂಟ್ರಲ್‌ನಿಂದ 41 ಕಿಲೋಮೀಟರ್ ದೂರದಲ್ಲಿರುವ ಕವರೈಪೆಟ್ಟೈ ನಿಲ್ದಾಣದಲ್ಲಿ ನಿಂತಿದ್ದ ಸರಕು ರೈಲಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಆದರಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಿಂದಾಗಿ ಬಾಗಮತಿ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿತಪ್ಪಿವೆ. ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ರೈಲನ್ನು
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ಶೂಟಿಂಗ್ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್‌ನಿಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿವೀರ್‌ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು
ಮುಂಬೈ: ಟಾಟಾ ಗ್ರೂಪ್ ನ ಮಾಜಿ ಗೌರವಾಧ್ಯಕ್ಷ ದಿವಂಗತ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರು ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಮೂಲಗಳು ಶುಕ್ರವಾರ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ. ಅವರು ದೊರಬಾಜಿ ಟಾಟಾ ಟ್ರಸ್ಟ್‌ನ 11 ನೇ ಅಧ್ಯಕ್ಷ ಮತ್ತು ರತನ್ ಟಾಟಾ ಟ್ರಸ್ಟ್‌ನ ಆರನೇ
ದೇಶಾದ್ಯಂತ ದೇವಿ ನವರಾತ್ರಿ ಸಂಭ್ರಮ ಜೋರಾಗಿದೆ. ದುರ್ಗಾಪೂಜೆ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರವು 4 ದಿನಗಳ ರಜೆಯನ್ನು ಘೋಷಿಸಿದೆ. ಇಡೀ ದೇಶವೇ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿದೆ. ಮತ್ತೊಂದೆಡೆ, ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ ಚಿನ್ನದ ಕಿರೀಟವನ್ನು
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ