ಬೆಂಗಳೂರು:ಜೂ. 07: ದೇಶೀಯ ಕ್ರಿಕೆಟ್‌ನಲ್ಲಿನ ವೇತನ ವ್ಯವಸ್ಥೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ, ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅನೇಕ ಕ್ರಿಕೆಟಿಗರು ಸರಿಯಾದ ಮನ್ನಣೆ ಪಡೆಯದೆ ಕಡಿಮೆ ಸಂಬಳದೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.