ಭಾರತಕ್ಕೆ ಮತ್ತೊಂದು ಆಘಾತವಾಗಿದೆ. ಪ್ಯಾರಿಸ್ ಒಲಿಂಪಿಕ್ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳೆಯರ 50 ಕೆಜಿ ವಿಭಾಗದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಒಲಿಂಪಕ್ನಿಂದ ಹೊರಗೆ ಕಳಿಸಿದೆ. ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಈಗಾಗಲೇ
ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತೀಯ ಆಟಗಾರರು ಪದಕದ ಭರವಸೆ ಮೂಡಿಸಿದ್ದಾರೆ. ಹೌದು ಕುಸ್ತಿಯಲ್ಲಿ ವಿನೇಶ್ ಪೋಗಟ್ ಹಾಗೂ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹರಿಯಾಣದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಪ್ರೀ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಗೆದ್ದಿದ್ದಾರೆ. ವಿನೇಶ್ ಜಪಾನ್‌ನ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್
ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. 89.34 ಮೀಟರ್ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್ ದೂರ ಎಸೆತ ಇದು ಜಾಗತಿಕ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ. ಈ ಹಿಂದೆ
ಪ್ಯಾರಿಸ್ ಒಲಿಂಪಿಕ್ಸ್‌ನ ಶೂಟಿಂಗ್ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮನು ಭಾಕರ್ ಅವರ ಕನಸು ಕಮರಿದೆ. ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕಕ್ಕೆ ಕೊರೊಳೊಡ್ಡುವ ಅವಕಾಶವನ್ನು ತಪ್ಪಿಸಿಕೊಂಡರು. ಫೈನಲ್ ಸುತ್ತಿನ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಮತ್ತು ಮನು ಭಾಕರ್ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ
ಪ್ಯಾರಿಸ್ ಒಲಿಂಪಿಕ್ಸ್‌ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಮಣಿಕಾ ಬಾತ್ರಾ ಹಾಗೂ ಫ್ರಾನ್ಸ್‌ನ ಪ್ರಿತಿಕಾ ಪವಾಡೆ
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್‌ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮೊದಲ ದಿನ ಭಾರತಕ್ಕೆ ನಿರಾಸೆ ಮೂಡಿದೆ. ಆದರೆ ಚೀನಾ ಮೊದಲೆರೆಡು ಚಿನ್ನದ ಪದಕ ಗೆದ್ದಿದೆ. ಮೊದಲು ಮಿಶ್ರ ಸ್ಪರ್ಧೆಯಲ್ಲಿ ಮತ್ತು ನಂತರ ಸಿಂಗಲ್ಸ್‌ನಲ್ಲಿ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತ ತಂಡ ಫೈನಲ್‌ನಲ್ಲಿ ಸ್ಥಾನ ಕಳೆದುಕೊಂಡಿತು. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅರ್ಜುನ್ ಸಿಂಗ್
ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನವೇ ಭಾರತೀಯ ಸ್ಪರ್ಧಿಗಳಿಂದ ನೀರಸ ಪ್ರದರ್ಶನ ಮೂಡಿಬಂದಿದೆ. ಶನಿವಾರ ನಡೆದ 10 ಮೀಟರ್ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ನಾಲ್ವರು ಶೂಟರ್ಗಳು ಭಾಗವಹಿಸಿದ್ದರು. ಆದರೆ ಮಿಶ್ರ ಏರ್ ರೈಫಲ್ ವಿಭಾಗದಲ್ಲಿ ಪದಕದ ಸುತ್ತಿಗೆ ಪ್ರವೇಶಿಸುವಲ್ಲಿ ಭಾರತೀಯ ಶೂಟರ್ಗಳು ವಿಫಲರಾಗಿದ್ದಾರೆ. 10