ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮುಂಬೈ: ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. ಶಹಬಾಜ್ ಅಹ್ಮದ್ ಅವರನ್ನು ಸದ್ಯದ ಹರಾಜಿನ

ಉಡುಪಿ:ಅಜ್ಜರಕಾಡು ಈವನಿ೦ಗ್ ಫ್ರೆ೦ಡ್ಸ್ ವತಿಯಿ೦ದ ನಡೆಸಲಾದ ೬ನೇ ವರುಷದ ಅಜ್ಜರಕಾಡು ಪ್ರೀಮಿಯರ್ ಬ್ಯಾಡ್ಮಿ೦ಟನ್ ಲೀಗ್ ಪ೦ದ್ಯಾಟವನ್ನು ಭಾನುವಾರದ೦ದು ಜರಗಿತು. ನಗರದ ಆರು ತ೦ಡಗಳು ಈ ಪ೦ದ್ಯಾಟದಲ್ಲಿ ಭಾಗವಾಹಿಸಿದ್ದವು. ರೋಯಲ್ ಸ್ಟ್ರೈಕರ್ ತ೦ಡ ಫೈನಲ್ ಪ೦ದ್ಯಾಟದಲ್ಲಿ ಮಟ್ಟುವಿನ ವಾರಿಯಸ್ ತ೦ಡವನ್ನು ಸೋಲಿಸಿ ಟ್ರೋಫಿತನ್ನದಾಗಿಸಿ ಹಾಗೂ ೭೫ಸಾವಿರ ಬಹುಮಾನವನ್ನು ತನ್ನದಾಗಿಸಿಕೊ೦ಡಿತು.

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Australia Cricket Team) ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್​ನಲ್ಲಿ ಭಾರತ ವಿರುದ್ಧ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಕಾಂಗರೂ ಪಡೆ ಆರನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು. ಟ್ರೋಫಿ

ಮಡಿಕೇರಿ: ಥಾಯ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಗೆದ್ದಿದ್ದ ಕೊಡಗಿನ ಮೂಲದ ಇಬ್ಬರು ಕ್ರೀಡಾ ಪಟುಗಳು ಜಿಲ್ಲೆಗೆ ಚಿನ್ನದ ಪದಕದೊಂದಿಗೆ ವಾಪಸ್ ಆಗಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ತ್ರಿಕೋನ ಸೆಸ್ಟೊಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಥಾಯ್ಲೆಂಡ್ ಮತ್ತು ಶ್ರೀಲಂಕಾ ತಂಡಗಳನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ

ಮೆಲ್ಬರ್ನ್‌: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮೆಗ್ ಲ್ಯಾನಿಂಗ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಹೌದು.. ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಐದು ಬಾರಿ ವಿಶ್ವಕಪ್ ಗೆದ್ದುಕೊಟ್ಟ ಕೀರ್ತಿ ಹೊಂದಿರುವ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ 31

ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ​​ಕ್ರೀಡಾಂಗಣದಲ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಸರಣಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಉಭಯ ತಂಡಗಳು ಇಂದು ಸೆಣೆಸುತ್ತಿವೆ. ಸದ್ಯ

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ​ನ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ದೊಡ್ಡ

ಝೆಜಿಯಾಂಗ್: ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ಎಂದು ಘೋಷಿಸಲಾಗಿದೆ. ಅಫ್ಘಾನಿಸ್ಥಾನ ತಂಡ 18.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112