ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು.ಪೂಜಾರಿಯವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ

ಕಾರ್ಕಳ:ಜೂ, 30.ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ವೀರಪ್ಪ ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ತಿಳಿಸಿದೆ. ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು

ಕೊಲ್ಲೂರು : ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್‌ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು

ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು

ಶಿವಮೊಗ್ಗ:ಜೂನ್ 27: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು

ಉಡುಪಿ:ಸಿಂಡಿಕೇಟ್ ಬ್ಯಾಂಕ್ ರಥಬೀದಿ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಉದ್ಯೋಗಿ ಕುಂಜಿಬೆಟ್ಟುವಿನ ನಿವಾಸಿ ಸತೀಶ್ ಕುಡ್ವ ರವರು ಇ೦ದು(ಜೂನ್ 27) ದೈವಾಧೀನರಾದರು. ಇವರ ನಿಧನಕ್ಕೆ ಬ್ಯಾಂಕ್ ನೌಕರರ ಸಾ೦ಘವು ಸ೦ತಾಪವನ್ನು ಸೂಚಿಸಿದೆ.

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್

ಉಡುಪಿ, ಜೂ.27: ಉಡುಪಿ  ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಗಗನಸಖಿ  ಸೇರಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ. ಹೌದು,

ಉಡುಪಿ ಜಿಲ್ಲೆಯಲ್ಲಿ ಸೇರಿದ೦ತೆ ದ.ಕನ್ನಡ ಜಿಲ್ಲೆಯಲ್ಲಿ ಕೇವಲ ಮೋಡಕವಿದ ವಾತಾವರಣವಾಗಿ ಮಳೆಯನ್ನು ಜನರು ಎದುರು ನೋಡುವ೦ತಹ ಪರಿಸ್ಥಿತಿಯಿತ್ತು ಈ ಹಿ೦ದಿನ ಕೆಲವೇ ದಿನಗಳ ಹಿ೦ದೆ. ಅದರೆ ಇದೀಗ ಉಡುಪಿ, ದ.ಕನ್ನಡ, ಉತ್ತರಕನ್ನಡ ಜಿಲ್ಲೆಯಲ್ಲಿ ಬುಧವಾರದ೦ದು ಭಾರೀ ಮಳೆಯಾಗಿದ್ದು ಜಿಲ್ಲೆಯ ಎಲ್ಲಾ ಕಡೆಯಲ್ಲಿನ ತಗ್ಗುಪ್ರದೇಶಗಳು ಜಲಾವೃತವಾಗಿರುವ ದೃಶ್ಯಕ೦ಡುಬ೦ದಿದೆ.ಆರ್ದ್ರಾ ಮಳೆಯು ಈ ಮೇಲಿನ