``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಅಲ್ಲದೆ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿವೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಿಡುಗಡೆ ಮಾಡಿದ್ದಾರೆ. ಮುಡಾ ನಿವೇಶನ

ದೆಹಲಿಯ ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಪುತ್ರಿ ಅಮಿತಾ ಪ್ರಜಾಪತಿ ಕಳೆದ ಹತ್ತು ವರ್ಷಗಳ ನಿರಂತರ ಪ್ರಯತ್ನದ ನಂತರ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅಸಾಮಾನ್ಯ ಸಾಧನೆ ಮಾಡಿದ್ದಾರೆ. ಆರ್ಥಿಕ ಸಂಕಷ್ಟ ಹಾಗೂ ಸತತ ಪ್ರಯತ್ನಗಳ ಬಳಿಕ ಮಗಳು ಸಿಎ ಪಾಸ್ ಆಗಿರುವ ಖುಷಿಗೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಕಳೆಯುತ್ತಿದ್ದಂತೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, ಸೋಂಕು ನಿವಾರಣೆ ಕುರಿತಂತೆ ಆರೋಗ್ಯ ಇಲಾಖೆಯೊಂದಿಗೆ ನಾವು ಸತತ ಸಂಪರ್ಕದಲ್ಲಿದ್ದೇವೆ ಅವರ ನೆರವಿನೊಂದಿಗೆ ಸೋಂಕು ನಿವಾರಣೆ ಮಾಡಲು ಕ್ರಮ

ಬಿಹಾರದ ಮುಜಾಫರ್‌ಪುರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಆತಂಕಕಾರಿ ವಿಡಿಯೋವೊಂದು ಹರಿದಾಡುತ್ತಿದೆ. ವೀಡಿಯೊದಲ್ಲಿ 15 ವರ್ಷದ ಬಾಲಕನನ್ನು ಬಲವಂತವಾಗಿ ಕೂಡಿ ಹಾಕಿ, ಕ್ರೂರವಾಗಿ ಥಳಿಸಿ ಅವಮಾನಿಸಲಾಗಿದೆ. ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಘಾತಕಾರಿ ವೀಡಿಯೊದಲ್ಲಿ ಬಾಲಕನೊಬ್ಬನಿಗೆ 'ಮಿಯಾನ್ ಸಾಹೇಬ್ ಜಿಂದಾಬಾದ್' ಮತ್ತು 'ಅಲ್ಲಾ-ಹು-ಅಕ್ಬರ್' ಎಂದು ಕೂಗುವಂತೆ ಬಲವಂತ ಮಾಡಿರುವುದು

ಬೈಂದೂರು: ಮನೆಯ ಗೇಟ್ ಎದುರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ಸುರಿದ ಗಾಳಿಮಳೆಗೆ ಹಡವಿನ ಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ

ಬೆಂಗಳೂರು, (ಮೇ 15): ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ  ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು (ಮೇ 15) ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದಕ್ಕೆ ಪೂರಕವೆಂಬಂತೆ ಪಜ್ವಲ್​ ಫ್ಲೈಟ್​ ಟಿಕೆಟ್​ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು

ಬೆಂಗಳೂರು: ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (KSDB) ಜೂನಿಯರ್ ಎಂಜಿನಿಯರ್‌ಗಳ (JE-Civil) ಆಯ್ಕೆ ಪಟ್ಟಿ ಒಳಗೊಂಡ ಗೌಪ್ಯ ಕಡತ ನಾಪತ್ತೆಯಾಗಿದ್ದು ಕರ್ನಾಟಕ ಲೋಕಸೇವಾ ಆಯೋಗದ (KPSC) ಕಾರ್ಯಕ್ಷಮತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಕಳೆದ ಜನವರಿ 22 ರಂದು ಬೆಂಗಳೂರಿನ ಉದ್ಯೋಗ ಸೌಧದಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಕಾರ್ಯದರ್ಶಿಯವರ ಕಚೇರಿಯು ಕೊಳಗೇರಿ ಅಭಿವೃದ್ಧಿ

ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ (ನಿವೃತ್ತ) ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಇವರು ಬಿಜೆಪಿಗೆ ಸೇರ್ಪಡೆಯಾದರು. ನಿವೃತ್ತ ಏರ್ ಚೀಪ್ ಮಾರ್ಷಲ್ ಆದ ಬದೌರಿಯಾ ಉತ್ತರ ಪ್ರದೇಶದವರು, ಅಲ್ಲಿ ಲೋಕಸಭಾ

ದಾವಣಗೆರೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62)

ಉಡುಪಿ:ಶ್ರೀಕೃಷ್ಣಮಠಕ್ಕೆ ಶುಕ್ರವಾರದ೦ದು ಭಾರತಸರಕಾರದ ವಿತ್ತಸಚಿವೆಯಾಗಿರುವ ಶ್ರೀಮತಿ ನಿರ್ಮಲ ಸೀತಾರಾಮನ್ ಇವರು ಆಗಮಿಸಿ ದೇವರ ದರ್ಶನ ಪಡೆದುಕೊಂಡು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.