ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆಯಲ್ಲೂ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಏತನ್ಮಧ್ಯೆ ಹಮಾಸ್ ಉಗ್ರ ಸಂಘಟನೆಯ ಮುಖಂಡನ ಮನೆಯನ್ನೇ ಇಸ್ರೇಲ್ ವಾಯುಸೇನೆ ಬಾಂಬ್ ಹಾಕಿ ಉಡಾಯಿಸಿದೆ. ಹೌದು.. ಹಮಾಸ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೊಬ್ಬನ ಮನೆಯನ್ನೇ ಇಸ್ರೇಲ್ ಬಾಂಬಿಟ್ಟು ಧ್ವಂಸಗೊಳಿಸಿದೆ.
ಲಂಡನ್: ಪಶ್ಚಿಮ ಲಂಡನ್ನ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸೋಮವಾರದಂದು ಮೆಟ್ರೋಪಾಲಿಟನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಇನ್ನೂ ಮೃತರನ್ನು ಹೆಸರಿಸಿಲ್ಲ, ಆದರೆ ಸ್ಥಳೀಯ ವರದಿಗಳ ಪ್ರಕಾರ ಕುಟುಂಬವು ಭಾರತೀಯ ಮೂಲದವರಾಗಿದ್ದು, ಭಾನುವಾರ ರಾತ್ರಿ ಬೆಂಕಿ ಸಂಭವಿಸುವ ಮೊದಲು ದೀಪಾವಳಿಯನ್ನು
ಲಂಡನ್: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್ರಚಿಸಲು ಮುಂದಾಗಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು, ಭಾರತೀಯ ಮೂಲದ ವಿವಾದಿತ ಆಂತರಿಕ ಸಚಿವ ಸುಯೆಲ್ಲಾ ಬ್ರೆವರ್ಮನ್ ಅವರನ್ನು ಸೋಮವಾರ ಸಂಪುಟದಿಂದ ವಜಾ ಮಾಡಿದ್ದಾರೆ. ಕಳೆದ ಶನಿವಾರ ಲಂಡನ್ನಲ್ಲಿ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯನ್ನು ಪೊಲೀಸರು ನಿಭಾಯಿಸಿದ
ರೇಕ್ಯಾವಿಕ್: ದೇಶದ ನೈರುತ್ಯ ಭಾಗದಲ್ಲಿರುವ ರೇಕ್ಯಾನೆಸ್ ಪರ್ಯಾಯ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ಬಳಿಕ ಐಸ್ಲ್ಯಾಂಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜ್ವಾಲಾಮುಖಿ ಸ್ಫೋಟಕ್ಕೆ ಪೂರ್ವಭಾವಿಯಾಗಿ ಈ ಭೂಕಂಪನಗಳು ಸಂಭವಿಸಿರುವ ಸಾಧ್ಯತೆಯಿದೆ. ಕಳೆದ 14 ಗಂಟೆಗಳಲ್ಲಿ ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ ಐಸ್ಲ್ಯಾಂಡ್ನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈಗ
ಗಾಜಾ: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಒಟ್ಟು 10,812 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಘರ್ಷದಲ್ಲಿ 4,412 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ ಆರಂಭಿಸಿ ಈಗ ಭೂಸೇನೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ಅ.07 ರಂದು ಹಮಾಸ್
ವಾಷಿಂಗ್ಟನ್: ಅಮೆರಿಕದ ಇಂಡಿಯಾನಾದಲ್ಲಿ ಫಿಟ್ ನೆಸ್ ಸೆಂಟರ್ ನಲ್ಲಿ ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ ವರುಣ್ ರಾಜ್ ಪುಚಾ (24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್ ನಲ್ಲಿದ್ದಾಗ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್
ಡಮಾಸ್ಕಸ್:ನ.9: ಅಮೇರಿಕಾದ ವಿರುದ್ಧದ ದಾಳಿಗೆ ಪ್ರತಿಯಾಗಿ ಪೂರ್ವ ಸಿರಿಯಾದಲ್ಲಿ ಇರಾನ್ಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹೇಳಿದ್ದಾರೆ. ಸಿರಿಯಾದಲ್ಲಿ ಒಂದು ಸ್ಥಳವನ್ನು ಗುರಿಯಾಗಿಸಿ ನಡೆಸಿದ ಎರಡನೇ ದಾಳಿ ಇದಾಗಿದ್ದು, ಕಳೆದ ತಿಂಗಳು,
ಟೆಲ್ ಅವೀವ್: ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಬುಧವಾರ ರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ನ ಶಸ್ತ್ರಾಸ್ತ್ರ ತಯಾರಿಕಾ ಘಟಕದ ಪ್ರಮುಖ ತಜ್ಞರಲ್ಲಿ ಒಬ್ಬನನ್ನು ಕೊಂದಿದೆ ಎಂದು ಹೇಳಿದೆ. ಟೈಮ್ಸ್ ಆಫ್ ಇಸ್ರೇಲ್ ಈ ಬಗ್ಗೆ ವರದಿ ಮಾಡಿದ್ದು, "ಕಾರ್ಯತಂತ್ರದ ಶಸ್ತ್ರಾಸ್ತ್ರಗಳು ಮತ್ತು ರಾಕೆಟ್ಗಳ" ತಯಾರಿಕೆಯಲ್ಲಿ ಪರಿಣತಿ ಹೊಂದಿರುವ, ಇಸ್ರೇಲ್ ಮಿಲಿಟರಿ
ವಾಷಿಂಗ್ಟನ್: ಗಾಜಾ ಪಟ್ಟಿ ಆಕ್ರಮಿಸುವ ಇಸ್ರೇಲ್ ನಡೆಗೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಇದು ಇಸ್ರೇಲಿ ಜನರಿಗೆ ಒಳ್ಳೆಯದಲ್ಲ ಎಂದು ಅಮೆರಿಕ ಎಚ್ಚರಿಕೆ ನೀಡಿದೆ. ಇಸ್ರೇಲಿ ಪಡೆಗಳಿಂದ ಗಾಜಾವನ್ನುಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕೆಲಸವಲ್ಲ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆಂದು ದಿ ವಾಲ್ ಸ್ಟ್ರೀಟ್ ಜರ್ನಲ್
ಅಮೇರಿಕ:ವಿಶ್ವಾದ್ಯಂತ ಶ್ರೀಕೃಷ್ಣಭಕ್ತಿ ಪ್ರಸಾರ ದೀಕ್ಷೆಯನ್ನು ಹೊಂದಿರುವ ಪೂಜ್ಯ ಪುತ್ತಿಗೆ ಶ್ರೀಪಾದರು ಇಂದು ಅಮೇರಿಕಾದ ಅಟ್ಲಾಂಟಾ ನಗರದಲ್ಲಿ ಭಕ್ತ ಜನರ ಸಹಕಾರದೊಂದಿಗೆ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕಾಗಿ ಖರೀದಿಸಿರುವ 6 ಎಕ್ರೆ ವಿಶಾಲವಾದ ಜಾಗದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು . ಈ ಜಾಗದಲ್ಲಿ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣವಾಗಲಿದ್ದು ತಾವು ಉಡುಪಿ