ನ್ಯೂಜೆರ್ಸಿ: ಮದುವೆಗಾಗಿ ಅಮೆರಿಕಕ್ಕೆ ಆಗಮಿಸಿದ್ದ 24 ವರ್ಷದ ಭಾರತೀಯ ಯುವತಿಯೊಬ್ಬಳು ನಾಪತ್ತೆಯಾಗಿರುವುದಾಗಿ ನ್ಯೂಜೆರ್ಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯುವತಿ ಸಿಮ್ರಾನ್ ಎಂದು ಗುರುತಿಸಲಾಗಿದೆ. ಆಕೆ ಬುಧವಾರ ನಾಪತ್ತೆಯಾಗುವ ಮುನ್ನಾ ಯಾರಿಗೂ ಕಾಯುತ್ತಿರುವುದು ಹಾಗೂ ತನ್ನ ಫೋನ್ ಅನ್ನು ಪರಿಶೀಲಿಸುತ್ತಿರುವುದು ಕಂಡುಬಂದಿದೆ ಎಂದು
ಗಾಜಾ ನಗರದ ಅಲ್-ತುಫಾ ನೆರೆಹೊರೆಯಲ್ಲಿ ಜನನಿಬಿಡ ವಸತಿ ಕಟ್ಟಡದ ಮೇಲೆ ಇಸ್ರೇಲ್ ನಿನ್ನೆ ಶನಿವಾರ ನಡೆಸಿದ ಬಾಂಬ್ ದಾಳಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 20 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಶನಿವಾರ ಗಾಜಾದಾದ್ಯಂತ ವಿವಿಧ ದಾಳಿಗಳಲ್ಲಿ ಕನಿಷ್ಠ 81 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ. ಇದರಲ್ಲಿ ಅಮೆರಿಕ ಬೆಂಬಲಿತ
ಇತ್ತೀಚೆಗೆ ಚೀನಾದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿದ ನಂತರ, ಭಾರತದೊಂದಿಗೆ ಶೀಘ್ರದಲ್ಲೇ ಪ್ರಮುಖ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ ಸಂಬಂಧ ಸುದೀರ್ಘ ಮಾತುಕತೆ ನಡೆಯುತ್ತಿದೆ. ಈ ಮಾತುಕತೆಯ
ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್ -4 ಮಿಷನ್(Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28
ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 33 ವರ್ಷದ ಮಮ್ದಾನಿ ಈಗ ನ್ಯೂಯಾರ್ಕ್ ನಗರದ ಮೇಯರ್ ಆಗುವುದು ಖಚಿತ. ಭಾರತೀಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಮ್ದಾನಿ, ಈ ಸ್ಥಾನವನ್ನು ತಲುಪಿದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಆಗಲಿದ್ದಾರೆ. ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಮಮ್ದಾನಿ
ಬ್ರೆಸಿಲಿಯಾ: ಬ್ರೆಜಿಲ್ ನ ಪ್ರವಾಸಿ ತಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, ಹಾಟ್ ಏರ್ ಬಲೂನ್ ಆಗಸದಲ್ಲಿಯೇ ಸ್ಫೋಟಗೊಂಡ ಪರಿಣಾಮ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬ್ರೆಜಿಲ್‌ನ ದಕ್ಷಿಣ ರಾಜ್ಯ ಸಾಂತಾ ಕ್ಯಾಟರೀನಾದಲ್ಲಿನ ಪ್ರೈಯಾ ಗ್ರ್ಯಾಂಡೇ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಸುಮಾರು 21 ಮಂದಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಹಾಟ್ ಏರ್ ಬಲೂನ್
ಟೆಹರಾನ್: ತನ್ನ ಅಣ್ವಸ್ತ್ರ ಕೇಂದ್ರಗಳ ಮೇಲೆ ಅಮೆರಿಕಾ ದಾಳಿ ಮಾಡಿ, ಖಡಕ್ ಎಚ್ಚರಿಕೆ ನೀಡಿದ ಬಳಿಕವೂ ಜಗ್ಗದ ಇರಾನ್, ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮತ್ತೆ ಮುಂದುವರೆಸಿದೆ. ಅಮೆರಿಕ ದಾಳಿ ಬಳಿಕ ಇರಾನ್ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್'ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಿದ ನಂತರ ಗುರುವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದು ಭಾರತೀಯ ರಾಜತಾಂತ್ರಿಕತೆಗೆ "ದೊಡ್ಡ ಹಿನ್ನಡೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್
ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ