Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಬೆಂಗಳೂರು: ಜೂನ್‌ನಲ್ಲಿ ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಬುಧವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಾಲ್ಕು ಅಭ್ಯರ್ಥಿಗಳ ಸ್ಪರ್ಧೆಗೆ ಅನುಮೋದನೆ ನೀಡಿದ್ದಾರೆ. ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್‌, ಅರವಿಂದ್ ಕುಮಾರ್‌ ಎಸ್‌.ಅರಳಿ ಹಾಗೂ ಕೆ.ಹರೀಶ್‌ ಕುಮಾರ್‌ ವಿಧಾನ ಪರಿಷತ್‌ ಸ್ಥಾನಗಳಿಗೆ ಸ್ಪರ್ಧಿಸಲಿದ್ದಾರೆ. ವಿಧಾನಸಭೆಯಿಂದ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಬುಧವಾರ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ 131 ಸಾಕ್ಷಿಗಳ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ನವೀನ್ ಹಂತಕರಿಗೆ ಗೌರಿ ಅವರ ಮನೆ ಹಾಗೂ ಕಚೇರಿ ತೋರಿಸಿದ್ದ. ಹಂತಕರ

ಬೆಂಗಳೂರು: ಕೃಷಿ ಸಾಲ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಅವರು ರೈತ ಮುಖಂಡರೊಂದಿಗೆ ಬುಧವಾರ ಸುಧೀರ್ಘ‌ ಚರ್ಚೆ ನಡೆಸಿ 2 ಹಂತಗಳಲ್ಲಿ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ.  ಸಾಲ ಮನ್ನಾ  ಅನುಷ್ಠಾನ ಪ್ರಕ್ರಿಯೆ ಆರಂಭಿಸಲು 15 ದಿನಗಳ ಕಾಲಾವಕಾಶವನ್ನೂ  ಕೋರಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ

ಶ್ರೀ ಕೃಷ್ಣ ಮಠಕ್ಕೆ ಪುದುಚೇರಿಯ ಮುಖ್ಯಮಂತ್ರಿಗಳಾದ ವಿ. ನಾರಾಯಣಸ್ವಾಮಿ ಯವರು ಭೇಟಿ ನೀಡಿ ಶ್ರೀ ಕೃಷ್ಣ ದರ್ಶನ ಪಡೆದು ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು

ಆಗ್ರಾ : ನಗರಕ್ಕೆ ಸಮೀಪದ ಬರ್‌ಹಾನ್‌ ಪಟ್ಟಣದಲ್ಲಿ ಸೆಪ್ಟಿಕ್‌ ಟ್ಯಾಂಕ್‌ನಿಂದ ವಿಷಾನಿಲ ಸೋರಿದ ಕಾರಣ ಒಂದೇ ಕುಟುಂಬದ ಮೂವರು ಮೃತಪಟ್ಟು ಇತರ 8 ಮಂದಿ ತೀವ್ರವಾಗಿ ಅಸ್ವಸ್ಥರಾದ ಘಟನೆ ವರದಿಯಾಗಿದೆ. ತರಕಾರಿ ವ್ಯಾಪಾರಿ ಹೀರಾ ಸಿಂಗ್‌ ಅವರಿಗೆ ಸೇರಿದ ಸೆಪ್ಟಿಕ್‌ ಟ್ಯಾಂಕ್‌ ಕ್ಲೀನ್‌ ಮಾಡುತ್ತಿದ್ದ ವೇಳೆ ಅದರಿಂದ ಹೊರಹೊಮ್ಮಿದ ವಿಷಾನಿಲ ಅವರ 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಕನಸು ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಎಂಬುವರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿನ ಎರ್ಮಾಯ್ ಫಾಲ್ಸ್ ಗೆ ಫೋಟೋಶೂಟ್ ಗಾಗಿ ಸಂತೋಷ್ ಶೆಟ್ಟಿ ಹಾಗೂ ಸ್ನೇಹಿತರು ಆಗಮಿಸಿದ್ದರು. ಫೋಟೋ ಶೂಟ್ ಮಾಡುತ್ತಿದ್ದಾಗ ನೀರಿನ ಹರಿವು ಹೆಚ್ಚಾಗಿದ್ದರಿಂದ ಕಾಲುಜಾರಿ ಬಿದ್ದು ಫಾಲ್ಸ್ ನಲ್ಲಿ

ಉಡುಪಿ: ಮಂಗಳವಾರ ಸಂಜೆ ಮಹಾಮಳೆಯ ಹೊಡೆತಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿಹೋಗಿದ್ದ ಬಾಲಕಿಯ ಮೃತದೇಹ  ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.ನಿಧಿ ಆಚಾರ್ಯ(10) ನೀರುಪಾಲಾಗಿದ್ದ ಬಾಲಕಿಯಾಗಿದ್ದು, ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. ತನ್ನ ಸಹೋದರಿ ನಿಷಾ ಜೊತೆ ಶಾಲೆಯಿಂದ ವಾಪಸ್ ಬರುವಾಗ ಈ ದುರ್ಘಟನೆ

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಪ್ರಧಾನಿ ಹುದ್ದೆ ಅಭ್ಯರ್ಥಿಯಾಗಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಬಿಎಸ್‌ಪಿ ಬಿಂಬಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಇಂದು ಶನಿವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದೆ ಎನ್ನಲಾಗಿದೆ. ಪ್ರಕೃತ ಲೋಕಸಭೆಯಲ್ಲಿ ಬಿಎಸ್‌ಪಿ

ಪಣಜಿ: ದಕ್ಷಿಣ ಗೋವಾದ ಬೀಚ್‌ವೊಂದರಲ್ಲಿ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನ ಎದುರೇ ಮೂವರು ಕಾಮುಕರು ಗ್ಯಾಂಗ್‌ರೇಪ್‌ ನಡೆಸಿದ ಹೇಯ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಹರಿಸುತ್ತಿದ್ದ ಜೋಡಿಯನ್ನು ಕಾಮುಕರು ಹಿಡಿದು ವಿವಸ್ತ್ರಗೊಳಿಸಿ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಬಳಿಕ ಸರದಿಯಂತೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು

ಶ್ರೀನಗರ : ಶನಿವಾರ ನಸುಕಿನ ವೇಳೆ ಪಾಕಿಸ್ಥಾನ ಕಡೆಯಿಂದ ಭಾರತದ ಗಡಿಯೊಳಗೆ ನುಸುಳುವ ಉಗ್ರರ ತಂಡದ ಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿದ್ದು, ಗುಂಡಿನ ಮಳೆಗೆರೆದು ಐವರು ಉಗ್ರರನ್ನು ಹತ್ಯೆಗೈದಿದ್ದಾರೆ. ಉಗ್ರರ ತಂಡದಲ್ಲಿ ಎಷ್ಟು ಮಂದಿ ಇದ್ದರು ಎನ್ನುವುದು ತಿಳಿದು ಬಂದಿಲ್ಲ ಆದರೆ ಐವರನ್ನು ಸೇನಾ ಪಡೆಗಳು ಹತ್ಯೆಗೈದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು