Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 22 ರಿ೦ದ ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಚೆನ್ನೈ: ಮನೆಯಲ್ಲಿನ ಏರ್ ಕಂಡಿಷನ್(ಎಸಿ) ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ತಿಂಡಿವಾನಂ ಸಮೀಪ ನಡೆದಿದೆ. ತಿಂಡಿವಾನಂ ಸಮೀಪದ ಕಾವೇರಿಪಕ್ಕಮ್ ನ ರಾಜು(60), ಆತನ ಪತ್ನಿ(55) ಹಾಗೂ ಮಗ(26) ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯ ಕೋಣೆಯೊಂದರಲ್ಲಿ ರಾತ್ರಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ

ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ, ಸಿಟಿ ಮಾರುಕಟ್ಟೆ(ಕೃಷ್ಣ ರಾಜೇಂದ್ರ ಮಾರುಕಟ್ಟೆ) ಕಾಂಪ್ಲೆಕ್ಸ್ ಬಳಿ ವ್ಯಾಪಾರ ನಡೆಸುವ ಜಾಗಕ್ಕಾಗಿ ನಡೆದ ಜಗಳದಲ್ಲಿ ನಿಂಬೆಹಣ್ಣು ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಹಳೆಗುಡ್ಡದ ಹಳ್ಳಿಯ ನಿವಾಸಿ ಭರತ್ (32) ಕೊಲೆಯಾದ ವ್ಯಾಪಾರಿ. ತರಕಾರಿ ವ್ಯಾಪಾರಿ ಶರವಣ ಹಾಗೂ ಆತನ

ನವದೆಹಲಿ:ಹಿಮಾಲಯದ ಪರ್ವತಶ್ರೇಣಿಯಲ್ಲಿರುವ 29 ಸಾವಿರ ಅಡಿ ಎತ್ತರದ ಮೌಂಟ್ ಎವರೆಸ್ಟ್ ಪರ್ವತವನ್ನು ನೇಪಾಳದ ಪರ್ವತಾರೋಹಿ 50ರ ಹರೆಯದ ಕಾಮಿ ರಿಟಾ ಶೆರ್ಪಾ ಅವರು 23 ಬಾರಿ ಮೌಂಟ್ ಎವರೆಸ್ಟ್ ನ ತುತ್ತ ತುದಿಯನ್ನು ಹತ್ತಿದ ಮೊದಲ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಮೌಂಟ್ ಎವರೆಸ್ಟ್

ಮಂಗಳೂರು: ನಗರವನ್ನು ಬೆಚ್ಚಿ ಬೀಳಿಸಿದ್ದ ಶ್ರೀಮತಿ ಶೆಟ್ಟಿ(35) ಹತ್ಯೆ ಪ್ರಕರಣವನ್ನು ಮೂರು ದಿವಸಗಳ ಒಳಗೆ ಪೊಲೀಸರು ಬೇಧಿಸಿದ್ದು, ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ತನಿಖೆಗೆ ಇಳಿದಿದ್ದ 30 ಪೊಲೀಸ್ ಅಧಿಕಾರಿಗಳ ಮೂರು ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಜಾನ್ಸನ್ ಮತ್ತು ಪತ್ನಿ ವಿಕ್ಟೋರಿಯಾ ಎನ್ನುವವರನ್ನು ಬಂಧಿಸಿದ್ದಾರೆ. ಶ್ರೀಮತಿ ಶೆಟ್ಟಿ ಬಳಿ ಸಾಲದ

ಉಡುಪಿ: 10 ತಿಂಗಳು ಪ್ರಧಾನಿಯಾಗಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಇನ್ನಷ್ಟು ದಿನ ಪ್ರಧಾನಿಯಾಗಿ ಮುಂದುವರಿದ್ದದ್ದರೆ ಕಾಶ್ಮೀರ ಸಮಸ್ಯೆ ಪರಿಹಾರವಾಗುತ್ತಿತ್ತು ಎಂದು ಮಂಗಳವಾರ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ. ಇಂದು ಗೋವಿಂದ ಕಲ್ಯಾಣ ಮಂಟಪದಲ್ಲಿ ತಮ್ಮನ್ನು ಭೇಟಿಯಾದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಚೆನ್ನಮ್ಮ ದಂಪತಿಯನ್ನು

ಹೊಸದಿಲ್ಲಿ: ಹಿಂದು ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ನಟ ಕಮಲ ಹಾಸನ್‌ ವಿರುದ್ಧ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್‌ನಲ್ಲಿ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಲಾಗಿದೆ. ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕರಾಗಿರುವ ಕಮಲ ಹಾಸನ್‌ ಅರಾವಾಕುರಿಚಿ ವಿಭಾಸಭಾ ಕ್ಷೇತ್ರದ ಉಪಚುನಾವಣಾ  ಪ್ರಚಾರದ ವೇಳೆ ‘ಸ್ವತಂತ್ರ ಭಾರತದ ಮೊದಲ ಹಿಂದು ಉಗ್ರ ನಾಥುರಾಮ್‌

ಉಡುಪಿ ಶ್ರೀಗೋವಿಂದ ಕಲ್ಯಾಣಮಂಟಪದಲ್ಲಿ ಪೇಜಾವರ ಶ್ರೀವಿಶ್ವೇಶ ತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಸಮಾರಂಭದಲ್ಲಿ  ಭಾರತದ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಶ್ರೀಪಾದರನ್ನು ಭೇಟಿ ಮಾಡಿ ಗೌರವ ಸಲ್ಲಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷದ್ ಸದಸ್ಯರಾದ ಭೋಜೇಗೌಡರು,ಮಠದ ದಿವಾನರಾದ ರಘುರಾಮ ಆಚಾರ್ಯರು,ವೈದ್ಯರಾದ ತನ್ಮಯ ಗೋಸ್ವಾಮಿ,ಶ್ರೀಗಳ ಆಪ್ತಕಾರ್ಯದರ್ಶಿ

ಶ್ರೀ ಕೃಷ್ಣ ಮಠಕ್ಕೆ ಭಾರತದ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು. ವಿಧಾನ ಪರಿಷದ್ ಸದಸ್ಯರಾದ ಭೋಜೇಗೌಡರು,ಶ್ರೀಪಾದರ ಕಾರ್ಯದರ್ಶಿ ಗಿರೀಶ್ ಉಪಾದ್ಯಾಯ,ಮಠದ ,ಪಿ ಆರ್ ಓ ಶ್ರೀಶ ಭಟ್

ಕಾಪು: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ವಾಸ್ತವ್ಯವಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಮಂಗಳವಾರ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಕಾಪು ಮಾರಿಯಮ್ಮ ದೇವಿಗೆ ಕುಟುಂಬದ ಪರವಾಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವೇಗೌಡ ಅವರನ್ನು ದೇವಸ್ಥಾನದ ಪರವಾಗಿ

ಧಾರವಾಡ: ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದಲ್ಲಿ  ಮನೆಯೊಂದು ಕುಸಿದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಮಹಿಳೆ ಸೇರಿದಂತೆ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಯಲ್ಲವ್ವ ಗಡಾದ್ (53) ಮೊಮ್ಮಕ್ಕಳಾದ ಜ್ಯೋತಿ ಮೇಟಿ(9) ಮತ್ತು ಶ್ರಾವಣಿ ರಾದಾಯಿ (4) ಮೃತ ದುರ್ದೈವಿಗಳು. ಕುಂದಗೋಳ