Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಬೈಂದೂರು: ಕಾರಿಗೆ ಕಾಡುಹಂದಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಚಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬೈಂದೂರು-ಕೊಲ್ಲೂರು ರಸ್ತೆ ಗೋಳಿಹೊಳೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಕಾಲ್ತೋಡು ನಿವಾಸಿಯಾಗಿರುವ ಚಂದ್ರಶೇಖರ್ ಶೆಟ್ಟಿ (53) ಎಂಬುವವರು ಸಾವನ್ನಪ್ಪಿದ್ದಾರೆ. ಹೋಟೆಲ್ ಉದ್ಯಮಿಯಾಗಿದ್ದ ಚಂದ್ರಶೇಖರ್ ಶನಿವಾರ ಹೋಟೆಲ್ ಮುಚ್ಚಿದ ನಂತರ ಪತ್ನಿಯ ಮನೆಯಿದ್ದ ಕಾಲ್ತೋಡಿಗೆ  ತೆರಳುತ್ತಿದ್ದರು. ಆಗ

ಬೆಂಗಳೂರು: ಡಾ.ರಾಜ್ ಕುಮಾರ್ ಕುಟುಂಬದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ನಟ ರಾಘವೇಂದ್ರ ರಾಜ್‍ಕುಮಾರ್ ಅವರ ಕಿರಿಯ ಪುತ್ರ ಯುವರಾಜ್ ಕುಮಾರ್ ಮದುವೆ ಬೆಂಗಳೂರು ಅರಮನೆ ಮೈದಾನದಲ್ಲಿ ಭಾನುವಾರ ಅದ್ದೂರಿಯಾಗಿ ನೆರವೇರಿತು. ಮೈಸೂರು ಮೂಲದ ಶ್ರೀದೇವಿ ಭೈರಪ್ಪ ಅವರನ್ನು ಯುವ ರಾಜ್ ಕುಮಾರ್ ವರಿಸಿದರು. ಕಳೆದೊಂದು ವಾರದಿಂದ ಮದುವೆಯ ಶಾಸ್ತ್ರಗಳು ಶುರುವಾಗಿತ್ತು. ಕಾರ್ಯಕ್ರಮದಲ್ಲಿ ಸ್ಯಾಂಡಲ್‍ವುಡ್,

ಬೆಂಗಳೂರು: ಲೋಕಸಭಾ ಚುನಾವಣಾ ಫ‌ಲಿತಾಂಶ ಪ್ರಕಟವಾದ ಮೂರು ದಿನದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್‌.ಎಂ .ಕೃಷ್ಣ ಅವರ ಸದಾಶಿವನಗರದ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರ ಬಿಂದುವಂತೆ ಗೋಚರಿಸಿತು.ಒಂದೇ ದಿನ ಹಲವು ಪ್ರಮುಖ ನಾಯಕರು ನಿವಾಸಕ್ಕೆ ಭೇಟಿ ನೀಡುವ ಮೂಲಕ ಕುತೂಹಲಕ್ಕೆ ಕಾರಣವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಚುನಾವಣಾ

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ (ರಿ) ಉಡುಪಿ ಹಾಗೂ ಸಂಯಮಂ (ರಿ) ಕೋಟೇಶ್ವರ ಇವರು ಆಯೋಜಿಸಿರುವ ಎಂ.ಆರ್ ವಾಸುದೇವ ಸಾಮಗ - 70ರ ಸಮಾರಂಭ "ಸಾಮಗ ಸಪ್ತತಿ" ಕಾರ್ಯಕ್ರಮವನ್ನು ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕಿಶನ್ ಹೆಗ್ಡೆ ಬೈಲೂರು,

ತಿರುವನಂತಪುರ: ಶ್ರೀಲಂಕಾದಿಂದ ಹೊರಟ 15 ಮಂದಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಲಕ್ಷದ್ವೀಪದ ಮೂಲಕ ಕೇರಳ ಪ್ರವೇಶಕ್ಕೆ ಮುಂದಾಗಿರುವ ಬಗ್ಗೆ ವರದಿಗಳು ಬಂದ ಹಿನ್ನಲೆಯಲ್ಲಿ ಕೇರಳದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿ ರಕ್ಷಣಾ ಪಡೆ, ಕರಾವಳಿ ಠಾಣೆಗಳ ಪೊಲೀಸ್‌ ಅಧಿಕಾರಿಗಳು ಜಾಗೃತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ರೀತಿಯಲ್ಲಿ ಎಚ್ಚರಿಕೆಗಳು ಸಾಮಾನ್ಯವಾಗಿ ಬರುತ್ತವೆ ಆದರೆ ಈ

ಹಾವೇರಿ: ಪುಲ್ವಮಾದಲ್ಲಿ ನಡೆದಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡು ದೆಹಲಿಯ ಆರ್‌.ಆರ್‌.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಶಿವಲಿಂಗೇಶ್ವರಪಾಟೀಲ್‌ (26) ಶನಿವಾರ ಹುತಾತ್ಮರಾಗಿದ್ದಾರೆ. ಕಳೆದ 6 ವರ್ಷಗಳ ಹಿಂದೆ ಶಿವಲಿಂಗಪ್ಪ ಅವರು ಸೇನೆಗೆ ಸೇರ್ಪಡೆಯಾಗಿದ್ದರು. ನಾಳೆ ಸೋಮವಾರ ಶಿವಲಿಂಗಪ್ಪ ಅವರಪಾರ್ಥೀವಶರೀರ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮಕ್ಕೆ ಆಗಮಿಸಲಿದ್ದು,ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ.

ಬೆಂಗಳೂರು: ವಿಶ್ವಕಪ್ ಮಹಾಸಮರ ಶುರುವಾಗಲಿದ್ದು ಇದೀಗ ನ್ಯೂಜಿಲ್ಯಾಂಡ್ ನಡುವೆ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ಇದನ್ನು ವ್ಯಂಗ್ಯ ಮಾಡಿರುವ ಬಾಲಿವುಡ್ ನಟ ಕಮಲ್ ಖಾನ್ ಟೀಂ ಇಂಡಿಯಾ ವಿಶ್ವಕಪ್ ನ ಲೀಗ್‌ನಿಂದಲೇ ಹೊರ ಬೀಳಲಿದೆ ಎಂದು ಹೇಳಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ

ಅಮೇಥಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ವಿರುದ್ಧ ಜಯಭೇರಿ ಬಾರಿಸಿದ್ದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿ ಇಬ್ಬರು ಶಂಕಿತರನ್ನು   ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಅವರನ್ನು ಶನಿವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪ್ರಕರಣವನ್ನು ಗಂಬೀರವಾಗಿ

ನವದೆಹಲಿ: ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಭಾನುವಾರ ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ನಂತರ ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ಸಹ ಭೇಟಿ ಮಾಡಿದರು. ಮೇ 30ರಂದು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಇಬ್ಬರು

ನವದೆಹಲಿ: ಆಮ್ ಆದ್ಮಿ ಪಕ್ಷವನ್ನು ಮುಂದಿನ ವರ್ಷ ತೊರೆಯುವುದಾಗಿ ಅತೃಪ್ತ ಶಾಸಕಿ ಅಲ್ಕಾ ಬಾ ಘೋಷಿಸಿದ್ದಾರೆ. 2013ರಲ್ಲಿ ನಿಮ್ಮ ಜೊತೆ ನನ್ನ ಪ್ರಯಾಣ ಆರಂಭವಾಗಿತ್ತು, ಅದು 2020ರಲ್ಲಿ ಕೊನೆಯಾಗಲಿದೆ. ಪಕ್ಷದ ನಿಷ್ಠಾವಂತ ಕ್ರಾಂತಿಕಾರಿ ತಳಮಟ್ಟದ ಕಾರ್ಯಕರ್ತರಿಗೆ ನನ್ನ ಶುಭ ಹಾರೈಕೆಗಳು ಯಾವತ್ತೂ ಇರುತ್ತದೆ, ದೆಹಲಿಯ ಗಟ್ಟಿ ಬದಲಾವಣೆಗೆ ನೀವು ಯಾವತ್ತೂ ಇರುತ್ತೀರೆಂದು