Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಮೈತ್ರಿ ಸರಕಾರ ಪತನವಾಗಿದೆ. ಮುಂದೆ ಬಿಜೆಪಿ ಸರಕಾರ ರಚಿಸಲು ಆಹ್ವಾನ ಪಡೆಯಬಹುದು ಎಂಬುದು ನಿರೀಕ್ಷೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸಿಂಹಪಾಲು ಪಡೆದಿದೆ. ಇಲ್ಲಿ ಜೆಡಿಎಸ್‌ ಒಂದೂ ಸ್ಥಾನ ಗಳಿಸಿಲ್ಲವಾದರೆ, ಕಾಂಗ್ರೆಸ್‌ ಒಂದು ಕ್ಷೇತ್ರವನ್ನು ಮಾತ್ರ ಗಳಿಸಿತ್ತು. ಹೀಗಾಗಿ ಹನ್ನೆರಡು ಶಾಸಕರನ್ನು ಕೊಟ್ಟಿರುವ

ಬೆಂಗಳೂರು: ಕಲೆಗೆ ದೇಶ, ಭಾಷೆ, ಜಾತಿಯ ಗಡಿಯಿಲ್ಲ ಎಂಬುದು ಸರಿ ಆದರೆ ತಮ್ಮ ನೆಲದ ಭಾಷೆಗೆ ಅಪಮಾನವಾಗುವಂತೆ ನಡೆದುಕೊಳ್ಳುವುದು ಎಷ್ಟರಮಟ್ಟಿಗೆ ಸರಿ? ಕನ್ನಡದ ಚಿತ್ರ ರಸಿಕರು ಅಪಾರವಾಗಿ ಮೆಚ್ಚಿಕೊಂಡಿದ್ದ ‘ಕಿರಿಕ್ ಪಾರ್ಟಿ’ ಚಿತ್ರದ ಸುಂದರಿ ರಶ್ಮಿಕಾಳ ನಡೆಯಿಂದಾಗಿ ಇಂತಹ ಪ್ರಶ್ನೆ ಉದ್ಭವವಾಗಿದ್ದು, ಕನ್ನಡಪರ ಸಂಘಟನೆಗಳು ರೊಚ್ಚಿಗೇಳುವಂತೆ ಮಾಡಿವೆ. ಪರ ರಾಜ್ಯಗಳಿಗೆ ಹೋಗಿ

ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ನನ್ನು ಕೋರ್ಟ್ ಮತ್ತೆ ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಮನ್ಸೂರ್ ಖಾನ್ ಅವರನ್ನು

ನವದೆಹಲಿ: ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಅವರನ್ನು ಈ ವರ್ಷವೂ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಜತೆಗೆ, ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ಸಲ್ಲಿಕೆಯಾಗಿದ್ದ ಅರ್ಜಿ ಕೇಂದ್ರ ಕ್ರೀಡಾ ಸಚಿವಾಲಯದಿಂದ ತಿರಸ್ಕೃತವಾಗಿದೆ. ಏಷ್ಯನ್‌ ಕ್ರೀಡಾಕೂಟದ 800 ಮೀ ಚಾಂಪಿಯನ್‌ ಮಂಜಿತ್‌ ಸಿಂಗ್ ಅವರಿಗೂ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿಲ್ಲ.

ಬೆಳಗಾವಿ: ಮೈತ್ರಿ ಸರಕಾರದ ಪತನಕ್ಕೆ ಕಾರಣರಾದ ಶಾಸಕ ಮಹೇಶ್ ಕುಮಟಳ್ಳಿ ವಿರುದ್ಧ ಕ್ಷೇತ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಥಣಿ ವಿಧಾನಸಭಾ ಕ್ಷೇತ್ರದ ಮತದಾರರು ಕುಮಟಳ್ಳಿಗೆ ಮತ್ತೊಮ್ಮೆ ಗೆದ್ದು ಶಾಸಕರಾಗಿ ತೋರಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದರ ಮೂಲಕ ಶಾಸಕರಿಗೆ ನೇರ ಸವಾಲು ಹಾಕಿದ್ದಾರೆ. ಅತೃಪ್ತ ಶಾಸಕರ ಗುಂಪಿನಲ್ಲಿ ಆರಂಭದಿಂದಲೂ ಗುರುತಿಸಿಕೊಳ್ಳುತ್ತಾ, ರಮೇಶ

ಮಂಗಳೂರು : ದಕ್ಷಿಣ ಕನ್ನಡ ಮೂಲದ ಯುವಕ ಸಂದೇಶ್ ಶೆಟ್ಟಿ (30) ಕತಾರ್ ನಲ್ಲಿ ಕಂಪ್ರೆಶರ್ ಸಿಡಿದು ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಪುಂಜಾಲಕಟ್ಟೆ ಸಮೀಪದ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಪುರಿಯ ನಿವಾಸಿ ಗಣೇಶ್ ಶೆಟ್ಟಿ – ವಾರಿಜಾ ಶೆಟ್ಟಿ ದಂಪತಿ ಕೊನೆಯ ಪುತ್ರ ಸಂದೇಶ್ ಉದ್ಯೋಗ ನಿಮಿತ್ತ ಕತಾರ್

ಹಾಸನ: ಕಡಿಮೆ ವೇತನ ನೀಡುತ್ತಿರುವುದಾಗಿ ಆರೋಪಿಸಿ ಗಾರ್ಮೆಂಟ್ಸ್ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ ಘಟನೆ ಹಾಸನದಲ್ಲಿ ಬುಧವಾರ ನಡೆದಿದೆ. ಪ್ರತಿಭಟನಾ ನಿರತ ನೌಕರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹಾಸನದ ಹಿಮತ್ ಸಿಂಕಾ ಗಾರ್ಮೆಂಟ್ಸ್ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ ಪರಿಣಾಮ ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿಚಾರ್ಜ್ ನಡೆಸಿದ್ದು,

ದಿನಾಲ್ಕು ತಿಂಗಳುಗಳ ಹಿಂದೆ ರಚನೆಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರಕಾರ ಬಹುಮತ ಸಾಬೀತು ಪಡಿಸಲಾಗದೆ ಬಿದ್ದು ಹೋಗಿದೆ. ಅಧಿಕಾರ ಸ್ವೀಕರಿಸಿದಂದಿನಿಂದಲೂ ಒಂದಲ್ಲ ಒಂದು ವಿವಾದಗಳಿಗೆ ಸಿಲುಕುತ್ತಲೇ ಇದ್ದ ಈ ಸರಕಾರ ಅಂತಿಮವಾಗಿ ಶಾಸಕರ ಅತೃಪ್ತಿಯಿಂದಲೇ ಪತನಗೊಂಡಿದೆ. ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅತ್ತ ಬಿಜೆಪಿ ಸರಕಾರ

ಮುಂಬೈ:ವಾಣಿಜ್ಯ ಮಹಾನಗರಿ ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದೆ. ನಗರದ ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ ಎಂದು ವರದಿ ತಿಳಿಸಿದೆ. ಲೋಕಲ್ ರೈಲು ಸಂಚಾರ ವಿಳಂಬವಾಗಿದ್ದು ಕಚೇರಿ, ಶಾಲಾ, ಕಾಲೇಜಿಗೆ ತೆಳುವವರು ಪರದಾಡುವಂತಾಗಿದೆ. ದಾದರ್, ವಾಡ್ಲಾ, ಕುರ್ಲಾ, ಸೈಯನ್, ತಿಲಕ್ ನಗರ,

ಬೆ೦ಗಳೂರು:ರೇಸ್ ಕೋರ್ಟ್ ಅಪಾರ್ಟ್ ಮೆಂಟ್ ಬಳಿ ಪ್ರತಿಭಟನಾನಿರತ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ.ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ. ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲು ಸೂಚನೆ ನೀಡಲಾಗಿದೆ.ಇಂದು ಸಂಜೆ 6ಗಂಟೆಯಿಂದ ಜುಲೈ 25ರ ಸಂಜೆ 6ಗಂಟೆವರೆಗೆ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ- ನಗರ