Log In
BREAKING NEWS >
2019ರ ವಿಶ್ವ ಸುಂದರಿ ಪ್ರಕಟ: ಭಾರತದ ಸುಮನ್ ರಾವ್ ದ್ವಿತೀಯ ರನ್ನರ್ ಅಪ್....ಫಾಸ್ಟ್ ಟ್ಯಾಗ್ ಕಡ್ಡಾಯ: ಲಾಸ್ಟ್ ಸ್ಟಾಪ್ ಬದಲಾಯಿಸಿದ ಖಾಸಗಿ ಬಸ್ ಗಳು...

ಮುಂಬೈ: ಅಪಾರ್ಟ್‌ಮೆಂಟ್‌ನಿಂದ ಜಿಗಿದು ನಟಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಮಹಾರಾಷ್ಟ್ರದ ಒಶಿವಾರಾದಲ್ಲಿ ಪರ್ಲ್ ಪಂಜಾಬಿ ನಟಿ ಹಾಗೂ ಮಾಡೆಲ್ ಆಗಿದ್ದು ಬಾಲಿವುಡ್ ಗೆ ಎಂಟ್ರಿ ಕೊಡಲು ಪ್ರಯತ್ನಿಸುತ್ತಿದ್ದರು. ಆದರೆ ಯಾವುದೇ ಅವಕಾಶಗಳು ಸಿಗದಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ನಟಿ ಪರ್ಲ್ ಪಂಜಾಬಿ ಮಾನಸಿಕವಾಗಿ ನೊಂದಿದ್ದಳು. ಅಲ್ಲದೇ ಪದೇ

ಬೆಂಗಳೂರು: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲ ಮೋಹನ್ ಲಿಂಬಿಕಾಯಿ ಅವರನ್ನು ನೇಮಕ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಗೋಕುಲ ರಸ್ತೆ ನಿವಾಸಿ ಮೋಹನ ಆ.ಲಿಂಬಿಕಾಯಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ

ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಸಚಿವ ಪಿ ಚಿದಂಬರಂ ಸೆ.02 ರ ವರೆಗೆ ಸಿಬಿಐ ವಶದಲ್ಲೇ  ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ. ಆ.21 ರಂದು ಸಿಬಿಐ ನಿಂದ ಬಂಧನಕ್ಕೊಳಗಾಗಿದ್ದ ಚಿದಂಬರಂ ಗೆ ಆ.30ರ ವರೆಗೆ ಸಿಬಿಐ ಕಸ್ಟಡಿ ವಿಧಿಸಲಾಗಿತ್ತು. ಈಗ ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ಕೋರ್ಟ್ ಎದುರು ಹಾಜರುಪಡಿಸಲಾಗುತ್ತದೆ.

ಬೆಂಗಳೂರು: ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯವಿಲ್ಲ ಎಂಬ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ರವಿ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಡಧ್ವಜವನ್ನು ಸಾಂಸ್ಕೃತಿಕವಾಗಿ ಬಳಸಲು ಅವಕಾಶವಿದೆಯೇ ಹೊರತು ಸಾಂವಿಧಾನಾತ್ಮಕವಾಗಿ ಬಳಸಲು ಸಾಧ್ಯವಿಲ್ಲ. ಇಡೀ

ಬೆಂಗಳೂರು: ನವದೆಹಲಿಯ ಮನೆಗಳಲ್ಲಿ 8 ಕೋಟಿಗೂ ಹೆಚ್ಚು ಮೌಲ್ಯದ ಅನಧಿಕೃತ ನಗದು ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೆಮೋ ಅನ್ನು  ಹೈಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಇಡಿ ಅಧಿಕಾರಿಗಳು, ಶುಕ್ರವಾರ

ನೆಲ್ಲೂರು: ಜನಪ್ರಿಯ ಟಾಲಿವುಡ್ ಹೀರೋ ರಾಮ್ ಚರಣ್ ಅವರು ಸುಲ್ಲೂರುಪೇಟ ಬಳಿಯ ಪಿಂಡಿಪಲೆಂನಲ್ಲಿ ಗುರುವಾರ ಬೃಹತ್ ಚಿತ್ರಮಂದಿರವನ್ನು ಉದ್ಘಾಟಿಸಿದರು. ಜನಪ್ರಿಯ ಚಲನಚಿತ್ರ ನಿರ್ಮಾಣ ಸಂಸ್ಥೆ, ಯುವಿ ಕ್ರಿಯೇಷನ್ಸ್ ಮಲ್ಟಿಪ್ಲೆಕ್ಸ್ ಥಿಯೇಟರ್ ಅನ್ನು 40 ಕೋಟಿ ರೂ ವೆಚ್ಚದಲ್ಲಿ  ಈ ಥಿಯೇಟರ್ ನಿರ್ಮಿಸಿದ್ದು,. ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಇದು ದೇಶದಲ್ಲೇ ಅತಿ ದೊಡ್ಡದೆಂಬ ಹೆಮ್ಮೆಗೆ

ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಸಿಖ್ ಯುವತಿಯನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿ ಮುಸ್ಲಿಂ ಯುವಕನ ಜೊತೆ ವಿವಾಹ ಮಾಡಿರುವ ಘಟನೆ ಲಾಹೋರ್ ನ ನಾನ್ಕಾನಾ ಸಾಹೀಬ್ ಪ್ರದೇಶದಲ್ಲಿ ನಡೆದಿದೆ. ಜಗ್ ಜಿತ್ ಕೌರ್ ಎಂಬ ಯುವತಿಯನ್ನು ಬಲವಂತವಾಗಿ ಮತಾಂತರಗೊಳಿಸಿ ಆಕೆಯ ಹೆಸರನ್ನು ಆಯೇಷಾ ಎಂದು ಮರುನಾಮಕರಣ ಮಾಡಿದ ವಿಡಿಯೋವೊಂದು ಸಾಮಾಜಿಕ

ಬೆಂಗಳೂರು: ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಸಮನ್ಸ್ ಪ್ರಶ್ನಿಸಿ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು ಈ ಮೂಲಕ ಇಡಿ ವಿಚಾರಣೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ಇಡಿ ಜಾರಿಗೊಳಿಸಿದ್ದ ಸಮನ್ಸ್ ಅನ್ನು ರದ್ದು