Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ನವದೆಹಲಿ: 2009ನೇ ಸಾಲಿನ ಐಎಎಸ್ ಟಾಪರ್ ಹಾಗೂ ಜಮ್ಮು ಮತ್ತು ಕಾಶ್ಮೀರದ ರಾಜಕಾರಣಿ ಶಾ ಫೈಸಲ್ ಅವರನ್ನು ಬುಧವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ವಿದೇಶಕ್ಕೆ ತೆರಳುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್ ಪಕ್ಷದ ಅಧ್ಯಕ್ಷ ಶಾ ಫೈಸಲ್ ಅವರನ್ನ ಇಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಶ್ರಾವಣ ಮಾಸದ ಏಕಾದಶಿಯ೦ದು ಲಕ್ಷತುಳಸಿ ಅರ್ಚನೆಯನ್ನು ನಡೆಸಲಾಯಿತು.

ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಬುಧವಾರದ೦ದು ಋಗುಪಾಕರ್ಮ(ಸುತ್ತಾಪುನ್ನವ್)ಪ್ರಯುಕ್ತ ಶ್ರೀದೇವರಿಗೆ ಜನ್ನಿವಾರವನ್ನು ಧಾರಣೆ ಮಾಡಲಾಯಿತು.ನ೦ತರ ಸಮಾಜ ಬಾ೦ಧವರು ತಮ್ಮ ತಮ್ಮ ಪುರೋಹಿತರ ಉಪಸ್ಥಿತಿಯಲ್ಲಿ ಜನ್ನಿವಾರವನ್ನು ಧಾರಣೆ ಮಾಡಿಕೊ೦ಡರು.

ಬೆಂಗಳೂರು: ರಾಜ್ಯದಲ್ಲಿ ಭಾರೀ ಪ್ರವಾಹ ಉಂಟಾಗಿರುವ ಮಧ್ಯೆಯೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳು ಸಿದ್ಧಗೊಂಡಿದ್ದು, ಎಲ್ಲಾ ಅಗತ್ಯ ಪೂರ್ವ ತಯಾರಿಗಳನ್ನು ಕೈಗೊಳ್ಳಲಾಗಿದೆ. ರಾಜ್ಯ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಸಚಿವ ಸಂಪುಟ ವಿಸ್ತರಣೆಯಾಗದ

ಕೊಪ್ಪಳ: ತುಂಗಭದ್ರಾ ಆಣೆಕಟ್ಟಿನ ಎಡದಂಡೆ ಮೆಲ್ಮಟ್ಟದ ಒಡೆದಿರುವ ಮುಖ್ಯ ಕಾಲುವೆಯ ಗೇಟ್ ದುರಸ್ತಿಗೆ ಇಂದು ನಾಲ್ಕು ತಂಡಗಳು ಆಗಮಿಸಿವೆ. ಕಿರ್ಲೋಸ್ಕರ್, ಜಿಂದಾಲ್, ನೀರಾವರಿ ತಜ್ಞರ ತಂಡ, ಮತ್ತು ಬೆಳಗಾವಿಯ ಅಕ್ಷತಾ ಅಂಡರ್ ವಾಟರ್ ಸರ್ವಿಸ್ ತಂಡಗಳು ಆಗಮಿಸಿವೆ. ಮೇಲ್ಮಟ್ಟದ ಗೇಟ್ ಒಳಗೆ ಮುಳುಗು ತಜ್ಞ ಚನ್ನಪ್ಪ ಅಚರಿಂದ ಕಾರ್ಯಾಚರಣೆ ನಡೆಯುತ್ತಿದೆ. ಆಮ್ಲಜನಕ

ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ವೀರ ಚಕ್ರ’ ಪುರಸ್ಕಾರ ನೀಡಿ ಗೌರವಿಸಲಾಗುವುದು. ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದಿಂದ ಭಾರತಕ್ಕೆ ಹಸ್ತಾಂತರಗೊಂಡ ಬಳಿಕ ಅಭಿನಂದನ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ ಹಾಗೂ ಅವರನ್ನು ವಿಸ್ತೃತ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅಭಿನಂದನ್ ಅವರು ಎಲ್ಲಾ