Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಲಖನೌ: ಬಿಜೆಪಿ ಮುಖಂಡ ಚಿನ್ಮಯಾನಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಸಂತ್ರಸ್ಥೆ ಕಾನೂನು ವಿದ್ಯಾರ್ಥಿನಿಯನ್ನು ಎಸ್ಐಟಿ ಅಧಿಕಾರಿಗಳು ಸುಲಿಗೆ ಆರೋಪದಡಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ವಿಚಾರಣೆಗೆ ಒಳಪಡಿಸಿದ್ದ ವಿಶೇಷ ತನಿಖಾ ದಳ ಅಧಿಕಾರಿಗಳು ಇಂದು ಸುಲಿಗೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದ

ಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮಕ್ಕೆ ಅಬಕಾರಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಸುಮಾರು 28 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಮಂಜಪ್ಪ ಎಂಬುವವರ ಜಮೀನಿನಲ್ಲಿ ಅಡಕೆ ಹಾಗೂ ಹತ್ತಿ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದು ಬೆಳಕಿಗೆ ಬಂದಿದೆ. ಅಬಕಾರಿ ಉಪಾಧೀಕ್ಷಕ ಧರ್ಮಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಗಿಡಗಳು ಹಾಗೂ

ನವದೆಹಲಿ:ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಕೇಂದ್ರ ಸರಕಾರ ಘೋಷಿಸಿದ ಒಂದು ತಿಂಗಳ ಬಳಿಕ ಇದೀಗ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್ ಪ್ರದೇಶಕ್ಕೆ ಜನಸಾಮಾನ್ಯರಿಗೂ ಪ್ರವೇಶ ನೀಡಲು ಸಿದ್ಧತೆ ನಡೆಸಿದೆ ಎಂದು ವರದಿ ತಿಳಿಸಿದೆ. ಜಗತ್ತಿನ ಅತ್ಯಂತ ಎತ್ತರದ ಯುದ್ಧಭೂಮಿ, ಅಪಾಯಕಾರಿ ಹವಾಮಾನದಲ್ಲಿ ಭಾರತೀಯ ಸೇನೆ

ನವದೆಹಲಿ: ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುವ ಮೂಲಕ ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿರುವ ಕೇಂದ್ರ ಸಾರಿಗೆ ಸಚಿವಾಲಯ ಇದೀಗ ಹಳೆಯ ವಾಹನಗಳ ಮೇಲೆ ನಿಷೇಧ ಹೇರಲು ಗಂಭೀರ ಚಿಂತನೆಯಲ್ಲಿ ತೊಡಗಿದೆ. ಹೌದು.. ಮೂಲಗಳ ಪ್ರಕಾರ ಪರಿಸರದ ಮೇಲೆ ಪರಿಣಾಮ ಬೀರುವ ಹಳೆಯ ವಾಹನಗಳನ್ನು ನಿಷೇಧಿಸುವ ಕುರಿತು ಕೇಂದ್ರ ಸಾರಿಗೆ

ನವದೆಹಲಿ: ನಿವೃತ್ತಿಯ ಅಂಚಿನಲ್ಲಿರುವ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಇದು ಕಹಿ ಸುದ್ದಿ ಮತ್ತು ಯುವ ಜನತೆಗೆ ಸಿಹಿ ಸುದ್ದಿ ಎನಿಸಬಹುದು. ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡುವ ಪ್ರಸ್ತಾವನೆಯಲ್ಲಿದೆ. ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 33 ವರ್ಷ ಸೇವೆ ಪೂರೈಸಿದ ಅಥವಾ 60 ವರ್ಷಕ್ಕೆ ತಲುಪಿದವರ, ಯಾವುದು ಮೊದಲು

ಮುಂಬೈ: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ಬ್ಯಾಂಕ್ ಗ್ರಾಹಕರಲ್ಲಿ ಹಾಗೂ ಉದ್ಯಮ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಆರ್ ಬಿಐ ಸೂಚನೆಯ ಪ್ರಕಾರ, ಯಾವುದೇ ಉಳಿತಾಯ, ಚಾಲ್ತಿ ಖಾತೆ ಮತ್ತು ಇತರೆ ಠೇವಣಿ ಖಾತೆಗಳಿಂದ ಗ್ರಾಹಕರು ಗರಿಷ್ಠ 1

ಬೆಂಗಳೂರು: ಪೊಗರು ಚಿತ್ರದ ಶೂಟಿಂಗ್ ಮುಗಿಸಿ ಬಳ್ಳಾರಿಯಿಂದ ವಾಪಸ್ಸಾಗುತ್ತಿದ್ದಾಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಳ್ಳಾರಿಯಿಂದ ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಮಾರ್ಗದ ಮಧ್ಯೆ ಲಾರಿಯೊಂದು ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಕಾರಿನ ಚಾಲಕನಿಗೆ ಮಾತ್ರ ಸಣ್ಣಪುಟ್ಟ

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ನಡೆದಿದೆ ಎನ್ನಲಾಗಿದ್ದ ಫಿಕ್ಸಿಂಗ್ ಈಗ ಅಧಿಕೃತವಾಗಿದೆ. ಇತ್ತೀಚೆಗೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ಅಶ್ಪಾಕ್ ಆಲಿ ಫಿಕ್ಸಿಂಗ್ ನಿಂದ ಕೋಟ್ಯಾಂತರ ರೂ. ಗಳಿಸಿದ್ದ ಎಂದು ವರದಿಯಾಗಿದೆ. ಬಿಸಿಸಿಐ ನ ಮಾಹಿತಿ ಮೇರೆಗೆ ಬೆಂಗಳೂರು ಸಿಸಿಬಿ ಪೊಲೀಸರು ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಕ ಅಶ್ಪಾಕ್ ಆಲಿಯನ್ನು

ಛತ್ತೀಸ್ ಗಢ್: ರೈಲ್ವೆ ಹಳಿ ಕಾಮಗಾರಿ ಕೆಲಸದಲ್ಲಿ ತೊಡಗಿದ್ದ ಡೀಸೆಲ್ ಟ್ಯಾಂಕರ್ ಅನ್ನು ನಕ್ಸಲೀಯರು ಸ್ಫೋಟಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಕಾನ್ಕೇರ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ಯೋಧರು ಪ್ರದೇಶಕ್ಕೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಅಡಗಿ ಕುಳಿತಿದ್ದ ನಕ್ಸಲೀಯರ ತಂಡ ಗುಂಡಿನ

ಕಲಬುರಗಿ: ಪೊಲೀಸ್ ಇಲಾಖೆಗೆ ಈಗಾಗಲೇ 6,000 ಪೇದೆಗಳ ನೇಮಕಾತಿ ಪ್ರಗತಿಯಲ್ಲಿದ್ದು, ಎರಡು ವರ್ಷದೊಳಗೆ 16,000 ಪೊಲೀಸ್ ಪೇದೆಗಳು ಹಾಗೂ 630 ಪಿಎಸ್ಐಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ನಡೆದ ಪಿಎಸ್ಐ ಹಾಗೂ ಆರ್​​​ಎಸ್ಐ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,