Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಸುರತ್ಕಲ್: ಖಾಸಗಿ ಬಾರ್ ಒಂದರಲ್ಲಿ ಯುವಕನೋರ್ವನನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ಗುಡ್ಡೆಕೊಪ್ಲ ನಿವಾಸಿ ಸಂದೇಶ್(30) ಎಂಬಾತ ಮೃತ ದುರ್ದೈವಿ.  ಸುರತ್ಕಲ್ ಜಂಕ್ಷನ್ ಬಳಿಯಿರುವ ಖಾಸಗಿ ಬಾರ್ ಮುಂಭಾಗ ಶುಕ್ರವಾರ ರಾತ್ರಿ 11 ಗಂಟೆಗೆ ಈ ಕೃತ್ಯ ನಡೆದಿದೆ. ಹಳೆಯ ಗೆಳೆಯರ ನಡುವೆ ಉಂಟಾದ  ಭಿನ್ನಾಭಿಪ್ರಾಯವೇ ಈ ಘಟನೆಗೆ

ಹೈದರಾಬಾದ್​: ನಿರ್ಭಯಾ ಪ್ರಕರಣದ ಬಳಿಕ ಇಡೀ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿರುವ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ವಕೀಲರ ಸಂಘ ಸಂಚಲನಾತ್ಮಕ ನಿರ್ಧಾರ ಕೈಗೊಂಡಿದೆ. ತೆಲಂಗಾಣದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗಳ ವಿರುದ್ಧ ಸಾಮಾಜಿಕ

ಬೆಂಗಳೂರು:  2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ  ಪ್ರಕಟಿಸಿದೆ. ಮಾರ್ಚ್ 27ರಿಂದ ಏಪ್ರಿಲ್ 9ರ ತನಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ನಡೆಯಲಿದ್ದು, ಈ ಸಂಬಂಧ ಅಧಿಕೃತ ವೇಳಾಪಟ್ಟಿಯನ್ನು ಮಂಡಳಿ ತನ್ನ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ. ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30/45ರವೆಗೆ ಮತ್ತು

ಮಹಾರಾಷ್ಟ್ರ: ಮಹಾರಾಷ್ಟ್ರದ ಧುಲೆ ಜಿಲ್ಲೆಯ ವಿಂಚೂರ್ ಗ್ರಾಮದಲ್ಲಿ ಪಿಕಪ್ ವಾಹನವೊಂದು ಸೇತುವೆಯಿಂದ ಕೆಳಕ್ಕೆ ಉರುಳಿ 7 ಜನ ಸಾವನ್ನಪ್ಪಿದ್ದು , 24 ಮಂದಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ 12.30 ರ ವೇಳೆಗೆ ನಡೆದಿದೆ. ಅಪಘಾತಕ್ಕೆ ಒಳಗಾದ 24 ಜನರಲ್ಲಿ ಐವರ ಸ್ಥಿತಿ ಗಂಬೀರವಾಗಿದೆ ಎಂದು ವರದಿಯಾಗಿದೆ. ವಿಂಚೂರ್​

ಬೆಂಗಳೂರು: ಡಿಸೆಂಬರ್ 12ಕ್ಕೆ ನಡೆಯುವ ರಾಜ್ಯಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ. ರಾಮಮೂರ್ತಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಇಂದು ವಿಧಾನಸೌಧಕ್ಕೆ ಕುಟುಂಬ ಸಮೇತರಾಗಿ ಆಗಮಸಿದ ಕೆ.ಸಿ.ರಾಮಮೂರ್ತಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ರಾಮಮೂರ್ತಿಗೆ ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಸಚಿವ

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಪ್ರಚಾರಕ್ಕಾಗಿ ಚಂದನವನದ ನಟ ನಟಿಯರು ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ. ಸ್ಯಾಂಡಲ್‍ವುಡ್ ನಟ ನಟಿಯರ ಜೊತೆಗೆ ಟಾಲಿವುಡ್‍ನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಸಹ ಸಾಥ್ ನೀಡಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ನೆರೆಯ ಆಂದ್ರಪ್ರದೇಶದ

ಕೊಲಂಬೋ: ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಶ್ರೀಲಂಕಾ ಉತ್ತರ ಪ್ರಾಂತ್ಯದ ಗವರ್ನರ್ ಆಗಲಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಈ ಹುದ್ದೆ ಸ್ವೀಕರಿಸುವಂತೆ ಅಧ್ಯಕ್ಷ ಗೊಟಬಯಾ ರಾಜಪಕ್ಸ ಅವರು ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದ್ದು, ಮುತ್ತಯ್ಯ ಮುರಳೀಧರನ್ ಅವರು ಉತ್ತರೀಯ ಪ್ರಾಂತ್ಯಕ್ಕೆ ರಾಜ್ಯಪಾಲರಾಗುತ್ತಿದ್ದಾರೆ. ಆದರೆ, ಮುರಳೀಧರನ್ ಗವರ್ನರ್ ಆಗುವುದಕ್ಕೆ ಸ್ಥಳೀಯ ತಮಿಳರು

ಬಾಗ್ದಾದ್: ಉತ್ತರ ಇರಾಕ್ ನಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಇರಾಕ್ ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ನಿರುದ್ಯೋಗ, ಆಂತರಿಕ ಕಲಹ, ಭಯೋತ್ಪಾದನೆ, ಸಾಮಾಜಿಕ ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೆಲ ಸಂಘಟನೆಗಳು

ಲಂಡನ್:ಸೂಸೈಡ್ ಬಾಂಬರ್ ನಂತೆ ನಕಲಿಯಾಗಿ ವೇಷಧರಿಸಿದ್ದ ಶಸ್ತ್ರಧಾರಿ ವ್ಯಕ್ತಿಯೊಬ್ಬ ಲಂಡನ್ ಸೇತುವೆ ಮೇಲೆ ಇಬ್ಬರನ್ನು ಹತ್ಯೆಗೈದಿದ್ದು, ಕ್ಷಿಪ್ರ ಕಾರ್ಯಾಚರಣೆಯಲ್ಲಿ ಲಂಡನ್ ಪೊಲೀಸರ ಎನ್ ಕೌಂಟರ್ ಗೆ ಶಸ್ತ್ರಧಾರಿ ವ್ಯಕ್ತಿ ಬಲಿಯಾಗಿರುವುದಾಗಿ ವರದಿ ತಿಳಿಸಿದೆ. ಈ ಭಯೋತ್ಪಾದನಾ ದಾಳಿಯಲ್ಲಿ ಹಲವರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ. ಕಳೆದ ಎರಡು ವರ್ಷಗಳ ಹಿಂದೆ ಮೂವರು

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿ ಕಬಕ ಕಲಂದಡ್ಕ ಎಂಬಲ್ಲಿ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮಾನ್ಯ ಪಶ್ಚಿಮ ವಲಯ