Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಪುಟಿಯಾನ್(ಚೀನಾ): ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಕಿರಿಯರ ವಿಭಾಗದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಮನು ಭಾಕರ್ ಚಿನ್ನದ ಪದಕ ಗಳಿಸಿದ್ದಾರೆ. 17 ವರ್ಷದ ಮನು ಭಾಕರ್ 244.7 ಪಾಯಿಂಟ್ ಗಳಿಸಿ ಚಿನ್ನದ ಪದಕಗೆ ಮುತ್ತಿಟ್ಟರೆ, ಭಾರತದ ಮತ್ತೊಬ್ಬ ಆಟಗಾರ್ತಿ ಯಶಸ್ವಿನಿ ಸಿಂಗ್ ದೆಸ್ವಾಲ್ 6 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಸರ್ಬಿಯಾದ

ಪಣಜಿ: ಕರ್ನಾಟಕ್ಕೆ ಬಳಸಾ-ಬಂಡೂರಿ (ಮಹದಾಯಿ) ಯೋಜನೆ ಕೈಗೆತ್ತಿಕೊಳ್ಳಲು ಇತ್ತೀಚೆಗಷ್ಟೇ ತಾನೇ ನೀಡಿದ್ದ ಅನುಮೋದನೆಯ ಮರುಪರೀಶೀಲನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಗೋವಾ ಮುಖ್ಯಮಂತ್ರಿಗಳಿಗೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜವಡೇಕರ್ ಅವರು ಪತ್ರ ಬರೆದಿದ್ದು, ಪತ್ರದಲ್ಲಿ ಯೋಜನೆಗೆ ನೀಡಲಾಗಿದ್ದ ಅನುಮತಿಯನ್ನು ಮರುಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕಳಸಾ-ಬಂಡೂರಿ ಯೋಜನೆಗೆ ಪರಿಸರ ಅನುಮೋದನೆ

ಬೆಂಗಳೂರು: ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಭಿಲಾಷ್​, ಗೋಪಿ ಎಂಬ ಯುಕವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದು, ಸುಮನ್ ಅಲಿಯಾಸ್ ಚಿಟ್ಟೆ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮಲ್ಲೇಶ್ವರಂ ಕೋದಂಡರಾಮಪುರದಲ್ಲಿ ಈ ಘಟನೆ ನಡೆದಿದೆ. ಪಾರ್ಟಿ ಮುಗಿಸಿ ಬಂದ ಅಭಿಲಾಷ್, ಗೋಪಿ ದುರ್ಮರಣ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದ್ದ ಜೋಡಿಕೊಲೆ ಆರೋಪಿಯನ್ನು ಕೇವಲ 24 ಗಂಟೆಗಳಲ್ಲಿ ಪೋಲೀಸರು ಬಂಧಿಸಿದಾರೆ. ಪುತ್ತೂರಿನ ಕುರಿಯ ಎಂಬಲ್ಲಿ ಮಂಗಳವಾರ ನಡೆದಿದ್ದ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆ ಪರಕರಣ ಸಂಬಂಧ ಅದೇ ಪ್ರದೇಶದ ಕಟ್ಟತ್ತಾರು ನಿವಾಸಿ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ನ. 18ರಂದು ಸಂಭ್ರಮ ಸಡಗರದೊಂದಿಗೆ ಜರಗಿತು. ದೀಪೋತ್ಸವದಲ್ಲಿ ಊರ-ಪರವೂರ ಅಸಂಖ್ಯಾತ ಭಕ್ತರು ಭಾಗವಹಿಸಿ ಪುನೀತರಾದರು. ಶ್ರೀ ವೆಂಕಟರಮಣ ದೇವರ ಮೂರ್ತಿಯನ್ನು ಪಲ್ಲಕ್ಕಿ ಹಾಗೂ ಚಪ್ಪರ ಶ್ರೀನಿವಾಸ ದೇವರನ್ನು ಬಂಗಾರದ ಮಂಟಪದಲ್ಲಿ ಕುಳ್ಳಿರಿಸಿ, ರಥಬೀದಿಯಾಗಿ ಅನಂತ ಶಯನದಿಂದ ವನಭೋಜನಕ್ಕೆ ಉತ್ಸವ ಮೂಲಕ

ಯಾದಗಿರಿ :  ಯೂರಿಯಾ ತುಂಬಿದ್ದ ಗೂಡ್ಸ್  ರೈಲು ವೊಂದು ನಿಲ್ದಾಣದ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಯೂರಿಯಾ ತುಂಬಿದ್ದ ಗೂಡ್ಸ್ ರೈಲು  ನಿಲ್ದಾಣದ ತಡೆಗೋಡೆಗೆ ಡಿಕ್ಕಿ ಹೊಡಿದಿದೆ. ರೈಲಿನ ರಭಸಕ್ಕೆ   ಗೋಡೆಯ ಪಕ್ಕದಲ್ಲಿದ್ದ ಚಿಲ್ಲರೆ ವಾಣಿಜ್ಯ ಮಳಿಗೆ ಸ್ಥಳದಿಂದ 5-6 ಅಡಿ ಸರಿದಿದೆ.  ಘಟನೆಯಲ್ಲಿ

ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ದೆಹಲಿ ಹೈಕೋರ್ಟ್ ಜಾಮೀನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಬಗ್ಗೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಜಾಮೀನು ಅರ್ಜಿ

ನವದೆಹಲಿ:ಶಿರೋಮಣಿ ಅಕಾಲಿ ದಳದ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದ ಬಳಿಕ ಕಾಲುಗಳನ್ನು ಕತ್ತರಿಸಿ ಹಾಕಿರುವ ಬರ್ಬರ ಘಟನೆ ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 51 ವರ್ಷದ ದಲ್ಬೀರ್ ಸಿಂಗ್ ಧಿಲ್ವಾನ್ ಹತ್ಯೆಯ ಹಿಂದೆ ರಾಜಕೀಯ ಇದೆ ಎಂಬ ಆರೋಪವನ್ನು ಬಾಟ್ಲಾ ಹಿರಿಯ ಪೊಲೀಸ್

ನವದೆಹಲಿ: ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ 961 ವಾರ್ಡ್ ಗಳಲ್ಲಿ, ಬಿಜೆಪಿ 737 ವಾರ್ಡ ಗಳಲ್ಲಿ ಜಯಗಳಿಸಿದೆ ಎಂದು ವರದಿ ತಿಳಿಸಿದೆ. ಕಳೆದ ವಾರ ರಾಜಸ್ಥಾನದ ಸ್ಥಳೀಯ ಸಂಸ್ಥೆಗೆ ಚುನಾವಣೆ ನಡೆದಿತ್ತು. ಮಂಗಳವಾರ ಪ್ರಕಟವಾಗಿರುವ ಫಲಿತಾಂಶದ ಪ್ರಕಾರ ಕಾಂಗ್ರೆಸ್ ಪಕ್ಷ 49

ನವದೆಹಲಿ:ಹಾಸ್ಟೆಲ್ ಶುಲ್ಕವನ್ನು ಮಿತಿಮೀರಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಂಗಳವಾರ ಜವಾಹರಲಾಲ್ ನೆಹರು ಯೂನಿರ್ವಸಿಟಿ(ಜೆಎನ್ ಯು) ವಿದ್ಯಾರ್ಥಿಗಳ ಮೇಲೆ ಎರಡು ಪ್ರಕರಣ ದಾಖಲಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕೃಷ್ಣಗಢ್ ಪೊಲೀಸ್ ಠಾಣೆ ಹಾಗೂ ಲೋಧಿ ಕಾಲೋನಿ ಪೊಲೀಸ್