Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಇಸ್ಲಾಮಾಬಾದ್: ಮದುವೆ ಮನೆಯಿಂದಲೇ ಹಿಂದೂ ಯುವತಿಯನ್ನು ಅಪಹರಿಸಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಮಾಟಿಯಾರಿ ಜಿಲ್ಲೆಯಲ್ಲಿ ನಡೆದಿದ್ದು, 24ವರ್ಷದ ಹಿಂದು ಯುವತಿ ಅಪಹರಣಕ್ಕೊಳಗಾಗಿದ್ದು, ಆಕೆಯನ್ನು ಇಸ್ಲಾಂಗೆ ಮತಾಂತರಿಸಿ ಮುಸ್ಲಿಂ ಯುವಕನೊಬ್ಬ ವಿವಾಹವಾಗಿರುವುದಾಗಿ ವರದಿ ತಿಳಿಸಿದೆ. ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯರು, ಮಹಿಳೆಯರ ಅಪಹರಣ ಮತ್ತು ಮತಾಂತರ ದೊಡ್ಡ ಪಿಡುಗಾಗಿದೆ ಎಂದು ವರದಿ

ನವದೆಹಲಿ: ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿ ಸೂಚಿಸಿದೆ. ಯಾರನ್ನಾದರೂ ಗಲ್ಲಿಗೇರಿಸುತ್ತಿದ್ದಾರೆಂದೆ ಅದಕ್ಕಿಂದಲೂ ತುರ್ತು ವಿಚಾರ ಮತ್ತೊಂದಿಲ್ಲ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠ, ಮರಣದಂಡನೆ

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ. ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ

ಧಾರವಾಡ: ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬಸವೇಶ್ವರ ಸ್ವಾಮೀಜಿ ಮತ್ತು ಕಾರು ಚಾಲಕ ಮೃತಪಟ್ಟಿದ್ದರೆ ಮತ್ತೊಂದು ಕಾರಿನಲ್ಲಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಸಪ್ಪ ಪೂಜಾರ, ಸಿದ್ದಪ್ಪ

ಉಡುಪಿ :ಕರಾವಳಿಯು ರಾಜ್ಯದ ಅರ್ಥಿಕತೆಗೆ ಹೆಚ್ಚಿನ ಪುಷ್ಠಿ ನೀಡುವ ವಲಯವಾಗಿದ್ದು, ಈ ಪ್ರದೇಶದ ಸಮಗ್ರ ಅಭಿವೃಧ್ದಿಗೆ ಚಿಂತನೆ ನಡೆದಿದೆ ಎಂದು ರಾಜ್ಯದ ಗೃಹ ಮತ್ತು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಭಾನುವಾರದ೦ದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ

ಧಾರವಾಡ : ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಮರವೇರಿದ್ದ ಕೈದಿಯೊಬ್ಬ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಚೇತನ್ ಕುಮಾರ್ ಅಲಿಯಾಸ್ ಮೇಕೆ (28) ಮರದಿಂದ ಬಿದ್ದು ಕೆಳಗೆ ಬಿದ್ದು ಸಾವನ್ನಪ್ಪಿದ ಕೈದಿ. ಬಳ್ಳಾರಿ ಜೈಲಿನಲ್ಲಿದ್ದ ಈತ ಇತ್ತೀಚೆಗಷ್ಟೇ ಧಾರವಾಡ ಜೈಲಿಗೆ ವರ್ಗವಾಗಿದ್ದ. ಆದರೆ ಆತ ಯಾವುದೋ ಕಾರಣಕ್ಕೆ ಕಾರಾಗೃಹದೊಳಗಿದ್ದ ಮರವೇರಿ ಪ್ರತಿಭಟನೆ

ನವದೆಹಲಿ: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಸಂಭ್ರಮವನ್ನು ಆಚರಿಸುತ್ತಿರುವ ನಡುವಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರ ಅವಂತಿಪೋರಾದಲ್ಲಿ ಜೈಷ್ಇಮೊಹಮ್ಮದ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿದಂತೆ ಮತ್ತಿಬ್ಬರು ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ

ನವದೆಹಲಿ: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿ, ಬಹು ನಿರೀಕ್ಷಿತ ಪರೇಡ್'ಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಬ್ರೆಜಿಲ್ ಅಧ್ಯಕ್ಷ ಬೊಲ್ಸೊನಾರೋ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಬೊಲ್ಸೊನಾರೋ ಅವರನ್ನು ರಾಷ್ಟ್ರಪತಿಗಳು ಆತ್ಮೀಯತೆಯಿಂದ ರಾಜ್'ಪಥಕ್ಕೆ ಬರಮಾಡಿಮಾಡಿಕೊಂಡರು. ಇನ್ನು ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಸಿ ಸಲ್ಲಿಸಿದ

ಬೆಂಗೆಳೂರು: ಬಿಬಿಎಂಪಿ ನಗರ ಜಿಲ್ಲೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ 71ನೇ ಗಣರಾಜ್ಯೋತ್ಸವ ನಗರದ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆರಂಭಗೊಂಡಿದ್ದು, ರಾಜ್ಯಪಾಲ ವಜುಭಾಯ್ ವಾಲಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ರಾಜ್ಯಪಾಲ ವಿ.ಆರ್ ವಾಲಾ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ್ದು, ಈ

ಪಡುಬಿದ್ರಿಯ ನ೦ದಿಕೂರಿನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀರಾಜರಾಜೇಶ್ವರಿ ಸಭಾಭವನದಲ್ಲಿ ಭಾನುವಾರ(26-01-2020)ದ೦ದು ನೂತನವಾಗಿ ದಾ೦ಪತ್ಯ ಜೀವನಕ್ಕೆ ಪಾದರ್ಪಣೆಗೈದ ಚಿ.ಮಯೂರ್ ಮತ್ತು ಚಿ.ಸೌ.ಸುಭಾಷಿಣಿ ದ೦ಪತಿಗಳಿಗೆ ಶುಭಕೋರುವ: ಕರವಾಳಿಕಿರಣ ಡಾಟ್ ಕಾ೦ ಬಳಗ ಉಡುಪಿ-ದುಬೈ ಕರಾವಳಿ ಕಿರಣ ಡಾಟ್ ಕಾ೦ ಫ್ರೆ೦ಡ್ಸ್ ಉಡುಪಿ-ದುಬೈ ಶ್ರೀಟಿ.ಜಯಪ್ರಕಾಶ್ ಕಿಣಿ,ಉಡುಪಿ ಶ್ರೀ ವಿಜಯರಾಘವ ರಾವ್ ಮತ್ತು ಶ್ರೀಮತಿ ಸುಧಾ ವಿ. ರಾವ್ ಶ್ರೀ ಅಕ್ಷಯ್ ರಾವ್ ಮತ್ತು