Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ಚೆನ್ನೈ:  ಪೌರತ್ವ ತಿದ್ದುಪಡಿ ಕಾಯ್ದೆ , ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರೋಧಿಸಿ ಇಲ್ಲಿನ ವಾಷರ್ ಮ್ಯಾನ್ ಪೇಟೆಯ ಮಂಡಿ ಸ್ಟ್ರೀಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಕಳೆದ ರಾತ್ರಿ ಲಾಠಿ ಚಾರ್ಜ್ ನಡೆಸಿದ ಬಳಿಕವೂ ಸುಮಾರು 200 ಜನರು ಅಹೋರಾತ್ರಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಮೊದಲಿಗೆ ವಾಷರ್ ಮ್ಯಾನ್ ಪೇಟೆಯ

ಉಡುಪಿ: ಬಿಜೆಪಿ ಯುವ ಮುಖಂಡ ಶೀಂಬ್ರ ಶಶಿಕಾಂತ ಶಿವತ್ತಾಯ ಅಲ್ಪಕಾಲದ ಅಸ್ವಸ್ಥದಿಂದ ಇಂದು ನಸುಕಿನ ಮುಂಜಾನೆ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು. ನಿವತ್ತ ಮುಖ್ಯೋಪಾಧ್ಯಾಯ ನರಸಿಂಹ ಶಿವತ್ತಾಯರ ಸುಪುತ್ತರಾಗಿದ್ದ ಶ್ರೀಯುತರು ಪೆರಂಪಳ್ಳಿ ಯುವಕ‌ಮಂಡಲ ಹಾಗೂ‌ ನವಚೈತನ್ಯ ಯುವಕ‌ ಮಂಡಲ ಶೀಂಬ್ರ ಇದರ ಅಧ್ಯಕ್ಷರಾಗಿ ಉತ್ತಮ ಸಂಘಟನಾತ್ಮಕ ಕಾರ್ಯ ನಿರ್ವಹಿಸಿದ್ದರು.ಪೆರಂಪಳ್ಳಿ ಬಿಜೆಪಿ ಸ್ಥಾನೀಯ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ದುರ್ಘಟನೆ ಬೆಂಗಳೂರು ಹೊರವಲಯ ಆನೇಕಲ್ ನ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ತಿರುಪಾಳ್ಯದಲ್ಲಿ ವರದಿಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಆನೇಕಲ್ ನ ಮರಸೂರು ಗ್ರಾಮದ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ರವಿ ತಿರುಪಾಳ್ಯ ಬಳಿ ಬೈಕ್ ಮೇಲೆ ಬರುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ

ಹುಬ್ಬಳ್ಳಿ: ಭಾರತ ಐದು ಟ್ರಿಲಿಯನ್ ಡಾಲರ್ ಆರ್ಥಿಕ ವ್ಯವಸ್ಥೆ ಹೊಂದಿದ ರಾಷ್ಟ್ರವಾಗಿ ರೂಪುಗೊಳ್ಳಲು ಕರ್ನಾಟಕದಂತಹ ರಾಜ್ಯಗಳ ಪಾಲುದಾರಿಕೆ ಅತ್ಯಂತ ಪ್ರಮುಖವಾಗಿದ್ದು, ದೇಶದ ಅರ್ಥ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡುವಂತಹ ಸಾಮರ್ಥ್ಯ ಕರ್ನಾಟಕಕ್ಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಲವಾಗಿ ಪ್ರತಿಪಾದಿಸಿದ್ದಾರೆ. ನಗರದ ಡೆನಿಸನ್ ಹೋಟೆಲ್ ನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇದೇ

ವಿಜಯವಾಡ: ಇಲ್ಲಿನ ದೇವಸ್ಥಾನದ ಎದುರು ಭಿಕ್ಷೆ ಬೇಡುತ್ತಿದ್ದ 73 ವರ್ಷದ ಅಜ್ಜ ದೇವಸ್ಥಾನಕ್ಕೆ 8 ಲಕ್ಷ ರೂ. ದಾನ ಮಾಡಿದ್ದಾರೆ. ಯದಿ ರೆಡ್ಡಿ ಎಂಬ ಹೆಸರಿನ ಭಿಕ್ಷುಕ ಕಳೆದ 7 ವರ್ಷಗಳಲ್ಲಿ ಒಟ್ಟು 8 ಲಕ್ಷ ರೂ. ದಾನವನ್ನು ಸಾಯಿಬಾಬಾ ದೇವಸ್ಥಾನಕ್ಕೆ ನೀಡಿದ್ದಾರೆ. ಸುಮಾರು 40 ವರ್ಷಗಳ ಕಾಲ ತಳ್ಳುಗಾಡಿಯಲ್ಲಿ ಕೆಲಸ

ಭುಜ್ (ಗುಜರಾತ್): 21ನೇ ಶತಮಾನದಲ್ಲಿ, ಅದರಲ್ಲೂ ಶಿಕ್ಷಣ ನೀಡುವ ಸಂಸ್ಥೆಯಲ್ಲೇ ವಿದ್ಯಾರ್ಥಿನಿಯರ ಮುಟ್ಟಿನ ವಿಚಾರಕ್ಕೆ ಅಮಾನವೀಯ ನಿಯಮ ವಿಧಿಸಿರುವ ಪ್ರಕರಣ ಗುಜರಾತ್‌ನ ಭುಜ್‌ನಲ್ಲಿ ವರದಿಯಾಗಿದೆ. ಅಷ್ಟೇ ಅಲ್ಲ, ವಿದ್ಯಾರ್ಥಿನಿಯರು ಮುಟ್ಟಾಗಿದ್ದಾರೋ ಇಲ್ಲವೋ ಅನ್ನೋದನ್ನು ಪರೀಕ್ಷಿಸಲು ಅವರ ಒಳ ಉಡುಪುಗಳನ್ನು ತೆಗೆಸಿ ಪರೀಕ್ಷಿಸುತ್ತಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಭುಜ್‌ನ ಶ್ರೀ ಶಾಜಾನಂದ್ ಬಾಲಕಿಯರ

ನವದೆಹಲಿ: ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ನಿರ್ಭಯಾ ಅತ್ಯಾಚಾರಿ ವಿನಯ್ ಶರ್ಮಾಗೆ ಹಿನ್ನಡೆಯಾಗಿದ್ದು, ಆತ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡ ವಜಾಗೊಳಿಸಿದೆ. ಈ ಹಿಂದೆ ಅಪರಾಧಿ ವಿನಯ್ ಶರ್ಮಾ, 'ನಿರ್ಭಯಾ ಪ್ರಕರಣದಲ್ಲಿ ರಾಷ್ಟ್ರಪತಿಗಳು ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ

ಅಹಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ.24 ರಿಂದ ಭಾರತ ಪ್ರವಾಸದಲ್ಲಿರಲಿದ್ದಾರೆ. ಟ್ರಂಪ್ ಗುಜರಾತ್ ನ ಅಹಮದಾಬಾದ್ ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಂಪ್ ಸಂಚರಿಸುವ ಮಾರ್ಗದಲ್ಲಿ ಸ್ಲಂ ಗಳು ಕಾಣದಂತೆ ಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದಿರಾ ಬ್ರಿಡ್ಜ್ ಗೆ ಸಂಪರ್ಕ ಕಲ್ಪಿಸುವ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫೆರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ)ಅಡಿಯಲ್ಲಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನೋಟಿಸ್ ಜಾರಿ ಮಾಡಿದೆ. ಪಿಎಸ್ಎ ಅಡಿ ಒಮರ್ ಅಬ್ದುಲ್ಲಾ ಬಂಧನ ಪ್ರಶ್ನಿಸಿ ಅವರ

ಉಡುಪಿ:ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಹೆಚ್ಚುತ್ತಿರುವ ಜಲಸಂಪನ್ಮೂಲ ಕೊರತೆ, ಬೇಸಗೆ ಆರ೦ಭಗೊ೦ಡಿದೆ. ಸಮುದ್ರ ತೀರದ ನದಿಗಳಲ್ಲಿ ಉಪ್ಪು ನೀರಿನ ಒರತೆಯಂತಹ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ಪಶ್ಚಿಮವಾಹಿನಿ ಯೋಜನೆ ಅನುಷ್ಠಾನಕ್ಕೆ ಬಂದು ಎರಡು ವರ್ಷಗಳಾದರೂ ಪೂರ್ಣವಾಗಿಲ್ಲ. ಅನುದಾನ ಲಭ್ಯತೆ ಆಧಾರದಲ್ಲಿ ಹಂತ ಹಂತವಾಗಿ ಕಾಮಗಾರಿ ನಡೆಯುತ್ತಿದ್ದು, ಈವರೆಗೆ ಕ್ರಮಿಸಿದ ಹಾದಿ ತೃಪ್ತಿಕರವಾಗಿಲ್ಲ. ಯೋಜನೆಯಡಿ