Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಉಡುಪಿ ಜೂನ್ 30: ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ 2019-20 ರ ಸಾಲಿನಲ್ಲಿ, ಪಂಚಾಯತ್ ರಾಜ್ ಇಂಜಿನಿಯರಿ0ಗ್ ವಿಭಾಗದಿಂದ ಸುಮಾರು 24 ಕೋಟಿ ರೂ ಮೊತ್ತದ ಅನುದಾನ ಬಳಕೆಯಾಗದೇ ವಾಪಸ್ ಹೋಗಿದ್ದು, ಈ ಕುರಿತಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು, ಅವರ ಮೇಲಾಧಿಕಾರಿಗಳಿಗೆ ಕೂಡಲೇ ನಿರ್ಣಯ ಮಾಡಿ

ಚೆನ್ನೈ: ನಟಿ ವನಿತಾ ವಿಜಯಕುಮಾರ್ ಅವರು ಇತ್ತೀಚೆಗಷ್ಟೇ ಪೀಟರ್ ಪೌಲ್ ಎಂಬುವರ ಜೊತೆ ಮೂರನೇ ಮದುವೆಯಾಗಿದ್ದರು. ವನಿತಾ ವಿಜಯಕುಮಾರ್ ಅವರು ತಮಿಳು ನಟ ವಿಜಯ್ ಕುಮಾರ್ ಅವರ ಹಿರಿಯ ಮಗಳು. ತಮ್ಮ 20ನೇ ವಯಸ್ಸಿನಲ್ಲಿ ನಟ ಆಕಾಶ್ ಎಂಬುವರನ್ನು ವನಿತಾ ಮದುವೆಯಾಗಿದ್ದರು. 5 ವರ್ಷಗಳ ಸಂಸಾರ ನಡೆಸಿದ್ದ ನಂತರ ವನಿತಾ ಆತನಿಂದ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ್ದ 48 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿನ ಕಾರಣದಿಂದ ಮೃತಪಟ್ಟ ಮೂರನೇ ಪ್ರಕರಣವಾಗಿದೆ. ಜಿಲ್ಲೆಯಲ್ಲಿಂದು ಒಂಬತ್ತು ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1206ಕ್ಕೆ ಏರಿಕೆಯಾಗಿದೆ. ಇಂದು ಒಂಬತ್ತು

ನವದೆಹಲಿ: ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದ​ವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಘೋಷಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೊರೋನಾ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿರುವುದರಿಂದ 'ಪ್ರಧಾನಮಂತ್ರಿ ಗರೀಬ್‌

ಕರ್ನೂಲು: ಧೈರ್ಯ ಮತ್ತು ಇಚ್ಛಾಶಕ್ತಿಯನ್ನು ಒಗ್ಗೂಡಿಸಿಕೊಂಡು 10 ವರ್ಷದ ಬಾಲಕನೋರ್ವ ವ್ಹೀಲ್ ಚೇರ್ ನಲ್ಲಿರುವ ತನ್ನ ಅಂಗವಿಕಲ ತಾಯಿ ಹಾಗೂ ಒಂದು ವರ್ಷದ ತಂಗಿಯ ಜೊತೆಗೆ ಕಾಲ್ನಡಿಗೆಯಲ್ಲಿ ಹೈದರಾಬಾದ್-ಬೆಂಗಳೂರು ಮಾರ್ಗದ 350 ಕಿ.ಮೀ ಸಂಚರಿಸಿದ್ದಾನೆ! ಶಾರೂಖ್ ಎಂಬ 10 ವರ್ಷದ ಬಾಲಕ ತನ್ನ ತಾಯಿ ಕುಳಿತಿದ್ದ ವ್ಹೀಲ್ ಚೇರ್ ತಳ್ಳಿಕೊಂಡು ತಂಗಿಯನ್ನು

ಪಾಟ್ನ: ಕೊರೋನಾ ವೈರಸ್ ಕುರಿತಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದರು, ಹಲವೆಡೆ ಜನರು ಆತಂಕವಿಲ್ಲದೆ ವರ್ತಿಸುತ್ತಿದ್ದಾರೆ. ಬಿಹಾರದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 300 ಮಂದಿ ಪೈಕಿ ಇದೀಗ 80 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವುದು ಬೆಳಕಿಗೆ ಬಂದಿದೆ. ಪಾಟ್ನದ ಪಾಲಿಗಂಜ್ ಎಂಬ ಪ್ರದೇಶದಲ್ಲಿ

ಪುದುಚೆರಿ: ಒನ್ ಸೈಡ್ ಲವ್ ಗೆ ಸಂಬಂಧಿಸಿದ ಪ್ರೇಮ ಪ್ರಕರಣವೊಂದರಲ್ಲಿ, ಯುವಕನೊಬ್ಬ ಸೋಮವಾರ ರಾತ್ರಿ 9 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಬಿಸಿ ಎಣ್ಣೆ ಸುರಿದಿದ್ದಾನೆ. ಯುವಕ ಬಾಲಕಿಯನ್ನು ಪ್ರೀತಿಸುತ್ತಿದ್ದು, ಈ ವಿಷಯ ಆಕೆಗೆ ತಿಳಿದಿರಲಿಲ್ಲ. ಅಲ್ಲದೆ, ಆಕೆ ಹೋದಲ್ಲೆಲ್ಲಾ ಅವನು ಅವಳನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಇದನ್ನೆಲ್ಲ ಗಮನಿಸಿದ ಆಕೆಯ ಪೋಷಕರು ಗದರಿಸಿ

ಬೀಜಿಂಗ್‌: ದೇಶದಲ್ಲಿನ ಮುಸ್ಲಿಂ ಜನಸಂಖ್ಯೆ­ಯನ್ನು ನಿಗ್ರಹಿಸುವ ವ್ಯಾಪಕ ಅಭಿಯಾನದ ಅಂಗವಾಗಿ ಉಯಿಘರ್‌ ಮತ್ತು ಇತರ ಅಲ್ಪಸಂಖ್ಯಾಕರಲ್ಲಿ ಜನನದ ಪ್ರಮಾಣವನ್ನು ಕಡಿತಗೊಳಿಸಲು ಚೀನ ಸರಕಾರ ಕಠಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ದೇಶದ ಬಹುಸಂಖ್ಯಾಕ‌ ಹ್ಯಾನ್‌ ಸಮುದಾಯ­ದವರಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಉತ್ತೇಜನ ನೀಡುತ್ತಿದೆ. ಈ ಅಭಿಯಾನವನ್ನು ಈಗ ಹಿಂದಿಗಿಂತ ಹೆಚ್ಚು ವ್ಯಾಪಕವಾಗಿ

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದ್ದು, ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ವಿಶಾಖಪಟ್ಟಣದಲ್ಲಿರುವ ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್' ಕಾರ್ಖಾನೆಯಿಂದ ಬೆಂಜಿಮಿಡಾಜೋಲ್ ಎಂಬ ವಿಷಾನಿಲ ಸೋರಿಕೆಯಾಗಿದ್ದು, ಈ ವೇಳೆ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಇನ್ನು