Log In
BREAKING NEWS >
ಮಂಗಳೂರು ಕಡಲ ತೀರದಲ್ಲಿ ಟೌಕ್ಟೇ ಚಂಡಮಾರುತ ಅಬ್ಬರಕ್ಕೆ ಸಿಲುಕಿದ್ದ 9 ಮಂದಿಯ ರಕ್ಷಣೆ: ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ...

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು (79) ರಾತ್ರಿ 12.45ರ ಸುಮಾರಿಗೆ ಕೃಷ್ಣೈಕ್ಯರಾದರು.. ಸೆ.2ರಂದು ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಕಳೆದ ಕೆಲವು ದಿನಗಳಿಂದ ಅಲ್ಪ ಅಸೌಖ್ಯದಲ್ಲಿದ್ದರು. ಶನಿವಾರ ರಾತ್ರಿ ಪೂಜೆ ಮುಗಿಸಿ ಫಲಾಹಾರ ಸ್ವೀಕರಿಸಿದ್ದ ಶ್ರೀಗಳು ಮಧ್ಯರಾತ್ರಿಯ ವೇಳೆ

ತಿರುವನಂತಪುರ: ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆ್ಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೇರಳದಲ್ಲಿ ನಡೆದಿದೆ.(ಸಾಂದರ್ಭಿಕ ಚಿತ್ರ) ಕೇರಳದ ಪಥನಂತ್ತಟ್ಟದ ಅರಣ್ಮುಲಾದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 19 ವರ್ಷದ ಕೊರೊನಾ ಸೋಂಕಿತೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ, ಆಕೆಯ ಮೇಲೆ ಅಂಬ್ಯುಲೆನ್ಸ್‌ ಚಾಲಕ ಕಾಯಂಕುಲಂ ಮೂಲದ 28

ಉಡುಪಿ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಅಕ್ರಮ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಲಾಡ್ಜ್ ಒಂದರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ಬಂಧಿಸಲಾಗಿದೆ. ಬ್ರಹ್ಮಾವರದ ಮಟಪಾಡಿ ನಿವಾಸಿ ಯೋಗೇಶ್ ಗಾಣಿಗ(24), ಕೇರಳ ತಿರುವನಂತಪುರಂ ನಿವಾಸಿ

ಬೆಂಗಳೂರು/ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರಾಗಿಣಿಗೆ ಮತ್ತೊಂದು ಆಘಾತ ಎದುರಾಗಿದೆ.ಸಿಸಿಬಿ ಪೊಲೀಸರು ದೆಹಲಿಯಲ್ಲಿ ವೀರೇನ್ ಖನ್ನಾ ಮತ್ತೊಬ್ಬ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು,  ಆತನೊಂದಿಗೂ ರಾಗಿಣಿ ನಂಟಿದೆ ಎನ್ನಲಾಗಿದೆ. ಹೀಗಾಗಿ, ತನಗೂ ಡ್ರಗ್ಸ್ ಜಾಲಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅಮಾಯಕಳಂತೆ ವರ್ತಿಸುತ್ತಿದ್ದ ರಾಗಿಣಿಯ ಮುಖವಾಡ ಸಂಪೂರ್ಣ ಕಳಚಿದೆ. ರಾಗಿಣಿ ದ್ವಿವೇದಿ

ಮಣಿಪಾಲ: ಕಳೆದ ಕೆಲವು ದಿನಗಳಿಂದ ವಿಜಯನಗರ ಕೋಡಿ ಎಂಬಲ್ಲಿ ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ವಿಜಯನಗರ ಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆ ಈ ಭಾಗದ ಜನರಲ್ಲಿ ಭೀತಿ ಹುಟ್ಟಿಸಿತ್ತು. ಪ್ರದೇಶದ ಮನೆಗಳ ದನಕರು, ನಾಯಿ, ಕೋಳಿಗಳನ್ನು ಹಿಡಿದು ತಿನ್ನುತ್ತಿತ್ತು.

ಕೊಲಂಬೋ: ಭಾರತದ ಪ್ರಮುಖ ಇಂಧನ ಸಂಸ್ಕರಣಾ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್'ಗೆ ಸೇರಿದ ಇಂಧನ ಟ್ಯಾಂಕರ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಅಪಾಯಕ್ಕೆ ಸಿಲುಕಿದ್ದ 22 ಮಂದಿ ಸಿಬ್ಬಂದಿಗಳನ್ನು ಭಾರತೀಯ ನೌಕಾಪಡೆಯ ನೌಕೆ ಎನ್ಎಸ್ಎಸ್ ಸಹ್ಯಾದ್ರಿ ರಕ್ಷಣೆ ಮಾಡಿದೆ. ಶ್ರೀಲಂಕಾದ ಸಮುದ್ರದ ದಂಡೆಯಲ್ಲಿ ಇಂಧನ ಸಾಗಿಸುತ್ತಿದ್ದ ವೇಳೆ ಎಂಟಿ ನ್ಯೂ ಡೈಮಂಡ್

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ರಾತ್ರಿ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ರಾಗಿಣಿಗೆ 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಆದೇಶಿಸಿದ್ದಾರೆ. ಸದ್ಯ ರಾಗಿಣಿ ಅವರನ್ನು ಸಿಸಿಬಿ

ನವದೆಹಲಿ:  ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು,

ರಾಯ್ಪುರ(ಛತ್ತೀಸ್ ಗಢ): ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ. ಒಡಿಶಾದ ಗಂಜಮ್ ನಿಂದ ಗುಜರಾತ್ ನ ಸೂರತ್ ಗೆ ಬಸ್ ಪ್ರಯಾಣಿಸುತ್ತಿತ್ತು. ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದೆ

ಬೆಂಗಳೂರು: ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಕರ ಸೇವೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ನೆನೆಯುತ್ತ ಶಿಕ್ಷಕ ವೃಂದಕ್ಕೆ ಶುಭಾಶಯ ತಿಳಿಸಿದ್ದಾರೆ. ನನ್ನಂತಹವನಿಗೆ‌ ಒಲಿದು ಬಂದ ಗುರುಗಳು ಜಗದ‌ ಮಕ್ಕಳೆಲ್ಲರಿಗೂ ಸಿಗಲಿ ಇದೇ ವೇಳೆ ಶಿಕ್ಷಕರ ದಿನಾಚರಣೆ