Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಲ್ಲಿ ಕೊಡಮಾಡುವ ಪತ್ರಿಕೋದ್ಯಮ ಪ್ರಶಸ್ತಿಗೆ ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಈ ಬಾರಿ ಆಯ್ಕೆಯಾಗಿದ್ದಾರೆ ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ

ಇಂದಿರಾಪುರಂ(ಲಕ್ನೋ): ಕುಖ್ಯಾತ ಗ್ಯಾಂಗ್ ಸ್ಟರ್, ಭೂ ಮಾಫಿಯಾದ ಕಿಂಗ್ ಪಿನ್ ಸುಭಾಶ್ ಯಾದವ್ ನಿವಾಸದ ಮೇಲೆ ಗಾಜಿಯಾಬಾದ್ ಪೊಲೀಸರು ಶನಿವಾರ(ಸೆಪ್ಟೆಂಬರ್ 19, 2020) ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ವರದಿ ತಿಳಿಸಿದೆ. ಕೊಲೆ ಮತ್ತು ಅತ್ಯಾಚಾರ ಸೇರಿದಂತೆ ಹಲವಾರು ಆರೋಪಗಳಲ್ಲಿ ಯಾದವ್ ಶಾಮೀಲಾಗಿರುವುದಾಗಿ ವರದಿ ಹೇಳಿದೆ.

ನವದೆಹಲಿ: ರಕ್ಷಣಾ ಇಲಾಖೆಯ ಮಹತ್ವದ ಮಾಹಿತಿಗಳನ್ನು ಚೀನಾಗೆ ರವಾನಿಸುತ್ತಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸರು ಸಂಜೀವ್ ಶರ್ಮಾ ಎಂಬ ಪತ್ರಕರ್ತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ದೆಹಲಿ ವಿಶೇಷ ಸೆಲ್ ಡಿಸಿಪಿ ಸಂಜೀವ್ ಕುಮಾರ್ ಯಾದವ್ ಅವರು, '40 ವರ್ಷದ ರಾಜೀವ್ ಶರ್ಮಾ ಪಿತಂಪುರದ ನಿವಾಸಿಯಾಗಿದ್ದು, ಯುನೈಟೆಡ್ ನ್ಯೂಸ್ ಆಫ್

ಕರೋನಾ ಕಾರಣದಿ೦ದ ಕೇ೦ದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿದ ಮಾರ್ಗಸೂಚಿಯ೦ತೆ ಮಾರ್ಚ್ ತಿ೦ಗಳಿ೦ದ ನಿ೦ತು ಹೋದ ಶ್ರೀಕೃಷ್ಣನ ದರ್ಶನದ ಅವಕಾಶವು ಇದೀಗ ಇದೇ ತಿ೦ಗಳ ಸೆಷ್ಟ೦ಬರ್ 28ರಿ೦ದ ಮಠದ ನಿಬ೦ಧನೆಯೊ೦ದಿಗೆ ಭಕ್ತರಿಗೆ ಮತ್ತೆ ಶ್ರೀಕೃಷ್ಣನ ದರ್ಶನವನ್ನು ಮಾಡುವ೦ತ ಭಾಗ್ಯದೊರಕಲಿದೆ.ಅದರೆ ಹಿರಿಯನಾಗರಿಕರಿಗೆ ಮತ್ತು ಚಿಕ್ಕಮಕ್ಕಳ ಶರೀರದ ಸೂಕ್ಷ್ಮವಾಗಿರುವುದರಿ೦ದಾಗಿ ಅವರಿಗಿಲ್ಲ ಶ್ರೀಕೃಷ್ಣನನ್ನು

ಮಂಗಳೂರು: ಕೂಳೂರು ಶಾಲಾ ತಡೆಗೋಡೆ ಕುಸಿದು ಕೂಲಿ ಕಾರ್ಮಿಕ ಮೃತ್ಯುಮೃತರನ್ನು ನೀರುಮಾರ್ಗದ ನಿವಾಸಿ ಉಮೇಶ್ (38) ಎಂದು ಗುರುತಿಸಲಾಗಿದೆ. ಘಟನೆಯ ಸಂಭವಿಸಿದ ಸಂದರ್ಭ ಇವರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಾಂಪೌಂಡ್ ಗೋಡೆ ಕುಸಿದಿದೆ. ಇದ್ದಕ್ಕಿದ್ದಂತೆ ತಡೆಗೋಡೆ ಕುಸಿದ ಪರಿಣಾಮ ಉಮೇಶ್‌

ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇನ್ನೂ ಎರಡು ದಿನ ಜೈಲೇ ಗತಿಯಾಗಿದೆ. ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು 33ನೇ ಸೆಷನ್ಸ್ ನ್ಯಾಯಾಲಯ ಎರಡು ದಿನಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗಾಗಿ  ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯ ಕೇಳಿದ್ದ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್‌ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ಸಿಐಎಸ್ಎಫ್ ಭದ್ರತಾ ಪರಿಶೀಲನೆಯ ಸಮಯದಲ್ಲಿ, ಪಿಸ್ತೂಲ್ ಅನ್ನು ಚೀಲದಲ್ಲಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಗೋವಾಕ್ಕೆ ತೆರಳುವ ವಿಮಾನ ಹತ್ತಲು ವಿಮಾನ

ನವದೆಹಲಿ: ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಜಾಲದ ಮೇಲೆ ಬೃಹತ್ ಕಾರ್ಯಾಚರಣೆಯನ್ನು ಶನಿವಾರ ಬೆಳ್ಳಂಬೆಳಗ್ಗೆ ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಲ್ ಖೈದಾಉಗ್ರಗಾಮಿ ಸಂಘಟನೆಗೆ ಸೇರಿದ  9 ಮಂದಿ ಉಗ್ರರನ್ನು ಬಂಧಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಮತ್ತು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಲ್ ಖೈದಾ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು ಸೆಪ್ಟೆಂಬರ್ 19 ರ ಶನಿವಾರ ಬಂಧಿಸಲ್ಪಟ್ಟ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿಯೊಂದಿಗೆ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾಗಿ ದೃಢಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತರು, ಕುಳಾಯಿ ನಿವಾಸಿ  ಕಿಶೋರ್ ಅಮನ್ ಶೆಟ್ಟಿ (30) ಜೊತೆಗೆ, ಸುರತ್ಕಲ್ ನಿವಾಸಿ ಅಕೀಲ್

ಚಿಕ್ಕೋಡಿ/ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಬೈಕ್ ಹಿಂಬದಿ ಸವಾರ ಹಾಗೂ ಅಂಬುಲೆನ್ಸ್‍ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ