Log In
BREAKING NEWS >
ಉಡುಪಿ ನೂತನ ಡಿವೈಎಸ್ಪಿಯಾಗಿ ಸುಧಾಕರ್ ನಾಯಕ್ ಅಧಿಕಾರ ಸ್ವೀಕಾರ.....ಕೇಂದ್ರ ಬಜೆಟ್: ಜನವರಿ 30 ರಂದು ಸರ್ವಪಕ್ಷ ಸಭೆ ಕರೆದ ಪ್ರಧಾನಮಂತ್ರಿ ನರೇಂದ್ರ ಮೋದಿ....

ಉಡುಪಿ: ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಅಲಂಗಾರು ನಿವಾಸಿ ಮಂಜುಳಾ (21) ಇವರು ಸೆಪ್ಟಂಬರ್ 29 ರಿಂದ ಕಾಣೆಯಾಗಿರುತ್ತಾರೆ. ಚಹರೆ: 5 ಅಡಿ 2 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ

ಬೆಂಗಳೂರು: ರಾಜ್ಯದಲ್ಲಿ  ಜಾರಿಗೆ  ತಂದಿರುವ ವಿದ್ಯಾಗಮ  ಕಾರ್ಯಕ್ರಮದ ಕುರಿತು  ಕೆಲವು ವಲಯಗಳಲ್ಲಿ  ಅಭಿಪ್ರಾಯಗಳು ವ್ಯಕ್ತವಾಗಿರುವುದರಿಂದ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ  ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿದ್ಯಾಗಮ ಸಮಾಜದ  ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ  ಮಕ್ಕಳ  ಹಿತವನ್ನು  ಮನದಲ್ಲಿ  ಇಟ್ಟುಕೊಂಡು

ಕಾಪು: ಹಿರಿಯ ವಿದ್ವಾಂಸ, ಕರ್ನಾಟಕ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅವರು ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್‌ನ ನೂತನ ಖಾಝಿಯಾಗಿ ಶನಿವಾರ ಅಧಿಕಾರ ಸ್ವೀಕರಿಸಿದರು. ಮೂಳೂರಿನ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ಖಾಝಿ ಸ್ವೀಕಾರ ಸಮಾರಂಭ ಹಾಗೂ ತಾಜುಲ್

ತುಮಕೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ ರೈತರನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕದ ತುಮಕೂರು ಸ್ಥಳೀಯ ನ್ಯಾಯಾಲಯವೊಂದು ಶುಕ್ರವಾರ ಪೊಲೀಸರಿಗೆ ನಿರ್ದೇಶನ ನೀಡಿದೆ. ನ್ಯಾಯವಾದಿ ಎಲ್ ರಮೇಶ್ ನಾಯಕ್ ಎಂಬವರು ನೀಡಿದ

ಚೆನ್ನೈ: ತಮಿಳುನಾಡಿನ ಎಐಎಡಿಎಂಕೆ ಶಾಸಕ ಎ ಪ್ರಭು ಅವರ ಪತ್ನಿ ಸೌಂದರ್ಯ ಅವರು, ತನ್ನನ್ನು ಅಪಹರಿಸಲಾಗಿದೆ ಎಂಬ ಕುಟುಂಬದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ನಾನು ಸಂಪೂರ್ಣ ಒಪ್ಪಿ ಮದುವೆಯಾಗಿದ್ದೇನೆ. ನನಗೆ ಯಾರೂ ಒತ್ತಡ ಹಾಕಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗೆ ತಿಳಿಸಿದ್ದಾರೆ. ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ 19 ವರ್ಷದ ಸೌಂದರ್ಯ

ವಾಷಿಂಗ್ ಟನ್: ಭಾರತದ ಉತ್ತರ ಗಡಿಯಲ್ಲಿ ಚೀನಾ ಬರೊಬ್ಬರಿ 60,000 ಸೈನಿಕರನ್ನು ನಿಯೋಜಿಸಿದೆ ಎಂದು ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೋಂಪೊಯೋ ಹೇಳಿದ್ದು, ಚೀನಾದು ಅತ್ಯಂತ ಕೆಟ್ಟ ವರ್ತನೆ ಎಂದು ವಿಶ್ಲೇಷಿಸಿದ್ದಾರೆ. ಕ್ವಾಡ್ ರಾಷ್ಟ್ರಗಳು- ಇಂಡೋ ಫೆಸಿಫಿಕ್ ದೇಶಗಳಾದ ಅಮೆರಿಕ, ಜಪಾನ್, ಭಾರತ, ಆಸ್ಟ್ರೇಲೊಯಾದ ವಿದೇಶಾಂಗ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಇಬ್ಬರೂ ನಟಿಯರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಿ ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶಿಸಿದೆ. ಈ ಆದೇಶದೊಂದಿಗೆ ಇಬ್ಬರೂ ನಟಿಯರು 23ರವರೆಗೂ ಜೈಲುಶಿಕ್ಷೆ ಅನುಭವಿಸುವುದು

ಚಿಕ್ಕಮಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷವನ್ನು ಪರೀಕ್ಷೆರಹಿತ ವರ್ಷವೆಂದು ಘೋಷಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದಾರೆ. 2020 ಜೀವ ಉಳಿಸುವ ವರ್ಷವಾಗಿದೆ, ಮೊದಲು ಜೀವ ಉಳಿಸೋಣ, ಆಮೇಲೆ ಜೀವನ ನಡೆಸೋಣ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅದರಂತೆ ಮೊದಲು ಜೀವ ಉಳಿಸೋಣ, ಆಮೇಲೆ ಜೀವನ ಮಾಡೋಣ

ವಿಟ್ಲ: ಇಲ್ಲಿನ ಮೇಗಿನಪೇಟೆಯಲ್ಲಿ ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗಿನ ಜಾವ ಸಂಭವಿಸಿದೆ. ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ನುಗ್ಗಿದ ದುಷ್ಕರ್ಮಿಗಳು, ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ

ಫತೇಪುರ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮಹಿಳೆಯರು ಭಯಭೀತರಾಗಿದ್ದಾರೆ. ಫತೇಪುರದ ಲಿಲೌಲಿ ಪ್ರದೇಶದ ಹಳ್ಳಿಯಲ್ಲಿ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. 20 ವರ್ಷದ ಯುವತಿಯೊಬ್ಬಳು