Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಸುದೀರ್ಘ ಕಾಲ ಬಹ್ರೇನ್ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಪ್ರಧಾನಿ ಖಲೀಫಾ ಬಿನ್​ ಸಲ್ಮಾನ್​ ಅಲ್​ ಖಲೀಫಾ (84) ನಿಧನರಾಗಿದ್ದಾರೆ ಎಂದು ಬಹ್ರೇನ್  ರಾಯಲ್ ಕೋರ್ಟ್ ಮಾಹಿತಿ ನೀಡಿದೆ. ಕೊರೋನಾ ಕಾರಣದಿಂದಾಗಿ ಅತ್ಯಂತ ಆಪ್ತವಲಯದವರ ಸಮ್ಮುಖದಲ್ಲಷ್ಟೇ ಅಂತ್ಯಕ್ರಿಯೆ ನಡೆಯಲಿದೆ. 1970 ರಿಂದ ಬಹ್ರೇನ್ ಗೆ ಸೇವೆ ಸಲ್ಲಿಸಿದ್ದ ಖಲೀಫಾ ಬಿನ್​ ಸಲ್ಮಾನ್​ ಅಲ್​

ಶಿರಸಿ: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ. ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಬಂಧಿತ ಆರೋಪಿ. ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ನಸುಕಿನ ಜಾವ ಯುವಕನನ್ನು ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ. ಬಂಧಿತ ಸಯ್ಯದ್ ಇದ್ರಿಸ್

ನವದೆಹಲಿ: 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಂಡಿತು. ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಮೋಡಿ ಮಾಡಿದ್ದಾರೆ. ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ 125 ಕ್ಷೇತ್ರಗಳನ್ನು ಗೆದ್ದಿದ್ದು ಸತತ ನಾಲ್ಕನೇ ಬಾರಿ ನಿತೀಶ್ ಕುಮಾರ್ ಅವರು ನಿಸ್ಸಂಶಯವಾಗಿ ಮುಖ್ಯಮಂತ್ರಿ ಪದವಿಯ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಬಾರಿ ಬಿಜೆಪಿ

ರಾಯಚೂರು: ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಮಂತ್ರಾಲಯ ರಸ್ತೆಯ ಮಂಜರ್ಲಾ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ಅಭಿಷೇಕ, ಬಸವರಾಜು, ಗಣೇಶ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಿದ್ಧಾರ್ಥ, ಭೀಮರೆಡ್ಡಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯರಗೇರಾದಿಂದ ಬರುತ್ತಿದ್ದ

ಬಾಗಲಕೋಟೆ: ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿಯವರು ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಇಂದು ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರ ಪುರಸಬೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಅಧ್ಯಕ್ಷೆ ಆಕಾಂಕ್ಷಿ ಮಹಿಳೆ ಸವಿತಾ

ಬೆಂಗಳೂರು: ಬೆಂಗಳೂರು ರಸಾಯನಿಕ ಕೈಗಾರಿಕೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ವಿಧಾನ ಸೌಧದಲ್ಲಿ ಮಾನವ ಕಳ್ಳ ಸಾಗಾಣಿಕೆ ನಿಷೇಧ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬೆಂಗಳೂರಿನ ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಕಾಣಿಸಿಕೊಂಡ

ನವದೆಹಲಿ: ಬಾಂಗ್ಲಾದೇಶ ಸೇನೆಗೆ ಭಾರತೀಯ ಸೇನೆ ತರಬೇತಿ ಪಡೆದಿರುವ ಕುದುರೆ ಮತ್ತು ಶ್ವಾನಗಳನ್ನು ನೀಡಿದೆ. ಹೌದು,.. ಭಾರತ-ಬಾಂಗ್ಲಾದೇಶದ ನಡುವಿನ ಸ್ನೇಹ ಸೌಹಾರ್ದವೃದ್ಧಿಗಾಗಿ ಬಾಂಗ್ಲಾ ಸೇನೆಗೆ 20 ಮಿಲಿಟರಿ ಕುದುರೆಗಳು ಹಾಗೂ 10 ಶ್ವಾನಗಳನ್ನು ಭಾರತ ಉಡುಗೊರೆ ನೀಡಿದೆ. ಪೆಟ್ರಾಫೋಲ್ ಬೆನಾಪೋಲ್ ಇಂಟಿಗ್ರೇಟೆಡ್ ಪೋಸ್ಟ್ ಬಳಿ ಬಾಂಗ್ಲಾದೇಶ ಸೇನೆಯ ನಿಯೋಗ ಈ ಉಡುಗೊರೆಯನ್ನು

ಗಾಂಧಿನಗರ: ಪೈಥಾನ್ ಪ್ರೋಗ್ರಾಮಿಂಗ್ ಭಾಷೆಯನ್ನು ಕಲಿತು ಅದರಲ್ಲಿ ತೇರ್ಗಡೆ ಹೊಂದುವ ಮೂಲಕ ಅಹ್ಮದಾಬಾದ್'ನ ಈ 6 ವರ್ಷದ ಬಾಲಕ ವಿಶ್ವದ ಕಿರಿಯ ಕಂಪ್ಯೂಟರ್ ಪ್ರೋಗ್ರಾಮರ್ ಆಗಿ ಗಿನ್ನಿಸ್ ದಾಖಲೆಗೆ ಪ್ರವೇಶ ಪಡೆದಿದ್ದಾನೆ. ಅರ್ಹಮ್ ಓಂ ತಲ್ಸಾನಿಯಾ ಎಂಬ 2ನೇ ತರಗತಿಯ ವಿದ್ಯಾರ್ಥಿ ಪಿಯರ್ಸನ್ ವಿಯುಇ ಪರೀಕ್ಷಾ ಕೇಂದ್ರದಲ್ಲಿ ಮೈಕ್ರೋಸಾಫ್ಟ್ ಪ್ರಮಾಣೀಕರಣ

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ. ರಾಜರಾಜೇಶ್ವರಿ ನಗರದ 20ನೇ ಸುತ್ತಿನ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ