Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಮುಂಬೈ: ಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಠಾಣೆಯ ಉಲ್ಹಾಸ್‌ನಗರದಲ್ಲಿ ಕಟ್ಟಡದ ಸ್ಲ್ಯಾಬ್ ಕುಸಿತದ ಪರಿಣಾಮ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಟ್ಟಡದ ಅವಶೇಷಗಳಿಂದ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮತ್ತಷ್ಟು ಮಂದಿ ಸಿಲುಕಿರುವುದಾಗಿ ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ

ಉಡು:ಸಂತೆಕಟ್ಟೆ ಬಳಿ ಇರುವ ಮಕ್ಕಳ ದತ್ತು ಸ್ವೀಕಾರ ಕೇಂದ್ರ ಕೃಷ್ಣಾನುಗ್ರಹದ 14 ವರ್ಷದೊಳಗಿನ 12 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ" ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, "ದತ್ತು ಸ್ವೀಕಾರ ಕೇಂದ್ರದಲ್ಲಿನ 12 ಮಕ್ಕಳು ಸೇರಿದಂತೆ

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಗುರುವಾರ (ಮೇ 27) ವಿಧಾನಸೌಧದಲ್ಲಿ ನಡೆಯಿತು. ಬಳ್ಳಾರಿ ಜಿಲ್ಲೆಯಲ್ಲಿ ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ ಕುರಿತು ಈ ಹಿಂದೆ ಸಚಿವ ಸಂಪುಟ ತೆಗೆದುಕೊಂಡಿದ್ದ ನಿರ್ಧಾರವನ್ನು ಜಾರಿಗೊಳಿಸದಿರಲು ಸಂಪುಟ ಇಂದು ನಿರ್ಧರಿಸಿತು. ಇದರ ಜೊತೆಗೆ ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಅನೇಕ ಚರ್ಚೆಗಳ ನಡೆಯುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಸಹಿ ಸಂಗ್ರಹಿಸಿ ದೆಹಲಿಗೆ ಹೋಗಿದ್ದ ಬಿಜೆಪಿ ಬಂಡಾಯ ನಾಯಕರಿಗೆ ನಿರಾಸೆಯಾಗಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟವಾಗಿ ಹೇಳಿದ ಬೆನ್ನಲ್ಲೇ ಇಂದು ವಿಧಾನಸೌಧದಲ್ಲಿ ಸಚಿವ ಸಿ.ಪಿ ಯೋಗೇಶ್ವರ್​

ಚಿಕ್ಕಮಗಳೂರು: ಅಪಘಾತದಲ್ಲಿ ವೈದ್ಯರೋರ್ವರು ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರೂ, ಕಾರಿನಿಂದ ಇಳಿಯದ ಶಾಸಕನ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ರಮೇಶ್‌‌ ಅವರು ತಮ್ಮ ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದರು. ಈ ಸಂದರ್ಭ ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಸಮೀಪ ಅಪರಿಚಿತ ವಾಹನವೊಂದು ಢಿಕ್ಕಿಯಾಗಿ ಅಪಘಾತವಾಗಿದೆ.

ಮಂಗಳೂರು: ಮಾಸ್ಕ್ ಧರಿಸಲು ಹೇಳಿದ್ದಕ್ಕೆ ಮಲ್ಲೂರು ಗ್ರಾಮ ಪಂಚಾಯಿತಿಯ ಸಾರ್ವಜನಿಕ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಇರಾಯತುಲ್ಲಾ(25), ಫರಂಗಿಪೇಟೆ ನಿವಾಸಿ ಅಹ್ಮದ್ ಬಸೀರ್(30), ಕುತ್ತಾರ್ ನಿವಾಸಿ ಅಬೂಬಕ್ಕರ್ ಸಿದ್ದಿಕೂರ್(26), ಅಬ್ದುಲ್ ಸಿದ್ದಿಕ್ (33) ಎಂದು ಗುರುತಿಸಲಾಗಿದೆ. ಇನ್ನು ಓರ್ವ ಆರೋಪಿ ಮನ್ಸೂರ್

ಬೆಂಗಳೂರು: ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 'ನನ್ನ ಮುಂದೆ ಇರುವುದು ಕೋವಿಡ್ ನಿರ್ವಹಣೆ ಮಾತ್ರ. ಅದರ ನಿಯಂತ್ರಣ ಹಾಗೂ ನಿರ್ವಹಣೆ ಕೆಲಸಕ್ಕೆ ಮಾತ್ರ ಆದ್ಯತೆ' ಎಂದು ಯಡಿಯೂರಪ್ಪ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಕೊರೋನಾ ನಿಯಂತ್ರಿಸುವುದು, ಜನಹಿತ ಕಾಪಾಡೋದು ನನ್ನ

ನವದೆಹಲಿ : ಮಹಾರಾಷ್ಟ್ರ ಮೂಲದ ಐಪಿಎಸ್ ಅಧಿಕಾರಿ ಸುಭೋಷ್ ಕುಮಾರ್ ಜೈಸ್ವಾಲ್ ಸಿಬಿಐನ ನೂತನ ನಿರ್ದೇಶಕರಾಗಿ ನೇಮಕವಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಪ್ರತಿಪಕ್ಷ ನಾಯಕ ಅದಿರ್ ರಂಜನ್ ಚೌಧರಿ ಮಂಗಳವಾರ ರಾತ್ರಿ ಸುದೀರ್ಘ ಚರ್ಚೆಯ ನಂತರ ಸುಭೋಷ್ ಜೈಸ್ವಾಲ್ ಅವರನ್ನು 2 ವರ್ಷಗಳ ಅವಧಿಗೆ

ಸ್ವಾತ೦ತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ರವರು ಹೃದಯಾಘಾತದಿ೦ದ ಇ೦ದು ಬೆ೦ಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊ೦ದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ (104)ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಮತ್ತೆ ಅವರನ್ನು

ಮಂಗಳೂರು:ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳ 50 ಸ್ಥಾನಗಳ ಪಟ್ಟಿಯಲ್ಲಿ 2019-20ರಲ್ಲಿ 29 ನೇ ರ್‍ಯಾಂಕ್ ಪಡೆದಿದ್ದ ಮಂಗಳೂರು  ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣವು 2020-21ನೇ ಸಾಲಿನಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ 31 ನೇ ಸ್ಥಾನಕ್ಕೆ ಕುಸಿದಿದೆ. 2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ವಾರ್ಷಿಕ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಸೇರಿ ಒಟ್ಟಾರೆ 18,76,294