Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಮಂಗಳೂರು: ಮಣಿಪಾಲ್‌ನ ಕಸ್ತೂರಿ ಬಾ ವೈದ್ಯಕೀಯ ಕಾಲೇಜು(ಕೆಎಂಸಿ) ಆಸ್ಪತ್ರೆಯಲ್ಲಿ ಕೋವಿಡ್ -19ಗೆ ಚಿಕಿತ್ಸೆ ಪಡೆಯುತ್ತಿರುವ ಏಳು ರೋಗಿಗಳಲ್ಲಿ ಕಪ್ಪು ಶಿಲೀಂಧ್ರ (ಮ್ಯೂಕಾರ್ಮೈಕೋಸಿಸ್) ಸೋಂಕು ಪತ್ತೆಯಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ(ಡಿಎಚ್‌ಒ) ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಐದು ಮಹಿಳೆಯರು ಮತ್ತು ಇಬ್ಬರು ಪುರುಷರಲ್ಲಿ ಕಪ್ಪು ಶಿಲೀಂಧ್ರ ಪತ್ತೆಯಾಗಿದ್ದು, ಪ್ರಸ್ತುತ

ನವದೆಹಲಿ: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದ Papaa-305 ಬಾರ್ಜ್ ದುರಂತದಲ್ಲಿ ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈ ಕರಾವಳಿ ಪ್ರದೇಶದಲ್ಲಿ ಸುಮಾರು 35 ನಾಟಿಕಲ್ ಮೈಲು ದೂರದಲ್ಲಿ ದುರಂತಕ್ಕೀಡಾಗಿರುವ Papaa-305 ಬಾರ್ಜ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು

ನವದೆಹಲಿ: ಗುಜರಾತ್ ಹಾಗೂ ಮಹಾರಾಷ್ಟ್ರ ಒಳಗೊಂಡಂತೆ ಹಲವು ರಾಜ್ಯಗಳಲ್ಲಿ ತೌಕ್ತೆ ಚಂಡಮಾರುತ ಆರ್ಭಟ ತೋರಿರುವ ಬೆನ್ನಲ್ಲೇ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಈ ಚಂಡಮಾರುತ ದೇಶದ ಪೂರ್ವ ಹಾಗೂ ದಕ್ಷಿಣ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ ಎಂದು ಮುನ್ಸೂಚನೆ ನೀಡಿದೆ. ಮೇ 23ರಿಂದ

ಲಂಡನ್: ತನ್ನ ಕಂಪನಿಗಳು ದಿವಾಳಿಯಾಗಿವೆ ಎಂದು ತಿದ್ದುಪಡಿ ಮಾಡಬೇಕೆಂದು ಲಂಡನ್ ಹೈಕೋರ್ಟ್​ ನಲ್ಲಿ ಅರ್ಜಿ ಸಲ್ಲಿಸಿದ್ದ ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯರಿಗೆ ಲಂಡನ್ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಕೋರ್ಟ್ ಮಲ್ಯ ವಿರುದ್ದ ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟದ ಪರ ತೀರ್ಪು ಕೊಟ್ಟಿದೆ. ಈ ಮೂಲಕ ಸ್ಟೇಟ್ ಬ್ಯಾಂಕ್ ಆಫ್

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ "ಹಡಿಲು ಭೂಮಿ ಕೃಷಿ ಅಂದೋಲನ" ದಡಿ ನೀಲಾವರ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಕೃಷಿ ಭೂಮಿಗಳನ್ನು ಕೃಷಿ ಮಾಡಲು ನಡೆಸಿದ ತಯಾರಿ ಬಗ್ಗೆ ಶಾಸಕ ಕೆ ರಘುಪತಿ ಭಟ್ ಅವರು ಮ೦ಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ತೋಡುಗಳ ಹೂಳೆತ್ತುವ ಕಾರ್ಯ ನಡೆಯುತ್ತಿದೆ.

ಕೋವಿಡ್ - 19 ನಿಯಂತ್ರಿಸುವ ದೃಷ್ಟಿಯಿಂದ ಗ್ರಾಮ ಗ್ರಾಮಗಳಲ್ಲಿ ಕೋವಿಡ್ ರೋಗ ಲಕ್ಷಣ ಇರುವ ಪ್ರತಿಯೊಬ್ಬರನ್ನು ಪರೀಕ್ಷಿಸುವ ಅಭಿಯಾನ ನಡೆಸಿ. ಈ ಬಗ್ಗೆ ಸ್ಥಳೀಯ ಖಾಸಗಿ ವೈದ್ಯರನ್ನು ಭೇಟಿಯಾಗಿ ಚರ್ಚಿಸಿ ಜ್ವರ, ಶೀತ ಸಂಬಂಧ ಬರುವ ರೋಗಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿಸಿ ಪರೀಕ್ಷಿಸುವಂತೆ ಜಾಗೃತಿ ಮೂಡಿಸಿ. ಈ

ಉಡುಪಿ: ಕಪ್ಪು ಶಿಲೀಂಧ್ರ ಸೋಂಕು ಹೊಸ ಕಾಯಿಲೆಯಲ್ಲ. ಅದು ಈ ಮೊದಲೂ ಇತ್ತು. ಈ ಸೋಂಕಿನ ಬಗ್ಗೆ ಭಯ ಬೇಡ. ಆದರೆ, ಸೂಕ್ತ ಮುಂಜಾಗ್ರತೆ ಅಗತ್ಯ ಎಂದು ಇಲ್ಲಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಸಮೂಹ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಹಾಗೂ ಖ್ಯಾತ ನೇತ್ರತಜ್ಞ ನಾಡೋಜ ಡಾ.

ಕಾನ್ಪುರ: ಭಾರತ ಕ್ರಿಕೆಟ್ ತಂಡದ ಕ್ರಿಕೆಟಿಗ ಕುಲದೀಪ್ ಯಾದವ್ ತಮ್ಮ ಗೆಸ್ಟ್ ಹೌಸ್ ನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಕಾನ್ಪುರ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಕ್ರಿಕೆಟಿಗ ಕುಲದೀಪ್ ಯಾದವ್ ಅವರಿಗೆ ಸ್ಲಾಟ್ ಕಾಯ್ದಿರಿಸಿದ ಆಸ್ಪತ್ರೆಯಲ್ಲಿ ಅಲ್ಲದೇ ಅತಿಥಿ ಗೃಹದಲ್ಲಿ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾನ್ಪುರ

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೊರೋನಾ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗಿದ್ದರಿಂದ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಈ ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ 1,250 ಕೋಟಿ ರೂ.ಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್

ಬೆಂಗಳೂರು: ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ನಂತರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಕೊರೋನಾ ಸೋಂಕು ತಡೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ. ಈ ಹಿಂದೆ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದವು. ಹಾಸನದಲ್ಲಿ