Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಬೆಂಗಳೂರು: ರಾಜ್ಯದ ಜನತೆ ಎರಡು ಬಾರಿ ಕೋವಿಡ್ ಸಂಕಷ್ಟವನ್ನು ಮತ್ತು ಅತಿವೃಷ್ಟಿಯಿಂದ ಪ್ರವಾಹ, ನೆರೆ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ, ಸರ್ಕಾರದ ಸೌಲಭ್ಯ ಸಿಗುವಂತೆ ಮತ್ತು ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಮುಖ್ಯಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇಂದು ರಾಜಭವನದ

ಬೆಂಗಳೂರು: ಬಿಜೆಪಿಯಲ್ಲಿ ವಲಸಿಗರು, ಮೂಲ ನಾಯಕರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ನಿಂತು ಗೆದ್ದ ನಂತರ ಅವರು ಬಿಜೆಪಿ ಪಕ್ಷದವರು, ಎಲ್ಲರೂ ಒಂದೇ ಕುಟುಂಬದಂತೆ, ಹೀಗಾಗಿ ಸಂಪುಟ ರಚನೆ ವೇಳೆ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವನ್ನು ಪರಿಶೀಲಿಸಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ರಾಹುಲ್ ಗಾಂಧಿ ಜು.26 ರಂದು ಸಂಸತ್ ಗೆ ಟ್ರಾಕ್ಟರ್ ನಲ್ಲಿ ಬಂದಿದ್ದು ವಿಶೇಷವಾಗಿತ್ತು. ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿರುವ ರಾಹುಲ್ ಗಾಂಧಿ, "ಸಂಸತ್ ಗೆ ರೈತರ ಸಂದೇಶ ತಂದಿರುವುದಾಗಿ ಹೇಳಿದ್ದಾರೆ. ಸರ್ಕಾರ ರೈತರ ಧ್ವನಿಯನ್ನು ಅಡಗಿಸುತ್ತಿದೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ. ಕರೆನ್ಸಿ ನೋಟು ಮುದ್ರಣದ ಕುರಿತ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ಉತ್ತರಿಸುತ್ತಿದ್ದರು. ಕೋವಿಡ್-19 ನಿಂದ ಉಂಟಾಗಿರುವ ಉದ್ಯೋಗ ನಷ್ಟವನ್ನು ತಪ್ಪಿಸಲು ಹಾಗೂ ಆರ್ಥಿಕತೆಗೆ

ಮಂಗಳೂರು, ಜು.26: ನಗರದ ಹೊರವಲಯದ ಮಲ್ಲೂರಿನಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ

ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಜಪಾನ್‌ನ ಮೊಮಿಜಿ ನಿಶಿಯಾ ಅವರು ತೀವ್ರ ಸಂಚಲನ ಸೃಷ್ಟಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಅತ್ಯಂತ ಕಿರಿಯ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ. ಟೋಕಿಯೊ ಒಲಂಪಿಕ್ಸ್‌ನಲ್ಲಿ ಹೊಸದಾಗಿ ಆರಂಭಿಸಲಾದ ಸ್ಕೇಟ್‌ ಬೋರ್ಡಿಂಗ್‌ನಲ್ಲಿ ನಿಶಿಯಾ ಚಿನ್ನ ಗೆದ್ದಿದ್ದಾರೆ ಟ್ರಿಕ್ಸ್ ವಿಭಾಗದಲ್ಲಿ 15.26 ಅಂಕಗಳಿಸಿರುವ ನಿಶಿಯಾ ಅವರ ವಯಸ್ಸು

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

ಮುಂಬೈ: ಅಶ್ಲೀಲ ವೆಬ್ ಸೀರಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹಾನಾ ವಶಿಷ್ಠ ಮತ್ತು ಇತರ ಇಬ್ಬರು ಮುಂಬೈ ಅಪರಾಧ ವಿಭಾಗದ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಅಶ್ಲೀಲ ಚಿತ್ರಗಳ ನಿರ್ಮಾಣ

ಬೆಂಗಳೂರು: ಅಭಿನಯ ಶಾರದೆ ಎಂದು ಪ್ರೀತಿಯಿಂದ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಯಂತಿ ನಿಧನರಾಗಿದ್ದಾರೆ. ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ,ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ

ಬೆಳಗಾವಿ: ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಕೆಲವು ಸ್ಥಳಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ