Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಬೆಂಗಳೂರು: ಕಲ್ಲಿದ್ದಲು ಕೊರತೆಯಿಂದಾಗಿ ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವ ತಾರಕ್ಕೇರುವ ಸಾಧ್ಯತೆ ಇದ್ದು, ಪ್ರಸ್ತುತ ಕರ್ನಾಟಕದಲ್ಲಿ ಕೇವಲ 2 ದಿನಕ್ಕಾಗುವಷ್ಟು ಮಾತ್ರ ಕಲ್ಲಿದ್ದಲು ದಾಸ್ತಾನಿದೆ ಎನ್ನಲಾಗಿದೆ. ಇನ್ನು ಪ್ರಸ್ತುತ ರಾಜ್ಯದ ವಿದ್ಯುತ್‌ ಬೇಡಿಕೆ 153.669 ಮಿ.ಯೂನಿಟ್‌ ಇದ್ದು, ಕಲ್ಲಿದ್ದಲು ದಾಸ್ತಾನು ಬಹಳ ಕಡಿಮೆ ಇರುವುದರಿಂದ ರಾಯಚೂರು, ಬಳ್ಳಾರಿ ಮತ್ತು ಯರಮರಸ್‌ನ 13

ಮಂಗಳೂರು: ತೆಂಕುತಿಟ್ಟು ಯಕ್ಷಗಾನರಂಗದ ಅಗ್ರಮಾನ್ಯ ಭಾಗವತರಾಗಿದ್ದ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕೆಲ ತಿಂಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಗಣಪತಿ ಭಟ್ಟರು ಅದರಿಂದ ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 7.30ರ ಸುಮಾರಿಗೆ ಹೃದಯಾಘಾತಕ್ಕೆ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 30 ಐಎಎಸ್ ಹಾಗೂ 7 ಐಎಫ್‍ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ನಿನ್ನೆಯಷ್ಟೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯು 29 ಐಎಎಸ್ ಅಧಿಕಾರಿಗಳು ಮತ್ತು 6 ಐಎಫ್ಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ

ಪೂಂಚ್(ಜಮ್ಮು-ಕಾಶ್ಮೀರ): ಕಿರಿಯ ನಿಯೋಜಿತ ಅಧಿಕಾರಿ(ಜೆಸಿಒ) ಸೇರಿದಂತೆ ಐವರು ಸೇನಾ ಯೋಧರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆ. ಇಂದು ನಸುಕಿನ ಜಾವದಿಂದ ತೀವ್ರ ಪ್ರಮಾಣದ ಗುಂಡಿನ ಚಕಮಕಿ ಉಗ್ರಗಾಮಿಗಳು ಮತ್ತು ಯೋಧರ ನಡುವೆ ಏರ್ಪಟ್ಟಿತು. ಇದರಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು

ಅಕ್ಟೋಬರ್ 13ರ೦ದು ಅದಮಾರು ನೂತನ "ಪೂರ್ಣಪ್ರಜ್ಞ ಪದವಿ ಕಾಲೇಜಿನ ನೂತನ ಕಟ್ಟಡಕ್ಕೆ ಹಾಗೂ ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಮುಚ್ಚಯ ಶಿಲಾನ್ಯಾಸ ಹಾಗೂ ಗಣಕ ವಿಜ್ಞಾನ ಪ್ರಯೋಗಾಲದ ಉದ್ಟಾಟನೆ ಉಡುಪಿ: ಪೂರ್ಣಪ್ರಜ್ಞ, ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಶ್ರೀ ವಿಬುಧೇಶತೀರ್ಥ ಶ್ರೀಪಾದರು ದೇಶದಾದ್ಯಂತ 33 ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದೆ. ಬಂಡಿಪೊರ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ಇಂದು ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಬಂಡಿಪೊರಾದಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿ (ಟಿಆರ್‌ಎಫ್) ಗೆ ಸೇರಿದವನಾಗಿದ್ದಾನೆ. ಪೊಲೀಸರೊಬ್ಬರಿಗೆ

ಡೆಹ್ರಾಡೂನ್: ಮುಂದಿನ ವರ್ಷದ ಪ್ರಾರಂಭದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಉತ್ತರಾಖಂಡ್ ನಲ್ಲಿ ಬಿಜೆಪಿಗೆ ತೀವ್ರ ಮುಜುಗರ ಉಂಟಾಗುವ ಬೆಳವಣಿಗೆ ನಡೆದಿದ್ದು, ಸಾರಿಗೆ ಸಚಿವ ಯಶ್ ಪಾಲ್ ಆರ್ಯ ಹಾಗೂ ಆತನ ಪುತ್ರ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಯಶ್ ಪಾಲ್ ಆರ್ಯ ಅವರ ಪುತ್ರ ಸಂಜೀವ್ ಶಾಸಕರಾಗಿದ್ದಾರೆ. ಈ ಇಬ್ಬರೂ ನಾಯಕರು

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ಸಂಜೆ ಸುರಿದ ಗುಡುಗು ಸಹಿತ ಮಳೆಯ ವೇಳೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ತಿಪ್ಪೇ ಸ್ವಾಮಿ (46) ಮೃತ ವ್ಯಕ್ತಿ, ಅವರ ಪುತ್ರ ಚಿದಾನಂದ್ (22) ಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಟಿ.ದಾಸರಹಳ್ಳಿಯ ನಿವಾಸಿಯಾಗಿರುವ