BREAKING NEWS > |
ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 15ಮಂದಿ ದುರ್ಮರಣವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಇಂದು ಬೆಳಗ್ಗೆ ಅಯೋಧ್ಯೆಯ ಕಡೆ ಬರುತ್ತಿದ್ದ ಬಸ್ ಮುಂಬದಿಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿದ್ದ 15ಕ್ಕೂ ಹೆಚ್ಚು
ಲಖನೌ: ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲವ್ ಕುಶ್ ಮತ್ತು ಆಶಿಶ್ ಪಾಂಡ್ಯ ಎಂಬುವರನ್ನು ಬಂಧಿಸಿದ್ದು ಶೀಘ್ರವೇ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸುತ್ತೇವೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಕ್ರಮಕೈಗೊಂಡಿದ್ದೀರಾ ಎಂದು
ಉಡುಪಿಯ ಇತಿಹಾಸ ಪ್ರಸಿದ್ಧ ಕನ್ನರ್ಪಾಡಿಯ ಶ್ರೀಜಯದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರೆ ಮಹೋತ್ಸವದ ಅ೦ಗವಾಗಿ ಗುರುವಾರದ೦ದು ಮು೦ಜಾನೆಯ೦ದು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ನವರಾತ್ರೆ ಮಹೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು. ಆರ೦ಭದಲ್ಲಿ ಕದಿರುಕಟ್ಟುವ ಕಾರ್ಯಕ್ರಮವು ಜರಗಿತು. ತದನ೦ತರ ಮಧ್ಯಾಹ್ನ ಚ೦ಡಿಕಾಯಾಗ ಮತ್ತು ಮಧ್ಯಾಹ್ನದ ಮಹಾಪೂಜೆಯು ಜರಗಿತು. ಸಾವಿರಾರುಮ೦ದಿ ಮಧ್ಯಾಹ್ನದ ಪ್ರಸಾದ ಭೋಜನವನ್ನು ಸ್ವೀಕರಿಸಿದರು. ಪ್ರಥಮ
ಉಡುಪಿ :ಉಡುಪಿಯ ಇತಿಹಾಸ ಪ್ರಸಿದ್ಧ ದೇವಾಲಯಗಳಾದ ಶ್ರೀಅನ೦ತೇಶ್ವರ ಹಾಗೂ ಚ೦ದ್ರಮೌಳೀಶ್ವರ, ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಕಲ್ಯಾಣಪುರ ದೇವಸ್ಥಾನಗಳಲ್ಲಿ ನವರಾತ್ರೆಯ ಪ್ರಥಮ ದಿನವಾದ ಗುರುವಾರದ೦ದು ಕದಿರುಕಟ್ಟುವ ಸಕಲ ಧಾರ್ಮಿಕ ವಿದಿವಿಧಾನಗಳೊ೦ದಿಗೆ ವಿಜೃ೦ಭಣೆಯಿ೦ದ ಜರಗಿತು.ಶ್ರೀಕೃಷ್ಣಮಠದಲ್ಲಿ ವಿಜಯದಶಮಿಯ೦ದು ಕದಿರುಕಟ್ಟುವ ಕಾರ್ಯಕ್ರಮ ಜರಗಲಿದೆ.
ಶ್ರೀಕೃಷ್ಣ ದೇವರಿಗೆ ನವರಾತ್ರಿಯ ಪ್ರಯುಕ್ತ ಇಂದು ಕಾಣಿಯೂರುಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು "ಮೋಹಿನೀ" ಅಲಂಕಾರವನ್ನು ಮಾಡಿದರು.ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.
ಅಬುಧಾಬಿ: ಸಂಘಟಿತ ಆಟದ ಪ್ರದರ್ಶನ ನೀಡಿದ ಸನ್ ರೈಸರ್ಸ್ ಹೈದರಾಬಾದ್ 4 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 14ನೇ ಆವೃತ್ತಿಯ ಐಪಿಎಲ್ 52ನೇ ಪಂದ್ಯದಲ್ಲಿ ಮಣಿಸಿತು. ಮೊದಲು ಬ್ಯಾಟ್ ಮಾಡಿದ ಹೈದ್ರಾಬಾದ್ ಸನ್ ರೈಸರ್ಸ್ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು. ಜೇಸನ್ ರಾಯ್ (44)
ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ್ದಾರೆ. ಮೃತರನ್ನು ಅರ್ಜುನ ಹನುಮಂತ ಖನಗಾಂವಿ (48) ಪತ್ನಿ ಸತ್ಯವ್ವ ಖನಗಾಂವಿ (45) ಪುತ್ರಿ ಲಕ್ಷ್ಮಿ ಖನಗಾಂವಿ (17) ಪೂಜಾ ಅರ್ಜುನ ಖನಗಾಂವಿ (8) ಗಂಗವ್ವ
ಮೈಸೂರು: ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಾಡು ಕಂಡ ಧೀಮಂತ ನಾಯಕ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ
ಬೆಂಗಳೂರು: ಅಸಹಾಯಕ ಪೋಷಕರಿಂದ ನವಜಾತ ಶಿಶುಗಳನ್ನು ಪಡೆದು ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಪಶ್ಚಿಮ ವಲಯದ ಮಾನವ ಕಳ್ಳ ಸಾಗಾಣಿಕೆ ನಿಗ್ರಹ ಘಟಕ ಪತ್ತೆ ಹಚ್ಚಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ರಾಜ್ಯ ಮತ್ತು ಅಂತರರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ರಂಜನಾ ದೇವಿದಾಸ್ ಖಂಡಗಳೆ
ಮಂಗಳೂರು: ಸೇಂಟ್ ಅಲೋಶಿಯಸ್ ಕಾಲೇಜ್ ತನ್ನ ಕ್ಯಾಂಪಸ್ ನ ಪಾರ್ಕ್ ಗೆ ಬುಡಕಟ್ಟು ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ಅವರ ಹೆಸರು ಇಡಲು ನಿರ್ಧಾರಿಸಿದೆ. ಆದರೆ ಇಕ್ಕೆ ಹಿಂದೂ ಬಲಪಂಥೀಯ ಸಂಘಟನೆಗಳಾದ ವಿಹೆಚ್‌ಪಿ, ಬಜರಂಗದಳ ಮತ್ತು ಎಬಿವಿಪಿಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಉದ್ಯಾನವು ಮಂಗಳೂರಿನ ಹೊರವಲಯದಲ್ಲಿರುವ ಕಾಲೇಜಿನ ಬೀರಿ ಕ್ಯಾಂಪಸ್‌ನಲ್ಲಿದೆ