Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದ್ದು, ಈ ಬೆಳವಣಿಗೆಯನ್ನು ತುರ್ತುಪರಿಸ್ಥಿತಿ ಎಂದು ಹೇಳಿರುವ ಸುಪ್ರೀಂಕೋರ್ಟ್ ವಾಯುಮಾಲಿನ್ಯ ತಡೆಗಟ್ಟಲು ತುರ್ತು ಕ್ರಮಗಳ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಶನಿವಾರ ತಿಳಿಸಿದೆ. ರಾಷ್ಟ್ರ ರಾಜಧಾನಿಯಲ್ಲಿನ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್'ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಇಂದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ

ಖಾಸಗಿ ಬಸ್​ ಮತ್ತು ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್​-ಜೋಧ್​ಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಖಾಸಗಿ ಬಸ್​​ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಇದ್ದರು. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಸಿಬ್ಬಂದಿ 10 ಮೃತದೇಹಗಳನ್ನು ಬಸ್​​ನಿಂದ ಹೊರತೆಗೆದಿದ್ದಾರೆ.

ಕಾರ್ಕಳ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೆಂಕಟರಮಣ ಭಜನಾ ಮಂಡಳಿಯ 50 ನೇ ವರ್ಷದ ಆಚರಣೆಯ ಸಲುವಾಗಿ ತಾ -9-11-21ರಿಂದ 15-11-21ರ ವರೆಗೆ (7ದಿನದ) ಅಖಂಡವಾಗಿ ಸಪ್ತಾಹ ಭಜನೆ ಕಾರ್ಯಕ್ರಮ ಉದ್ಘಾಟನೆಗೊ೦ಡಿತು. ಸಾವಿರಾರು ಮ೦ದಿ ಭಕ್ತರು ಈ ಸಪ್ತಾಹ ಮಹೋತ್ಸವದಲ್ಲಿ ಭಾಗವಹಿಸಿ ಭಜನೆಯನ್ನು ಹಾಡುತ್ತಿದ್ದಾರೆ. ಪ್ರತಿಗ೦ಟೆಗೊ೦ದು ಪಾಳಿಯ೦ತೆ ದಿನದ

ಮಂಗಳೂರು: ಪ್ರೀತಿ ಮಾಡುತ್ತಿದ್ದ ಯುವತಿಯನ್ನು ಬಿಚ್ಚಿಟ್ಟಿದ್ದಾರೆ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಪ್ರಿಯತಮೆಯ ಚಿಕ್ಕಮ್ಮನ ಮೊಬೈಲ್​ಗೆ ತನ್ನದೇ ಅಶ್ಲೀಲ ವೀಡಿಯೋ ಕಳುಹಿಸಿದ್ದಲ್ಲದೆ, ವಿಭಿನ್ನ ನಂಬರ್​ಗಳಿಂದ ಕರೆಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ಭಟ್ಕಳ: ಯುವತಿಯೋರ್ವಳು ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿಯಾದ ತಾರಾ ನಾರಾಯಣ ಮರಾಠಿ (19) ನಾಪತ್ತೆಯಾಗಿರುವ ಯುವತಿ ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ

ಕಲಬುರಗಿ: ಬಿಟ್ ಕಾಯಿನ್ ದಂಧೆ ಪ್ರಕರಣದ ತನಿಖೆ ಪಾರದರ್ಶಕವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪದವಿ ಕಳೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಮೂರನೇ ಮುಖ್ಯಮಂತ್ರಿ ನೇಮಕವಾಗುತ್ತಾರೆ ಎಂಬ ಸ್ಫೋಟಕ ಹೇಳಿಕೆಯನ್ನು ಮಾಜಿ ಸಚಿವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ಕಲಬುರಗಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಇಲಾಖೆಯ ಮಾಜಿ ಸಚಿವನಾಗಿ, ಬಿಟ್ ಕಾಯಿನ್

ಉಡುಪಿ:ನ.09, ಬ್ರಹ್ಮಾವರದ ಕೊಕ್ಕರ್ಣೆ ಸೀತಾನದಿಯಲ್ಲಿ 1 ದಿನದ ಗಂಡು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.  ಸಾಂದರ್ಭಿಕ ಚಿತ್ರ ಸೀತಾನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಕೊಕ್ಕರ್ಣೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಜ್ವತ್ ಅವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದಾಗ ಮಗು ಕೇವಲ ಒಂದು ದಿನದಾಗಿದ್ದು, ಮುಖ ಹಾಗೂ ತಲೆಯ

ಬೆಂಗಳೂರು ನ.8: ಹಲ್ಲೆ ಪ್ರಕರಣ ಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ ಭೀಮಾ ಜುವೆಲ್ಲರಿ ಮಾಲಕನ ಪುತ್ರ ವಿಷ್ಣು ಭಟ್‌ ಮತ್ತು ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಘಟನೆ ವೇಳೆ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ. ಇದೀಗ ಈ ಹಿನ್ನೆಲೆಯಲ್ಲಿ ಇಬ್ಬರೂ ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿರುವ ಶಂಕೆ ವ್ಯಕ್ತವಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆರೋಪಿಗಳು ಡ್ರಗ್‌ ಸೇವಿಸಿರುವುದು ದೃಢಪಟ್ಟ

ಬೆಳಗಾವಿ: ದೀಪಾವಳಿ ಹಬ್ಬದ ಪೂಜೆಗೆ ಉಪಯೋಗಿಸಿದ ಬಾಳೆ ಗಿಡ ಕೆರೆಗೆ ಎಸೆಯಲು ತೆರಳಿದ್ದ ಮೂವರು ಸಹೋದರಿಯರ ಪೈಕಿ, ಇಬ್ಬರು ನೀರುಪಾಲಾಗಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ‌ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. ಸಾಂಬ್ರಾ ನಿವಾಸಿಗಳಾದ ನೇತ್ರಾ ಕೊಳವಿ (8) ಹಾಗು ಪ್ರಿಯಾ ಕೊಳವಿ (6) ‌ಮೃತ ಸಹೋದರಿಯರು ಎನ್ನಲಾಗಿದೆ. ಕಾಲು

ನವದೆಹಲಿ: ಭಾರತದಲ್ಲಿ ಈಗ ಮಕ್ಕಳಿಗೂ ಕೂಡ ಕೊರೋನಾ ಲಸಿಕೆ ಶೀಘ್ರದಲ್ಲೇ ಸಿಗಲಿದೆ. ಇದಕ್ಕಾಗಿ 12 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮೂರು ಡೋಸ್ ಲಸಿಕೆ 'ಝೈಕೋವ್-ಡಿ' 1 ಕೋಟಿ ಡೋಸ್‌ಗಳನ್ನು ಅಹಮದಾಬಾದ್ ಮೂಲದ ಕಂಪನಿ ಝೈಡಸ್ ಕ್ಯಾಡಿಲಾದಿಂದ ಖರೀದಿಸಲು ಸರ್ಕಾರ ಆದೇಶಿಸಿದೆ. ಇದರೊಂದಿಗೆ, ಈ ಲಸಿಕೆಯನ್ನು