Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಬೆಂಗಳೂರು: ಕಂದಾಯ ಸಚಿವ ಆರ್ ಅಶೋಕ್‌ಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಈ ಹಿನ್ನೆಲೆ  ಅಶೋಕ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಸಚಿವ  ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಈ ಹಿಂದೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೂ ಕೊರೋನಾ ಪಾಸಿಟಿವ್​ ಕಂಡು ಬಂದಿತ್ತು, ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್

ಕಾಪು: ರಾಷ್ಟ್ರೀಯ ಹೆದ್ದಾರಿಯಿಂದ ದಂಡತೀರ್ಥ ಮಠಕ್ಕೆ ಹೋಗುವ ಪ್ರವೇಶ ದ್ವಾರಕ್ಕೆ ನೂತನವಾಗಿ ನಿರ್ಮಿಸಿರುವ ಸ್ವಾಗತ ಗೋಪುರವನ್ನು ಭಾವೀ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಹಿಂದೆ ಜ್ಞಾನದಾನ ,ಅನ್ನದಾನದ ಜೊತೆಗೆ ಗುರುಕುಲ ಪದ್ಧತಿಯಲ್ಲಿ ವಿದ್ಯಾಭ್ಯಾಸ ನಡೆಯುತ್ತಿದ್ದ ಜಾಗ.ಈ ಗುರುಕುಲದಲ್ಲಿ ಆಚಾರ್ಯಮಧ್ವರು ವಾಸದೇವನಾಗಿ ವಿದ್ಯಾರ್ಜನೆ ಮಾಡಿದುದರಿಂದ ಪವಿತ್ರ

ಉಡುಪಿ:ಉಡುಪಿ ರಾಜ್ಯದ ಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿ ಅವರನ್ನು ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ ಪರ್ಯಾಯೋತ್ಸವಕ್ಕೆ ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಅವರು ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು. ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು. ಮನವಿಗೆ

ದೊಡ್ಡಬಳ್ಳಾಪುರ: ಅನಾರೋಗ್ಯದಿಂದ ಬೇಸತ್ತಿದ್ದ 27 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗೊಲ್ಲಹಳ್ಳಿಯಲ್ಲಿ ನಡೆದಿದೆ.  ಮಂಗಳವಾರ ಈ ಘಟನೆ ನಡೆದಿದ್ದು, ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಪತಿ ತನ್ನನ್ನು ವೀಕೆಂಡ್ ಡಿನ್ನರ್ ಗೆ  ಹೋಟೆಲ್ ಗೆ ಕರೆದುಕೊಂಡು

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳಿಂದ ಬಂಧಿಸಲ್ಪಟ್ಟ ದಂತ ವೈದ್ಯೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂಳಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಕರಣದಲ್ಲಿ ಹನಿಟ್ರ್ಯಾಪ್, ಮತಾಂತರ ಹಾಗೂ ಉಗ್ರ ಸಂಘಟನೆಯ ನಂಟಿನ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಉಳ್ಳಾಲದಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿರುವ ದಂತ ವೈದ್ಯೆ ದೀಪ್ತಿ

ಬೆಂಗಳೂರು: ದುಬೈನಿಂದ ಬಂದಿದ್ದ ಇಂಡಿಗೋ ವಿಮಾನದ ಸೀಟ್ ಕೆಳಗಡೆ ಬಚ್ಚಿಡಲಾಗಿದ್ದ ರೂ. 1.38,60,000 ಮೌಲ್ಯದ 2.8 ಕೆಜಿ ತೂಕದ ಚಿನ್ನದ ನಾಣ್ಯ ಅಥವಾ ಬಾರ್ ಗಳನ್ನುಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಬೆಳಗ್ಗೆ 10-30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದು ತಲುಪಿದ  ನಂಬರ್- 6E 096

ಬೆಂಗಳೂರು: ಅದಮಾರು ಮಠದ ಬಾಣಸಿಗರಾಗಿದ್ದ ದಿವಂಗತ ಅನಂತ ಭಟ್ಟ ಅವರ ಪತ್ನಿಗೆ ಜಮೀನಿನ ಹಕ್ಕು ನೀಡುವ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅದಮಾರು ಮಠದ ಅಡುಗೆಯವರ ಪತ್ನಿಗೆ ತುಂಡು ಜಮೀನಿನ ಸ್ವಾಧೀನ ಹಕ್ಕು ನೀಡಿ ಏಕಸದಸ್ಯ ನ್ಯಾಯಾಧೀಶರು ನೀಡಿದ್ದ ಆದೇಶವನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರಿದ್ದ ವಿಭಾಗೀಯ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಫಿರೋಜ್ ಪುರ ಭೇಟಿ ವೇಳೆ ಉಂಟಾದ ಭದ್ರತಾ ಲೋಪಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಪ್ರಧಾನ ಮಂತ್ರಿಗಳು ಹೋಗುತ್ತಿದ್ದ ವಾಹನಕ್ಕೆ ಭದ್ರತಾ ಲೋಪ ಉಂಟಾದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರಪತಿಗಳು

ಬೆಂಗಳೂರು: ವಿಧಾನ ಪರಿಷತ್ ನ 25 ನೂತನ ಸದಸ್ಯರು ಇಂದು ಗುರುವಾರ(ಜ.6) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿಕೊಂಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ ಹೆಚ್ಚು ಬೆಂಬಲಿಗರು ಭಾಗಿಯಾಗಿದ್ದಾರೆ. ಜನಪ್ರತಿನಿಧಿಗಳಿಂದಲೇ ಕೊರೋನಾ ನಿಯಮ ಉಲ್ಲಂಘನೆ: ಸರ್ಕಾರ

ನವದೆಹಲಿ: ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೊಸ ವರ್ಷದ ನಂತರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90 ಸಾವಿರದ 928 ಹೊಸ ಕೇಸುಗಳು ವರದಿಯಾಗಿದ್ದು 325 ಮಂದಿ ಮೃತಪಟ್ಟಿದ್ದಾರೆ. ಮೊನ್ನೆ ದೇಶದಲ್ಲಿ 58,097 ಹೊಸ ಕೋವಿಡ್ ಪ್ರಕರಣಗಳು