Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕೆಮ್ಮಣ್ಣು : ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಮ್ಮಣ್ಣು ಪಡುಕುದ್ರು ಹಳೆ ಸೇತುವೆ ಕುಸಿದು ಸ್ವರ್ಣಾ ನದಿಯಲ್ಲಿ ಪರಿಸರ ಅನಾಹುತ ಉಂಟಾಗಿದೆ. ಪಡುಕುದ್ರು, ತಿಮ್ನಣಕುದ್ರು, ಹೊನ್ನಪ್ಪ ಕುದ್ರು ನಡುಕುದ್ರು ಮೂಡಲಕಟ್ಟಾ ನೀರಿನ ಮಾರ್ಗ ಹರಿವಿಗೆ ಸಂಪರ್ಕ ಕಲ್ಪಿಸುವ ಹಿಂಬದಿ ಹೊಳೆಗೆ ತಡೆಯಾಗಿದ್ದು ನೀರಿನ ಹರಿತಕ್ಕೆ ತಡೆ ಉಂಟಾಗಿದ್ದು ಮುಂದಿನ ದಿನಗಳಲ್ಲಿ ನದಿ ಪರಿಸರ

ಉಡುಪಿ: ಸಮಾಜದ ಎಲ್ಲಾ ಸ್ತರದ ಜನತೆಯನ್ನು ತಲುಪುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ವೃತ್ತಿಪರರನ್ನೊಳಗೊಂಡಿರುವ ಪ್ರಕೋಷ್ಠಗಳನ್ನು ರಚಿಸಲಾಗಿದೆ. ಪ್ರಕೋಷ್ಠಗಳ ಬದ್ಧತೆ ಮತ್ತು ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಮೇ 15ರಂದು ಉಡುಪಿಯ ಹೋಟೆಲ್

ಬೆಂಗಳೂರು:ಮೇ 17. ವಿಧಾನ ಪರಿಷತ್​ನ ಹಂಗಾಮಿ ಸಭಾಪತಿಯನ್ನಾಗಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ಮೇ 16ರಂದು ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ

ಜೈಪುರ: ಮೇ 17. ಕಾರು-ಟ್ರಕ್ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು,12 ಮಂದಿ ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ದೆಹಲಿ-ಜೈಪುರ ಹೆದ್ದಾರಿಯಲ್ಲಿ ನಡೆದಿದೆ. ಇವರೆಲ್ಲರೂ ಅಗಲಿದ ತಮ್ಮ ಕುಟುಂಬದ ಸದಸ್ಯರೊಬ್ಬರ ಅಂತ್ಯಕ್ರಿಯೆಗಾಗಿ ಸೋಮವಾರ ಬೆಳಗ್ಗೆ ಹರಿದ್ವಾರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಮೃತರನ್ನು ಭಾನುರಾಮ್ (35), ಮಹೇಂದ್ರ

ಭಟ್ಕಳ : ಬಂದರಿನಲ್ಲಿ ಲಂಗರು ಹಾಕಿದ್ದ ನಾಲ್ಕು ಬೋಟುಗಳು ಪಲ್ಟಿಯಾಗಿ ಮುಳಿಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಬಂದರು ಪ್ರದೇಶದಲ್ಲಿ ಹೂಳು ತುಂಬಿದ್ದು ನಿನ್ನೆ ರಾತ್ರಿ ಸುರಿದ ಮಳೆಯಿಂದ ಮತ್ತಷ್ಟು ಹೂಳು ಸಂಗ್ರಹವಾಗಿದ್ದು ಭಟ್ಕಳದ ದುರ್ಗಾಂಬಿಕಾ ದೇವಿ, ಶ್ರೀ ನಿತ್ಯಾನಂದ, ಜೈನ ಜಟಗಾ, ಗಗನ 3

ಬೆಳ್ತಂಗಡಿ: ಉಜಿರೆಯಿಂದ ಮೂಡಿಗೆರೆಗೆ ಕ್ವಾಲಿಸ್ ಕಾರಿನಲ್ಲಿ ಕೋಕಂ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಗಾಂಜಾ ತಯಾರಿಸಿ ಮೂಡಿಗೆರೆ ಕಡೆ ಕ್ವಾಲಿಸ್ ಕಾರಿನಲ್ಲಿ ಕೋಕಂ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ

ಮಣಿಪಾಲ : ಉಡುಪಿ ನಗರದ ಮಣಿಪಾಲ ಸಮೀಪದಲ್ಲಿ ಕಾರಿನ ಚಾಲಕನನ್ನು ಬಾಡಿಗೆಯ ನೆಪದಲ್ಲಿ ನಾಲ್ಕು ಜನ‌ ಕರೆದುಕೊಂಡು ಹೋಗಿ ಆತನ ಬಳಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಉಳ್ಳಾಲದ ನಿವಾಸಿ ಚರಣ್,ಶಿರ್ವ ನಿವಾಸಿ ಅಝರುದ್ದೀನ್,ಬಂಟ್ವಾಳ ನಿವಾಸಿ ಶರತ್ ಪೂಜಾರಿ ಹಾಗೂ ಮಂಗಳೂರಿನ ನಿವಾಸಿ ಜಯಪ್ರಸಾದ್

ಲುಂಬಿನಿ: ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ. ಹಲಿ ಅಂತರರಾಷ್ಟ್ರೀಯ ಬೌದ್ಧ ಒಕ್ಕೂಟಕ್ಕೆ (ಐಬಿಸಿ) ಸೇರಿದ ಜಾಗದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ

ಕೀವ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ನಡುವೆ, ಅವರು ಬ್ಲಡ್‌ ಕ್ಯಾನ್ಸರ್‌ ನಿಂದ ಬಳಲುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ಸೋಮವಾರ ವರದಿಗಳು ತಿಳಿಸಿವೆ. ಪುಟಿನ್ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ರಷ್ಯಾ ಅಧ್ಯಕ್ಷರೊಂದಿಗೆ ನಿಕಟ ಸಂಬಂಧ ಹೊಂದಿರುವ ಹೆಸರು ಹೇಳಲು ಇಚ್ಚಿಸದ ಸರ್ಕಾರದ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಅಲ್ಲದೆ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ