Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನಿಯಮಗಳನ್ನು ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಶನಿವಾರ ಹೇಳಿದ್ದಾರೆ. ಮತದಾರರು ತಮ್ಮ ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಕಡ್ಡಾಯವಲ್ಲ. ಸ್ವಯಂಪ್ರೇರಿತವಾಗಿರುತ್ತದೆ. ಆದರೆ ಆಧಾರ್ ಲಿಂಕ್ ಮಾಡದವರು "ಸಾಕಷ್ಟು ಕಾರಣಗಳನ್ನು ನೀಡಬೇಕಾಗುತ್ತದೆ" ಎಂದು ಅವರು

ಉಡುಪಿ: ಪಿರ್ಯಾದಿದಾರರಾದ ಷಣ್ಮುಗಂ (41) ತಂದೆ: ದಿ. ಮಾರಪ್ಪ ವಾಸ: ನಂಬ್ರ: 248, ಮಾಹಿಧರ ಪಾರ್ಚೂನ, ಸಿಟಿ ಟೋಲ್‌ಗೇಟ್‌ ಬಳಿ, ಅತ್ತಿಬೆಲೆ, ಚಿಕ್ಕನಹಳ್ಳಿ, ಇವರು ತನ್ನ ಸಂಸಾರದೊಂದಿಗೆ ದಿನಾಂಕ 13/05/2022 ರಂದು ಸಂಜೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದು,

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಆಕೆಗೆ ಡ್ರಗ್ಸ್ ನೀಡಿ, ನಂತರ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡರು. ಇದೇ ವೇಳೆ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ಆಡಳಿತ ಮಂಡಳಿ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿತು. ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ

ಬೆಂಗಳೂರು: ಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹೊಡೆದಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿಸಿ ಆರೋಪಿ ನಾಗ ಪರಾರಿಯಾಗಿದ್ದ. 16 ದಿನಗಳ ಬಳಿಕ ನಾಗನನ್ನು ಪೊಲೀಸರು ಬಂಧಿಸಿ

ನವದೆಹಲಿ: ರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಬೆಂಕಿ ಅವಘಡದ ನಂತರ ನಾಪತ್ತೆಯಾದವರ ಸಂಬಂಧಿಕರು ತಮ್ಮ ಪ್ರೀತಿಪಾತ್ರರನ್ನು ಹುಡುಕಲು ಸಾಧ್ಯವಾಗದೆ ಭಯಭೀತರಾಗಿದ್ದಾರೆ. ಯಶೋಧ ದೇವಿಗಾಗಿ ನಾವು ಸ್ಥಳದಲ್ಲಿ ಸಾಕಷ್ಟು ಹುಡುಕಾಟ ನಡೆಸುತ್ತಿದ್ದೇವೆ.

ಅಬುಧಾಬಿ:ಮೇ 13. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್(73) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರದಿಂದ 40 ದಿನಗಳ ಕಾಲ ಅಧ್ಯಕ್ಷರ ನಿಧನಕ್ಕೆ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಘೋಷಿಸಿದೆ. ಇನ್ನು ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕ

ನವದೆಹಲಿ: 1,600-ಅಡಿ ಉದ್ಧದ ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಧಾವಿಸುತ್ತಿದೆ ಎಂದು ಬಾಹ್ಯಾಕಾಶ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅಮೆರಿಕದ ಬಾಹ್ಯಾಕಾಶ ಸಂಸ್ಥೆ NASA (ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್), ದೈತ್ಯ ಬಾಹ್ಯಾಕಾಶ ಶಿಲೆ (ಕ್ಷುದ್ರಗ್ರಹ) 388945 (2008 TZ3) ಭೂಮಿಯತ್ತ ಧಾವಿಸುತ್ತಿದ್ದು, ಮೇ 16 ರಂದು ಮುಂಜಾನೆ

ಉಡುಪಿ:ಮೇ 12. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ. ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಡಿವೈಡರ್ ಮೇಲೆ ಖಾಸಗಿ ಎಕ್ಸ್ ಪ್ರೆಸ್ ಬಸ್ ಮಗುಚಿ ಬಿದ್ದಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡು ಉಡುಪಿ ಮತ್ತು‌ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ

ಬೆಂಗಳೂರು: ಜುಲೈ 4 ರಂದು ಖಾಲಿಯಾಗಲಿರುವ ವಿಧಾನ ಪರಿಷತ್ ನಾಲ್ಕು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. ಎರಡು ಪದವೀಧರ ಕ್ಷೇತ್ರಗಳು ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಮತದಾನ ನಡೆಯಲಿದ್ದು, ಜೂನ್ 15 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಈ ನಾಲ್ಕು