Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಮಂಗಳೂರು:ಜು 30. ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯವು ಐದು ದಿನಗಳ ಕಸ್ಟಡಿಗೆ ಒಪ್ಪಿಸಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಪ್ರವೀಣ್ ಹತ್ಯೆ ನಡೆದ ಒಂದೇ ದಿನದಲ್ಲಿ ಆರೋಪಿಗಳಾದ ಜಾಕಿರ್ ಮತ್ತು ಶಫೀಕ್‌ನನ್ನು

ಉಡುಪಿ: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಬ್ಬರಾದ ಬೆಳ್ಳಾರೆಯ ಶಫೀಕ್ ಹಾಗೂ ಸವಣೂರಿನ ಝಾಕಿರ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ಇವರನ್ನು ನ್ಯಾಯಾಲಯದ ಮು೦ದೆ ಹಾಜರುಪಡಿಸಿದ ಬಳಿಕ ಅವರಿಗೆ ನ್ಯಾಯ೦ಗ ಬ೦ಧನವಾದಲ್ಲಿ ಕಾರಾಗ್ರಹದಲ್ಲಿ ಸ್ಥಳವಿಲ್ಲದಿದ್ದರೆ ಅವರನ್ನು ಬೇರೆಯಾವುದೇ ಕಾರಾಗ್ರಹದಲ್ಲಿ ಬ೦ಧನದಲ್ಲಿ

ಮಂಗಳೂರು:ಜು 29. ಮಹತ್ವದ ಬೆಳವಣಿಗೆಯಲ್ಲಿ ಬೆಳ್ಳಾರೆ, ಸುಬ್ರಮಣ್ಯ ಠಾಣೆಯ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ ಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣೆಯ ಕಾನೂನು

ಬೆಂಗಳೂರು:ಜು 29.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಪೊಲೀಸರು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಚರ್ಚೆ ನಡೆಸಿ ಈ

ತೆಲಂಗಾಣ: ಜು 29. ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಪಾಲಮುರು ಏತ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕ್ರೇನ್‌ ತಂತಿ ತುಂಡಾಗಿ 5 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಐವರು ಕಾರ್ಮಿಕರನ್ನು ಪೂರ್ವ ಗೋದಾವರಿ ಜಿಲ್ಲೆಯ ಸಿನು (35), ಜಾರ್ಖಂಡ್‌ನ ಭೋಲಾನಾಥ್ (40), ಪ್ರವೀಣ್, ಕಮಲೇಶ್ ಮತ್ತು

ಇಸ್ಲಾಮಾಬಾದ್: ಜು 29. ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಹಿಂದೂ ಮಹಿಳೆಯೊಬ್ಬರು ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಆ ಮೂಲಕ ಮೊದಲ ಬಾರಿಗೆ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಪಾಕಿಸ್ತಾನದ ಹಿಂದುಳಿದ ಮತ್ತು ಚಿಕ್ಕ ಜಿಲ್ಲೆಯಾದ ಜಕುಬಾಬಾದ್‌ ಮೂಲದ ಮನೀಷಾ ರೂಪೀಟ ಎಂಬವರೇ ಮೊದಲ ಬಾರಿಗೆ ಡಿಎಸ್‌ಪಿ ಗದ್ದುಗೆಗೇರಿದ ಅಲ್ಪಸಂಖ್ಯಾತ ಹಿಂದೂ

ಕಾಸರಗೋಡು:ಜು 29. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆ.ಎಸ್.ಆರ್ .ಟಿ.ಸಿ ಬಸ್ಸಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ36.47 ಲಕ್ಷ ರೂ. ನಗದನ್ನು ಜು .29 ರ ಮುಂಜಾನೆ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು , ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಮಹಾರಾಷ್ಟ್ರ ಸಾಂಗ್ಲಿಯ ಗೋಪಾಲ್ ಎಂದು ಗುರುತಿಸಲಾಗಿದೆ. ಮಂಜೇಶ್ವರ ಚೆಕ್ ಪೋಸ್ಟ್

ನವದೆಹಲಿ:ಜು 28. ’ನನ್ನೊಂದಿಗೆ ಮಾತನಾಡಬೇಡಿ’ ಎಂದು ಬಿಜೆಪಿಯ ಸ್ಮೃತಿ ಇರಾನಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸೂಚಿಸಿದ ಪ್ರಸಂಗ ಇಂದು ಸಂಸತ್ತಿನಲ್ಲಿ ನಡೆದಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಕರೆದಿದ್ದಕ್ಕಾಗಿ ಸಂಸತ್ತಿನಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಚೌಧರಿ ವಿರುದ್ದ

ಮಂಗಳೂರು:ಜು 28. (DaijiworldNews/DB): ದ.ಕ. ಜಿಲ್ಲೆಯ ವಿವಿಧೆಡೆ ಪ್ರಕ್ಷುಬ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜುಲೈ 28ರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಗೊಳಗಾದ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಋಷಿಕೇಶ್ ಸೋನಾವಣೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳ್ಳಾರೆಯ ಶಫೀಕ್ ಹಾಗೂ ಸವಣೂರಿನ ಝಾಕಿರ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ ಎಂದು ತಿಳಿಸಿದರು. ಹೆಚ್ಚಿನ ವಿಚಾರಣೆಯ ಬಳಿಕ ಬಂಧಿತರನ್ನು