Log In
BREAKING NEWS >
ಅಪಾರ ಭಕ್ತಜನಸ್ತೋಮದ ನಡುವೆ ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಮಹೋತ್ಸವದ "ರ೦ಗಪೂಜೆ" ಸ೦ಪನ್ನ...ಏಕಾದಶಿಯ ಪ್ರಯುಕ್ತ ಸೋಮವಾರದ೦ದು ಸ೦ಜೆ 5ಗ೦ಟೆಗೆ ನಗರಭಜನೆ ಆರ೦ಭ...

ಬೆಳ್ಳಾರೆ:ಜು 27:: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮೊಹ್ಮದ್‌ ಶಫೀಕ್‌ ಬೆಳ್ಳಾರೆ (27), ಜಾಕೀರ್‌ ಸವಣೂರು (29) ಎಂಬ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನ ವಿಷಯ ತಿಳಿಯುತ್ತಿದ್ದಂತೆ ಗುತ್ತಿಗಾರು ಪೇಟೆಯಲ್ಲಿ ಅಂಗಡಿಗಳ ಮೇಲೆ ಕಲ್ಲೆಸೆತ , ಗಲಾಟೆ ಆರಂಭವಾಗಿದೆ. ಶಫೀಕ್ ಗುತ್ತಿಗಾರಿನ

ಉಡುಪಿ:ಜು 27.ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಬಿಜೆಪಿ ಸರಕಾರದ ಮೇಲೆ ಅಸಮಾಧಾನಗೊಂಡು ಸಾಮೂಹಿಕವಾಗಿ ಉಡುಪಿಯ ಯುವ ಮೋರ್ಚಾ ಸೇರಿದಂತೆ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದಾರೆ. ಕೇವಲ ಬೈಲ ಕೆರೆ ವಾರ್ಡ್ ಒಂದರಲ್ಲಿ 50 ಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.ಉಡುಪಿ ತಾ ಲೂಕಿನ ಮಲ್ಪೆಯ ಬೈಲಕೆರೆ ಬಿಜೆಪಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ (Praveen Nettaru murder case) ಸಂಬಂಧ ಗುರುವಾರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲೆ ಎಸ್​ಪಿ ಋಷಿಕೇಶ್

ಸುಳ್ಯ; ಜು 28. ದುಷ್ಕರ್ಮಿಗಳಿಂದ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆಯ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಅವರನ್ನು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಪುತ್ರ ಶೋಕದಲ್ಲಿರುವ ಪ್ರವೀಣ್ ತಂದೆ ಶೇಖರ ಪೂಜಾರಿ ಅವರ ಹೃದಯ ಬಡಿತದಲ್ಲಿ ಏರುಪೇರುಂಟಾಗಿದೆ. ಈ ಹಿನ್ನೆಲೆಯಲ್ಲಿ ಆಂಬುಲೆನ್ಸ್‌ ಮೂಲಕ ಅವರನ್ನು ಬೆಳ್ಳಾರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ

ಭಕ್ತರೊಬ್ಬರಿ೦ದ ಉಡುಪಿ ಶ್ರೀಕೃಷ್ಣಮಠಕ್ಕೆ ಬುಧವಾರದ೦ದು ಸಾಯ೦ಕಾಲದ೦ದು ಭರ್ಜರಿ ಹೂವಿನ ಅಲ೦ಕಾರವನ್ನು ಸೇವೆಯ ರೂಪದಲ್ಲಿ ಮಾಡಿಸಲ್ಪಟ್ಟಿದ್ದು ಈ ಸೇವೆಯು ನಾಳೆ ಗುರುವಾರದ೦ದು ಶ್ರೀಕೃಷ್ಣದೇವರಿಗೆ ಸಲ್ಲಿಸಲಾಗುತ್ತಿದೆ.ಈ ದೃಶ್ಯವನ್ನು ಶ್ರೀಕೃಷ್ಣ ಭಕ್ತಜನರೆಲ್ಲರೂ ಕಣ್ಣಾರೆಕ೦ಡರೆ ಮತ್ತೆ ಮತ್ತೆ ನೋಡಲೇ ಬೇಕೆನ್ನುವ೦ತೆ ಮಾಡಲ್ಪಟ್ಟಿದೆ.ಇದು ಕಳೆದ ಎರಡುವರುಷಗಳ ನ೦ತರ ಉಡುಪಿಯ ಶ್ರೀಕೃಷ್ಣಮಠಕ್ಕೆ ಮಾಡಲ್ಪಟ್ಟ ಅಲ೦ಕಾರವೆನ್ನ ಬೇಕಾಗುತ್ತದೆ,

ಮಂಗಳೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಹಿಂದೂ ಪರ ಕಾರ್ಯಕರ್ತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಳ್ಳಾರೆಯಲ್ಲಿ ಪ್ರತಿಭಟನೆ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇನ್ನು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಗುಂಪನ್ನು ಚದುರಿಸಲು ಪೊಲೀಸರು

ಮಂಗಳೂರು: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ಮಾಹಿತಿಯ ಪ್ರಕಾರ ಐವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಹತ್ಯೆಯನ್ನು ಖಂಡಿಸಿ ಪುತ್ತೂರು, ಬೆಳ್ಳಾರೆ, ಸುಳ್ಯ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಹಿಂದು ಪರ ಸಂಘಟನೆಗಳು ಕರೆ ನೀಡಿವೆ. ಮರಣೋತ್ತರ ಪರೀಕ್ಷೆ

ಬೆಂಗಳೂರು: ಫಾರ್ಮ್ ಹೌಸ್ ನ ನೀರಿನ ಸಂಪ್ ನಲ್ಲಿ ಶೇಖರಿಸಿಡಲಾಗಿದ್ದ ಸುಮಾರು 2.68 ಕೋಟಿ ರೂ ಮೌಲ್ಯದ ಸಾವಿರಾರು ಕೆಜಿ ರಕ್ತಚಂದನ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿ ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪಶ್ಚಿಮ ವಿಭಾಗದ ಪೊಲೀಸರು ಫಾರ್ಮ್ ಹೌಸ್ ನ ನೀರಿನ ಸಂಪ್

ಮಲ್ಪೆ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನಲ್ಲಿ ನಡೆದ 1.80 ಲಕ್ಷ ರೂ. ಮೌಲ್ಯದ 80 ಸೆಂಟ್ರಿಂಗ್ ಶೀಟ್ ಮತ್ತು 4 ಪಿಲ್ಲರ್ ಬಾಕ್ಸ್ ಸೆಟ್ ಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಮಲ್ಪೆ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಸುಬ್ರಹ್ಮಣ್ಯ ನಗರ ನಿವಾಸಿಗಳಾದ ದೀಪಕ್ (19), ಕಲ್ಯಾಣಪುರ ಮೂಡು

ಪುತ್ತೂರು: ಹತ್ಯೆಯಾಗಿರುವ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನದ ವೇಳೆ ಬೆಳ್ಳಾರೆ ಜಂಕ್ಷನಿಗೆ ಆಗಮಿಸಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಧಿಕ್ಕಾರ ಕೂಗಿರುವ ಘಟನೆ ನಡೆದಿದೆ. ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್‌ ಕುಮಾರ್ ಮತ್ತು