Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಮುಂಬೈ: ಮಹಾರಾಷ್ಟ್ರದಲ್ಲಿ ಸೇನೆ ವರ್ಸಸ್ ಸೇನೆ ನಡುವಿನ ಆಂತರಿಕ ಯುದ್ಧದಲ್ಲಿ ಮೊದಲ ಬಾರಿ ಶಿಂಧೆ ಬಣಕ್ಕೆ ಹಿನ್ನೆಡೆಯಾಗಿದೆ. ಮುಂಬೈನ ಐಕಾನಿಕ್ ಶಿವಾಜಿ ಪಾರ್ಕ್‌ನಲ್ಲಿ ದಸರಾ ರ್ಯಾಲಿ ಆಯೋಜಿಸಲು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡುವುದರೊಂದಿಗೆ ಶಿವಸೇನೆಯ ಏಕನಾಥ್ ಶಿಂಧೆ ಬಣಕ್ಕೆ ಇಂದು ದೊಡ್ಡ ಹೊಡೆತ ಬಿದ್ದಿದೆ.

ಡೆಹ್ರಾಡೂನ್: ಹದಿಹರೆಯದ ಮಹಿಳಾ ರಿಸೆಪ್ಷನಿಸ್ಟ್ ಮೃತದೇಹವನ್ನು ಪೊಲೀಸರು ಇಂದು ಬೆಳಗ್ಗೆ ಚೀಲಾ ಕಾಲುವೆಯಿಂದ ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡರೊಬ್ಬರ ಪುತ್ರ ಅಕ್ರಮವಾಗಿ ನಡೆಸುತ್ತಿದ್ದ ರೆಸಾರ್ಟ್ ನಲ್ಲಿ ಈ ಹತ್ಯೆ ನಡೆದಿದ್ದು, ಆರೋಪಿಗಳು ಆಕೆಯ ಮೃತದೇಹವನ್ನು ಕಾಲುವೆಯಲ್ಲಿ ಹೂತ್ತಿದ್ದರು. ಈ ಪ್ರಕರಣದ ಬೆಳವಣಿಗೆಯನ್ನು ಉತ್ತರ ಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಮ್ಮ ಟ್ವೀಟರ್ ಖಾತೆಯಲ್ಲಿ

ತೆಹ್ರಾನ್: ಪೊಲೀಸರ ವಶದಲ್ಲಿದ್ದ ಮಹ್ಸಾ ಅಮಿನಿಯ ಸಾವಿನ ನಂತರ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಎನ್‌ಜಿಒ ಶುಕ್ರವಾರ ತಿಳಿಸಿದೆ. ಉತ್ತರ ಗಿಲಾನ್ ಪ್ರಾಂತ್ಯದ ರೆಜ್ವಾನ್ ಶಹರ್ ಪಟ್ಟಣದಲ್ಲಿ ಗುರುವಾರ ರಾತ್ರಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಆರು ಜನರು

ಮಂಗಳೂರು/ ಬೆಂಗಳೂರು: ದೇಶಾದ್ಯಂತ ಮತ್ತೊಮ್ಮೆ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಮತ್ತು ಜಾರಿ ನಿರ್ದೇಶನಾಲಯಗಳು(ED) ತನ್ನ ದಾಳಿ, ಶೋಧ ಕಾರ್ಯವನ್ನು ಮುಂದುವರಿಸಿವೆ. ದೇಶಾದ್ಯಂತ ಇಂದು ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಫ್ಐ ಸಂಘಟನೆಯ 100ಕ್ಕೂ

ಬೆಂಗಳೂರು: ಸರ್ಕಾರಕ್ಕೆ ತೀವ್ರ ಮುಜುಗರ ತಂದಿರುವ ಸಿಎಂ ಬೊಮ್ಮಾಯಿ ಅವರ ಫೋಟೊಗಳಿರುವ `ಪೇ ಸಿಎಂ ಪೇ’ ಎಂಬ ಪೋಸ್ಟರ್‌ಗಳನ್ನು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಅಂಟಿಸಿದ್ದು ತೀವ್ರ ಸಂಚಲನ ಉಂಟುಮಾಡಿತು. ಪೋಸ್ಟರ್ ಅಂಟಿಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣಗಳ ಸಿಬ್ಬಂದಿ, ಕಾರ್ಯಕರ್ತರನ್ನು ಮಧ್ಯರಾತ್ರಿ ಕರೆದುಕೊಂಡು ಹೋಗಿ ಪೊಲೀಸ್

ಕೋಲಾರ:  ದೇವರ ಉತ್ಸವ ಮೂರ್ತಿ ಮೆರವಣಿಗೆ ವೇಳೆ ದಲಿತ ಬಾಲಕನೊಬ್ಬ ಮೂರ್ತಿ ಮುಟ್ಟಿರುವ ಕಾರಣಕ್ಕೆ ದಲಿತ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೊಭಾ ಹಾಗೂ ರಮೇಶ್ ದಂಪತಿ, ಕಾಲೋನಿಯಲ್ಲಿ ವಾಸ ಮಾಡುತ್ತಿದ್ದರು. 10 ದಿನಗಳ ಹಿಂದೆ ಗ್ರಾಮದ

ಕುಂದಾಪುರ:ಸೆ 21.ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹಾಗೂ ಬೈಂದೂರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖವನ್ನು ಹೊಂದಿರುವ ಪೇಸಿಎಂ ಪೋಸ್ಟರ್‌ಗಳನ್ನು ನಗರದ ಹಲವು ಕಡೆ ಅಂಟಿಸಲಾಗಿದ್ದು, ಇದರಿಂದ ಸಿಎಂ ಬೊಮ್ಮಾಯಿ ತೀವ್ರ ಆಕ್ರೋಶಗೊಂಡಿದ್ದು, ಇದರ ಹಿಂದೆ ಇರುವವರ ವಿರುದ್ಧ ಕೇಸ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಪೇಸಿಎಂ ಪೋಸ್ಟರ್ ಅಂಟಿಸಿ ಅನಾಹುತ ಸೃಷ್ಟಿಸಿದವರ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕೇಂದ್ರ

ಬೆಂಗಳೂರು: ಬೆಂಗಳೂರು ಭಾರಿ ಮಳೆ, ಪ್ರವಾಹದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿರುವ ಒತ್ತುವರಿ ತೆರವು ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಮಾಲೀಕರ ಅಸೋಸಿಯೇಷನ್ ​​ಸದಸ್ಯರ ಅತಿಕ್ರಮಣ ಕುರಿತು ಬಿಬಿಎಂಪಿ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ಪೂರ್ವ ಪಾರ್ಕ್‌ರಿಡ್ಜ್ ಅಪಾರ್ಟ್‌ಮೆಂಟ್ ಮಾಲೀಕರ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,

ಮುಂಬೈ:ಚಿಕಿತ್ಸೆ ಫಲಕಾರಿಯಾಗದೇ ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ ಅವರು ಇಂದು ನಿಧನ ಹೊಂದಿದ್ದಾರೆ. ರಾಜು ಅವರು ಕಳೆದ 41 ದಿನಗಳಿಂದ ಆಸ್ಪತ್ರೆಯಲ್ಲಿದು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆನೋವು ಕಾಣಿಸಿಕೊಂಡು ಹಾಸ್ಯನಟ ರಾಜು ಶ್ರೀವಾತ್ಸವ ಅವರು ಕುಸಿದು ಬಿದಿದ್ದರು. ಅವರನ್ನು ಬಳಿಕ ಆಗಸ್ಟ್ 10 ರಂದು ದೆಹಲಿಯ ಏಮ್ಸ್‌ಗೆ