Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಕೋಲ್ಕತ್ತಾ: ಕ್ರಿಕೆಟ್ ನಲ್ಲೂ ರಾಜಕೀಯ ಮಾಡಬೇಡಿ, ಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲು ಸೌರವ್ ಗಂಗೂಲಿಗೆ ಅವಕಾಶ ನೀಡಿ.. ಕ್ರಿಕೆಟ್ ನ ಭವಿಷ್ಯದ ದೃಷ್ಟಿಯಿಂದ ಅವರು ಅತ್ಯುತ್ತಮ ಆಯ್ಕೆ ಎಂದು ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಅವರು,

ಶ್ರೀಕೃಷ್ಣಮಠಕ್ಕೆ ಬಿರ್ಲಾ ಕಂಪನಿಯ ಮಾಲಕರಾದ ಸಿ.ಕೆ.ಬಿರ್ಲಾ ರವರ ತಾಯಿ ನಿರ್ಮಲಾ ಬಿರ್ಲಾರವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಸ್ವಾಗತಿಸಿದರು.ಆಡಳಿತ ವರ್ಗದ ವಾದಿರಾಜ್ ರವರು ಉಪಸ್ಥಿತರಿದ್ದರು.

ಉಡುಪಿ: ಭಾರತ ಭೂಮಿಯ ಪ್ರಸಿದ್ಧ ಕ್ಷೇತ್ರ ಬದರಿಯಲ್ಲಿ ರಕ್ಷಣಾವ್ಯವಸ್ಥೆಯ ಭಾರತೀಯ ಸೈನಿಕರು ಗೀತಾ ಲೇಖನ ದೀಕ್ಷೆ ಸ್ವೀಕರಿಸಿ ಭಾವಿ ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿ ಗೀತಾ ಲೇಖನ ಯಜ್ಞ ಯೋಜನೆಯನ್ನು ಪ್ರಶಂಸೆಗೈದು ಸ್ವಾಗತಿಸಿದರು. ಗೀತಾ ಪ್ರಚಾರಕ ಪ್ರದ್ಯುಮ್ನ ಪ್ರಖಂಡದ ರಮೇಶ ಭಟ್ ಯಾತ್ರಾ

ಅರಸೀಕೆರೆ(ಹಾಸನ): ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಮೃತರು ಯಾರ್ಯಾರು?: ಸರ್ಕಾರಿ ಬಸ್ಸು, ಹಾಲಿನ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಈ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆ ವ್ಯವಹಾರದಲ್ಲಿ ಡಾಲರ್ ಮೌಲ್ಯ ವರ್ಧನೆಯಾಗುತ್ತಿರುವಾಗ ಭಾರತೀಯ ರೂಪಾಯಿ ಮೌಲ್ಯ ಕೂಡ ವರ್ಧನೆಯಾಗುತ್ತಿದೆ. ಭಾರತದ ಆರ್ಥಿಕತೆಯ ಬುಡ ಗಟ್ಟಿಯಾಗಿದೆ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಹಣದುಬ್ಬರ ಕಡಿಮೆಯಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ. ವಾಷಿಂಗ್ಟನ್ ನಲ್ಲಿ ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವಾರ್ಷಿಕ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸ್ವಲ್ಪದರಲ್ಲಿಯೇ ಅಪಾಯದಿಂದ ಪಾರಾಗಿದ್ದಾರೆ. ಗಂಗಾ ನದಿಯ ದಡದಲ್ಲಿರುವ ಛತ್ ಫಾಟ್ ನ್ನು ಪರಿಶೀಲಿಸಲು ಹೋದಾಗ ಅವರಿದ್ದ ದೋಣಿ ಜೆಪಿ ಸೇತುವೆ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.  ಆದಾಗ್ಯೂ, ದೋಣಿಗೆ ಯಾವುದೇ ಗಮನಾರ್ಹ ರೀತಿಯಲ್ಲಿ ಹಾನಿಯಾಗಿಲ್ಲ. ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪಾಟ್ನಾದ

ಬೆಳಗಾವಿ: ಮುಂಬೈ-ಕರ್ನಾಟಕದ ಭಾಗದ ಅಭಿವೃದ್ದಿಯಲ್ಲಿ ಪ್ರಭಾಕರ್ ಕೋರೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಅವರು, 'ಮುಂಬೈ

ಬೆಂಗಳೂರು: ಎಸ್​ಸಿ ಹಾಗೂ ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ತೀರ್ಮಾನಿಸಿದ ಬೆನ್ನಲ್ಲೇ ಇದೀಗ ಪಂಚಮಸಾಲಿಗೆ 2ಎ ಮೀಸಲಾತಿ ನೀಡಲೇಬೇಕೆಂದು ಬಸವ ಜಯಮೃತ್ಯುಂಜಯಶ್ರೀ ಸರ್ಕಾರಕ್ಕೆ ಮತ್ತೆ ಗಡುವು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 13) ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಅ.21ರೊಳಗೆ 2ಎ ಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಅ.21ರಂದು ಹುಕ್ಕೇರಿಯಲ್ಲಿ

ಹಾಸನ: ಇತಿಹಾಸ ಪ್ರಸಿದ್ದ ಹಾಸನಾಂಬೆ ದೇವಾಲಯದ ಬಾಗಿಲು (Hasanamba Temple) ಇಂದು ತೆರೆಯಲಾಗಿದೆ. ಇಂದಿನಿಂದ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಮಾಡಲಾಗಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ಹಾಸನಾಂಬೆಯ ದರ್ಶನ ಕಲ್ಪಿಸಲಾಗುತ್ತದೆ. ಇಂದಿನಿಂದ ಅಕ್ಟೋಬರ್​ 27ರವರೆಗೂ

ವಿಟ್ಲ: ಮನೆ ಬಿಟ್ಟು ಹೋಗಿದ್ದ ಇಬ್ಬರು ಯುವತಿಯರನ್ನು ಹುಡುಕುತ್ತಿದ್ದ ಕುಟುಂಬಸ್ಥರು, ತಪ್ಪಾಗಿ ಗ್ರಹಿಸಿ ಬೇರೆ ಇಬ್ಬರು ಯುವತಿಯರಿಗೆ ಕಿರುಕುಳ ನೀಡಿದ ಘಟನೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಬುರ್ಖಾಧಾರಿ ಯುವತಿಯರು ನಾಪತ್ತೆಯಾಗಿದ್ದ ಹುಡುಗಿಯರನ್ನೇ ಹೋಲುತ್ತಿದ್ದರಿಂದ ಈ ಅಚಾತುರ್ಯ ನಡೆದಿದೆ ಯುವತಿಯೊಬ್ಬಳು ಕುಟುಂಬಸ್ಥರೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು