Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಮಂಗಳೂರು: ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ. ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ

ಮಂಗಳೂರು: ಪಿಎಫ್​ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್​ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಮಾತನಾಡಿದ, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ನಿಷೇಧಿತ ಪಿಎಫ್ಐಗೆ ಸೇರಿದ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಇಂಗ್ಲೆಂಡ್: ಅ 20: ಬ್ರಿಟನ್ ಪ್ರಧಾನಿ ಹುದ್ದೆಗೇರಿದ ಕೆಲವೇ ವಾರಗಳಲ್ಲೇ ಲಿಜ್ ಟ್ರಸ್‌ ಅವರಿಗೆ ಬಂಡಾಯದ ಬಿಸಿ ತಟ್ಟುತ್ತಿದ್ದು, ಸ್ವಪಕ್ಷೀಯರೇ ಬಂಡಾಯವೇಳುತ್ತಿದ್ದಾರೆ. ಇದೀಗ ಲಿಜ್ ನೇಮಕ ಮಾಡಿದ್ದ ಭಾರತೀಯ ಮೂಲದ ಬ್ಯಾರಿಸ್ಟರ್​ ಸುಯೆಲ್ಲಾ ಬ್ರಾವರ್​ಮನ್​​ ತಮ್ಮ ಗೃಹ ಇಲಾಖೆ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಿಯಾದ ಬಳಿಕ ಲಿಜ್ ಅವರು

ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್  ದಿ. ಪುನೀತ್ ರಾಜ್​ಕುಮಾರ್ ಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕುರಿತಂತೆ ಸಭೆ ನಡೆದಿತ್ತು. ನಂತರ ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ,

ಕತಾರ್ ನ ಯುವ ಇಂಜಿನಿಯರ್ ಶ್ರೀ ಪ್ರಸಾದ್ ದಂಪತಿಗಳಿಗೆ Rajamandri ಯಲ್ಲಿ ಶ್ರೀ ಸುಗುಣೇಂದ್ರ ತೀರ್ಥರ ಕೋಟಿ ಗೀತಾ ಲೇಖನದ ಪುಸ್ತಕವನ್ನು ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಶ್ರೀಪಾದರು  ಗೀತಾ ಲೇಖನ ದೀಕ್ಷೆ ನೀಡಿ ಹರಸಿದರು. ಗೀತಾ ಪ್ರಚಾರಕರಾದ ರಮೇಶ ಭಟ್ ಕೆ. ಉಪಸ್ಥಿತರಿದ್ದರು . ಶ್ರೀ ಪ್ರಸಾದ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 22 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ರೋಜ್‌ಗಾರ್ ಮೇಳದಲ್ಲಿ ಉದ್ದೋಗಕ್ಕೆ ಆಯ್ಕೆಯಾದ 75,000 ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ. ಈ ಸಂದರ್ಭದಲ್ಲಿ

ನವದೆಹಲಿ: ಆಟಗಾರರ ಭದ್ರತೆ ಪ್ರಮುಖ ವಿಷಯವಾಗಿರುವುದರಿಂದ ಮುಂದಿನ ವರ್ಷ ಏಷ್ಯಾಕಪ್‌ಗಾಗಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಹೇಳಿದ್ದಾರೆ. ಮುಂದಿನ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಸ್ಪರ್ಧಿಸಲು ಪಾಕಿಸ್ತಾನ ತಂಡವು ಭಾರತಕ್ಕೆ ಬರುವ ನಿರೀಕ್ಷೆ

ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ) ಬುಧವಾರ ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ 38 ಶಿಕ್ಷಕರನ್ನು ಬಂಧಿಸಿದ್ದು, ಈ ಬಂಧನದೊಂದಿಗೆ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 60ಕ್ಕೆ ಏರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ

ಮೈಸೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಮತ್ತು ತಮ್ಮ ಪುತ್ರ ಎಚ್ ಡಿ ಕುಮಾರಸ್ವಾಮಿ ಅವರ ನಡುವಿನ ವಿರಸವನ್ನು ಕೊನೆಗಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಮಾರಸ್ವಾಮಿ ಅವರ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ, ಮತ್ತು ಪಕ್ಷದಿಂದ ಒಂದು ಕಾಲು ಆಚೆ

ಭೋಪಾಲ್: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಟ 4 ಮಂದಿ ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಬನ್‌ಮೋರ್‌ ನಗರದಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವಿಗೀಡಾಗಿ 7 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಪರಿಣಾಮ ಕಟ್ಟಡದ ಗೋಡೆ ಕುಸಿದಿದ್ದು, ಕೆಲವರು