Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಚೆನ್ನೈ: ತಮಿಳುನಾಡಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಶ್ರೀಲಂಕಾ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ  ವಾಯು ಭಾರ ಕುಸಿತದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‌ಪೇಟ್‌ನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈ ನಗರದ ಹಲವೆಡೆ ಜಲಾವೃತವಾಗಿದೆ. ವಿಲ್ಲುಪುರಂ, ರಾಮನಾಥ ಪುರಂ ಮತ್ತಿತರ ಕರಾವಳಿ ತೀರ ಪ್ರದೇಶದಲ್ಲಿ

ಬೆಂಗಳೂರು: ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದ್ದಾರೆ. ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸೇರಿ ದಾಖಲೆ ನಿರ್ಮಿಸಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ ಬಳಿಕ

ಬೆಂಗಳೂರು: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಅತ್ಯಾಚಾರ ಆರೋಪದ ಜೊತೆ ಕಾನೂನು ಬಾಹಿರ ಚಟುವಟಿಕೆಗಳಿಗೆ ಧಾರ್ಮಿಕ ಸ್ಥಳಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ, ಎಂಬುದನ್ನು ಉಲ್ಲೇಖಿಸಲಾಗಿದೆ.  ಶಿವಮೂರ್ತಿ ಮುರುಘಾ ಶರಣರು ಮತ್ತು ಇತರರ ವಿರುದ್ಧ ಪೋಕ್ಸೋ ಪ್ರಕರಣದ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪವನ್ನು ಸ್ಪಷ್ಟವಾಗಿ

ಶೋಪಿಯಾನ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. ಶೋಪಿಯಾನ್'ನ ಕಾಪ್ರೆನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು

ಗೋಲ್ಡನ್ ಕ್ವೀನ್ ಅಮೂಲ್ಯ ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇಬ್ಬರು ಮುದ್ದು ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಅವಳಿ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಕೆಲ ತಿಂಗಳುಗಳ ಹಿಂದೆ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅಮೂಲ್ಯ ಜಗದೀಶ್ ದಂಪತಿ ಅವಳಿ ಮಕ್ಕಳಿಗೆ (ನ.10) ನಾಮಕರಣ ಶಾಸ್ತ್ರ ಮಾಡಿದ್ದಾರೆ. ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ

ತುಮಕೂರು: ಬೆಸ್ಕಾಂ ಕಚೇರಿಯ ಸೆಕ್ಯೂರಿಟಿ ಕಾಂಪೌಂಡ್‌ಗೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಹೊರಪೇಟೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡಿದ್ದಾರೆ. ತುಮಕೂರು ನಗರದ ನಿವಾಸಿ ದೀಪು (36 ವರ್ಷ) ಹಾಗೂ ಮಾರುತಿ ವ್ಯಾನ್ ಚಾಲಕ ಮುನೀರ್ ಖಾನ್ (25

ಹುಬ್ಬಳ್ಳಿ: ನಾಡಿನಾದ್ಯಂತ ಇಂದು ಸಡಗರ, ಸಂಭ್ರಮದಿಂದ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಿಸಲಾಯಿತು. ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಈದ್ಗಾ ಮೈದಾನ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ

ನವದೆಹಲಿ: ಕೇಂದ್ರ ಸರ್ಕಾರ ಆಧಾರ್ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಆಧಾರ್ ಹೊಂದಿರುವವರು ದಾಖಲಾತಿ ದಿನಾಂಕದಿಂದ 10 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಅದರ ದಾಖಲೆಗಳನ್ನು "ಕನಿಷ್ಠ ಒಮ್ಮೆ" ನವೀಕರಿಸಬೇಕು ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊರಡಿಸಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ದಾಖಲೆಗಳ ನವೀಕರಣವು ಕೇಂದ್ರೀಯ ಗುರುತುಗಳ ಡೇಟಾ ರೆಪೊಸಿಟರಿಯಲ್ಲಿ(ಸಿಐಡಿಆರ್) ಆಧಾರ್-ಸಂಬಂಧಿತ

ಉಡುಪಿ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯಬೇಕಾಗಿದ್ದ ಲಕ್ಷದೀಪೋತ್ಸವವು ಗುರುವಾರದ೦ದು ವಿಜೃ೦ಭಣೆಯಿ೦ದ ಜರಗಿತು. ಮಧ್ಯಾಹ್ನ 12.15ಕ್ಕೆ ಶ್ರೀದೇವರಿಗೆ ಅರ್ಚಕರಾದ ವಿನಾಯಕ್ ಭಟ್ ಮತ್ತು ಪರಿವಾರ ದೇವರುಗಳ ಅರ್ಚಕ ವೃ೦ದದವರು ಆಡಳಿತ ಮ೦ಡಳಿಯ ಮೊಕ್ತೇಸರರಾದ ಪಿ.ವಿ.ಶೆಣೈ ಹಾಗೂ ಆಡಳಿತ ಮ೦ಡಳಿಯ ಸದಸ್ಯರು, ಸಮಾಜ ಬಾ೦ಧವರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆಯನ್ನುಸಲ್ಲಿಸಿ ದೇವರಿಗೆ

ಪುತ್ತೂರು, ನ 10 : ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು