Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಬೆಂಗಳೂರು: ಪ್ರತಿ ದಿನ ಒಂದು ತಾಸು ಹೆಚ್ಚಿಗೆ   ಕೆಲಸ ಮಾಡಿ  ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು,  ಕೆಳಹಂತದವರೆಗೆ

ಮಾಲೆ: ಮಾಲ್ಡೀವ್ಸ್‌ನ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 8 ಮಂದಿ ಭಾರತೀಯರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ವಿದೇಶಿ ಕಾರ್ಮಿಕರು ವಾಸವಾಗಿರುವ ಇಕ್ಕಟ್ಟಾದ ವಸತಿಗೃಹದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ನೆಲ ಮಹಡಿಯಲ್ಲಿದ್ದ ವಾಹನ ದುರಸ್ತಿ ಗ್ಯಾರೇಜ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐವರು ಸಚಿವರು ಸೇರಿದಂತೆ 38 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಕಳೆದ ತಿಂಗಳು ಮೊರ್ಬಿಯಲ್ಲಿ ಸೇತುವೆ ಕುಸಿದು 135 ಮಂದಿ ಸಾವನ್ನಪ್ಪಿದ್ದು, ಮೊರ್ಬಿ ಶಾಸಕ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ

ಬೆಂಗಳೂರು: ಯಶಸ್ವಿ ಎಂಜಿನ್ ಪರೀಕ್ಷೆಯೊಂದಿಗೆ ದೇಶದ ಅತ್ಯಂತ ಭಾರವಾದ ಎಲ್ ವಿಎಂ3  ರಾಕೆಟ್ ನ ಪೇಲೋಡ್ ಸಾಮರ್ಥ್ಯವನ್ನು 450 ಕೆಜಿಯವರೆಗೂ ಹೆಚ್ಚಿಸಲಾಗಿದೆ ಎಂದು ಇಸ್ರೋ ಸಂಸ್ಥೆ ತಿಳಿಸಿದೆ. ಉಡಾವಣಾ ವಾಹಕ ಎಲ್ ವಿಎಂ 3 ರಾಕೆಟ್ ಗಾಗಿ ಅಭಿವೃದ್ಧಿಪಡಿಸಿರುವ ಸ್ವದೇಶಿ ಸಿಇ20 ಕ್ರಯೋಜೆನಿಕ್ ಇಂಜಿನ್ ನ್ನು ನವೆಂಬರ್ 9 ರಂದು ಮೊದಲು

ಮಂಗಳೂರು, ನ 09: ನಗರದ ಹೊರವಲಯದ ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಈ ವ್ಯಾಜ್ಯ ವಕ್ಫ್ ಟ್ರಿಬ್ಯುನಲ್​​ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್​ನಲ್ಲಿ ನಡೆಯಬೇಕೋ ಎಂಬ ಬಗ್ಗೆ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ತೀರ್ಪು ನೀಡಿದೆ. ವಿಶ್ವ

ಉಡುಪಿ, ನ 09. ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ 2021ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ವನ್ನು ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು. 1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಇವರು, 30ವರ್ಷ ಗಳ ಸೇವಾ ಅವಧಿಯಲ್ಲಿ ಪ್ರಮುಖ

ಉಡುಪಿ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದಿಪೋತ್ಸವವು ಇ೦ದು(ಬುಧವಾರ)ದ೦ದು ಶ್ರೀದೇವರಿಗೆ ಬೆಳಿಗ್ಗೆ 10.30 ಕ್ಕೆ ದೇವಳದ ಅರ್ಚಕರಾದ ಜಯದೇವ್ ಭಟ್ ಮತ್ತು ಗಣಪತಿ ಭಟ್ ರವರ ಉಪಸ್ಥಿತಿಯಲ್ಲಿ ದೇವತಾ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ಶ್ರೀದೇವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ಸುವರ್ಣ ನದಿಯಲ್ಲಿ ತೀರ್ಥ ಸ್ನಾನ ನಂತರ

ನವದೆಹಲಿ: ಕಳೆದ ವಾರ ರಾಜ್ಯಾದ್ಯಂತ ಇಬ್ಬರು ಜಾರ್ಖಂಡ್ ಕಾಂಗ್ರೆಸ್ ಶಾಸಕರು, ಅವರ ಸಹಚರರಿಗೆ ಸಂಬಂಧಿಸಿದ ಕಲ್ಲಿದ್ದಲು ಮತ್ತು ಕಬ್ಬಿಣದ ಅದಿರು ವ್ಯವಹಾರಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 100 ಕೋಟಿಗೂ ಹೆಚ್ಚು ಮೌಲ್ಯದ ಲೆಕ್ಕ ರಹಿತವಾದ ವಹಿವಾಟು ಮತ್ತು ಹೂಡಿಕೆಗಳನ್ನು ಪತ್ತೆಹಚ್ಚಿದ್ದಾರೆ. ನವೆಂಬರ್‌ 4 ರಂದು ನಡೆಸಲಾಗಿದ್ದ

ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಳಗ್ಗೆ 10:00 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿ ಹೊಂದಿರುತ್ತಾರೆ.

ನವದೆಹಲಿ: ಕರ್ನಾಟಕ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರನ್ನು ಭಾರತೀಯ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ತಿಳಿಸಿದ್ದಾರೆ. ನ್ಯಾಯಮೂರ್ತಿ ಕೆ.ಟಿ.ಶಂಕರನ್, ಪ್ರೊಫೆಸರ್ ಆನಂದ್ ಪಲಿವಾಲ್, ಪ್ರೊಫೆಸರ್ ಡಿಪಿ ವರ್ಮಾ, ಪ್ರೊಫೆಸರ್ ರಕ ಆರ್ಯ ಮತ್ತು ಎಂ ಕರುಣಾನಿಧಿ ಅವರನ್ನು