Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ. 80 ವರ್ಷದ  ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಜೀವರಕ್ಷಕ ಸಾದನ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ

ಕಲ್ಯಾಣಪುರ ; ಶ್ರೀ ರಾಮಾಂಜೇನೆಯ ದೇವಸ್ಥಾನ ಕಲ್ಯಾಣಪುರ ದೇವಳದ ಟ್ರಸ್ಟ್ ವತಿಯಿಂದ ಭಾನುವಾರದ೦ದು ಲಕ್ಷ ತುಳಸಿ ಅರ್ಚನೆ ಹಾಗೂ ಲಕ್ಷ ಕುಂಕುಮಾರ್ಚನೆ ನಡೆಯಿತು. ಅರ್ಚಕರಾದ ಶ್ರೀಕಾಂತ್ ಅವಧಾನಿ ಯವರ ಮಾರ್ಗದರ್ಶನ ದಲ್ಲಿ ಧಾರ್ಮಿಕ ಪೂಜಾ ವಿಧಾನಗಳನ್ನು ನೆಡೆಸಿಕೊಟ್ಟರು ಕಾಶೀನಾಥ ಭಟ್ , ಸೀತಾರಾಮ್ ಭಟ್ , ಗಣಪತಿ ಭಟ್ ,ಮಹೇಶ್

ಮಂಗಳೂರು, ನ 08: ಕಾಂಗ್ರೆಸ್ಸಿನ ಹಿಂದೂ ಮುಖಂಡರಿಗೆ ತಮ್ಮನ್ನು ಹಿಂದೂಗಳೆಂದು ಕರೆಸಿಕೊಳ್ಳಲು ನಾಚಿಕೆ ಆಗುತ್ತಿರುವುದು ಇಂದು ನಿನ್ನೆಯಿಂದಲ್ಲ.ಹಿಂದೂ ಶಬ್ದದ ಅರ್ಥ ಅಸಹ್ಯವಾಗಿದೆ ಎನ್ನುವ ಮೂಲಕ ಸತೀಶ್ ಜಾರಕಿಹೊಳಿ ಈಗ ಬಹಿರಂಗವಾಗಿ ಮನಸ್ಸಿನ ಭಾವನೆಗಳನ್ನು ಹೇಳಿ ಕಾಂಗ್ರೆಸ್ ಮನಸ್ಥಿತಿಯನ್ನು ಸಾಬೀತುಪಡಿಸಿದ್ದಾರೆ ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಭರತ್ ಪುರ್(ರಾಜಸ್ಥಾನ), ನ 08 : ಪ್ರೀತಿ ಕುರುಡು ಅಂತಾರೆ. ಅದಕ್ಕೆ ಪೂರಕವಾಗುವ ನೈಜ ಕತೆಯೊಂದು ಇಲ್ಲಿದೆ. ತಾನೇ ಕಲಿಸಿದ ವಿದ್ಯಾರ್ಥಿನಿಯನ್ನು ಮದುವೆಯಾಗಲು ಶಿಕ್ಷಕಿಯೊಬ್ಬಳು ಲಿಂಗಪರಿವರ್ತನೆ ಮಾಡಿಸಿಕೊಂಡು ಹುಡುಗನಾಗಿ ಬದಲಾಗಿದ್ದಾಳೆ! ರಾಜಸ್ಥಾನದ ಭರತ್ ಪುರ್ ಶಾಲೆಯ ದೈಹಿಕ ಶಿಕ್ಷಕಿ ಮೀರಾ ಎಂಬಾಕೆಯೇ ಲಿಂಗಪರಿವರ್ತನೆ ಮಾಡಿಕೊಂಡಾಕೆ. ಈಕೆ ತನ್ನ ವಿದ್ಯಾರ್ಥಿನಿ, ರಾಜ್ಯ

ನವದೆಹಲಿ: ಭಾರತದಲ್ಲಿನ 'ಡಿ-ಕಂಪನಿ'ಯ ಭಯೋತ್ಪಾದಕ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ ಹವಾಲಾ ಮಾರ್ಗಗಳ ಮೂಲಕ ಭೂಗತ ಪಾತಕಿ ದಾವೂದ್ ಇಬ್ರಾಹಿಂ(Dawood Ibrahim) ಭಾರೀ ಮೊತ್ತದ ಹಣವನ್ನು ಕಳುಹಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಆರೋಪಿಸಿದೆ. ಜನರಲ್ಲಿ ಭಯವನ್ನುಂಟುಮಾಡಲು ಮುಂಬೈ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸುವುದಕ್ಕೆ ಈ

ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಸಂಪುಟ ವಿಸ್ತರಣೆ ಕುರಿತು ಈಗಾಗಲೇ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ)ದ ಸದಸ್ಯರು ನವೆಂಬರ್ 19 ರಂದು ದೇಶವ್ಯಾಪಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಬ್ಯಾಂಕ್ ಆಫ್ ಬರೋಡಾ ಸೋಮವಾರದ ನಿಯಂತ್ರಕ ಫೈಲಿಂಗ್‌ನಲ್ಲಿ, ಎಐಬಿಇಎ

ಉಡುಪಿ: ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸುದ್ದಿಗಾರರೊಂದಿಗೆ

ವಾರಣಾಸಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ಆವರಣದ(Gyanvapi mosque case)ಒಳಗೆ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ಆರಾಧನೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಮಾಡಿರುವ ಮನವಿ ಹಿನ್ನಲೆಯಲ್ಲಿ ಎದ್ದಿರುವ ವಿವಾದ ಕುರಿತು ವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ನವೆಂಬರ್ 14ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸಂಬಂಧಪಟ್ಟ ನ್ಯಾಯಾಧೀಶರು ಇಂದು ತ್ವರಿತ ನ್ಯಾಯ ವಿಲೇವಾರಿ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆಯುವ ಮೂಲಕ ಎಎಪಿ ಸಚಿವರ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವ ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್ ಮತ್ತೊಂದು ಪತ್ರ ಬರೆದಿದ್ದಾರೆ. ನಿನ್ನೆ ದಿನ ಬರೆದಿರುವ ಪತ್ರದಲ್ಲಿ ಚಂದ್ರಶೇಖರ್ ಮನಸ್ಸಿನಲ್ಲಿ ತುಂಬಾ ವಿಷಯಗಳಿದ್ದು, ಪ್ರಶ್ನೆಗಳಿಗೆ ಉತ್ತರ ಬಯಸಿದ್ದಾನೆ. ಆದರೆ, ಇಡಿ ಮತ್ತು ಸಿಬಿಐ ವಿಚಾರಣೆ