BREAKING NEWS > |
ಚಿಕ್ಕಮಗಳೂರು, ನ 23: ಚಾಲಕಿಯ ನಿಯಂತ್ರಣ ತಪ್ಪಿ ಜೀಪು ಹಳ್ಳಕ್ಕೆ ಉರುಳಿ ಬಿದ್ದು ಚಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಅಕ್ಷತಾ(35 ) ಮೃತ ಚಾಲಕಿ. ಅಕ್ಷತಾ ಅವರು ಹೊಸಗದ್ದೆಯಿಂದ ಹೊರನಾಡಿಗೆ ಜೀಪಿನಲ್ಲಿ ಸಂಚರಿಸುತ್ತಿದ್ದ ವೇಳೆ ಮಾರ್ಗಮಧ್ಯೆ ಜೀಪು ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಜೀಪ್‌ನಲ್ಲಿ ಅಕ್ಷತಾ
ಕುಂದಾಪುರ, ನ 23 . ಜಿಲ್ಲೆಯ ಸಿಪಿಐಎಂ ಪಕ್ಷದ ಹಿರಿಯ ಮುಖಂಡರಾದ ಯು. ದಾಸ ಭಂಡಾರಿ (80) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭೂಸುಧಾರಣೆಯ ಹೋರಾಟದ ಸಮಯದಲ್ಲಿ ದೈಹಿಕ ಹಲ್ಲೆಗೆ ಒಳಗಾಗಿದ್ದರೂ
ಮಂಗಳೂರು, ನ 23. ನಗರದ ನಾಗುರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನವೆಂಬರ್ 23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಸಕ ಡಾ. ವೈ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್.
ನೈಜೀರಿಯಾ, ನ 23. ಮೂರು ಬಸ್‌ಗಳ ನಡುವೆ ಢಿಕ್ಕಿ ಸಂಭವಿಸಿ ಕನಿಷ್ಠ 37 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಈಶಾನ್ಯ ನೈಜೀರಿಯಾದ ಮೈದುಗುರಿ ನಗರದ ಹೊರ ವಲಯದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಸಂಚರಿಸುತ್ತಿದ್ದ ಬಸ್‌ನ ಟಯರ್ ಸ್ಪೋಟಗೊಂಡು ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ಮುಂಭಾಗದಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ
ಬೆಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ತನಿಖೆ ಮುಂದುವರೆದಿದ್ದು, ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ಆರೋಗ್ಯವನ್ನು ರಾಜ್ಯ ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ವಿಚಾರಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು, ಶಾರೀಕ್ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ
ಯುನೈಟೆಡ್ ನೇಷನ್ಸ್: ಪ್ರತಿ 11 ನಿಮಿಷಕ್ಕೆ ಒಬ್ಬ ಮಹಿಳೆ ಅಥವಾ ಹುಡುಗಿಯನ್ನು ಆತ್ಮೀಯ ಸಂಗಾತಿ ಅಥವಾ ಕುಟುಂಬದ ಸದಸ್ಯರು ಹತ್ಯೆ ಮಾಡುತ್ತಾರೆ ಎಂಬ ಆತಂಕಕಾರಿ ಅಂಕಿಅಂಶವನ್ನು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ನೀಡಿದ್ದಾರೆ. ಮಹಿಳೆಯರು, ಯುವತಿಯರು ಅಥವಾ ಬಾಲಕಿಯರ ವಿರುದ್ಧ ಹಿಂಸಾಚಾರವು ವಿಶ್ವದ ಅತ್ಯಂತ ವ್ಯಾಪಕವಾದ "ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಈ
ಉಡುಪಿ, ನ 22 . ಕರ್ನಾಟಕ ಕರಾವಳಿ ವಿಚ್ಛಿದ್ರ ಶಕ್ತಿಗಳ ಕೇಂದ್ರವಾಗುತ್ತಿದೆ. ಕರಾವಳಿಯಲ್ಲಿ ಎನ್ಐಎ ಘಟನೆ ಸ್ಥಾಪನೆ ಮಾಡುವ ಸಂಬಂಧ ಸಂಸತ್ತಿನಲ್ಲಿ ವಿಷಯ ಪ್ರಸ್ತಾಪ ಮಾಡುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕರಾವಳಿಯಲ್ಲಿ ಎನ್ಐಎ ಘಟನೆ ಸ್ಥಾಪನೆಯ ಅಗತ್ಯವಿದೆ ಎಂದು ಈ ಹಿಂದೆಯೇ
ಉಡುಪಿ: ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ಸನ್ನಿಧಿಯಲ್ಲಿ ವರ್ಷ೦ಪ್ರತಿ ನಡೆದು ಬರತಕ್ಕ ಸಪ್ತಾಹ ಮಹೋತ್ಸವವು ಶುಭಕೃತ್ ನಾಮ ಸ೦ವತ್ಸರದ ಮಾರ್ಗಶಿರ ಶುದ್ಧ ಪ೦ಚಮಿ ನವೆ೦ಬರ್ 28ರ ಸೋಮವಾರ ಪ್ರಾತಕಾಲ 8.00ರಿ೦ದ ಮೊದಲ್ಗೊ೦ಡು ಡಿಸೆ೦ಬರ್ 5ರ ಸೋಮವಾರ ಪ್ರಾತಕಾಲ 8.00ಗ೦ಟೆಯವರೆಗೆ ಅಹೋರಾತ್ರಿ 7ದಿನಗಳ ಪರ್ಯ೦ತ ಜರಗಲಿದೆ. ವಿವಿಧ ಆಹ್ವಾನಿತ ಭಜನಾ ಮ೦ಡಳಿಗಳಿ೦ದ
ಮಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ್ದ ಆಟೋ ಸ್ಫೋಟ ಪ್ರಕರಣದ ಶಂಕಿತ ಶಾರೀಕ್ ಗೆ ಜಾಗತಿಕ ಜಾಲದ ಉಗ್ರ ಸಂಘಟನೆಯೇ ಸ್ಪೂರ್ತಿ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಅಸ್ತಿತ್ವ ಹೊಂದಿರುವ ಒಂದು ಉಗ್ರ ಸಂಘಟನೆಯ ಪ್ರಭಾವ ಹಾಗೂ ಸ್ಪೂರ್ತಿ ಶಾರೀಕ್ ಗೆ ಇತ್ತು ಎಂದು
ಮಂಗಳೂರು, ನ 21 : ರಿಕ್ಷಾದಲ್ಲಿ ಕುಕ್ಕರ್ ಸ್ಟೋಟಕ್ಕೆ ಭಯೋತ್ಪಾದಕರು ನಂಟಿನ ಆತಂಕದ ಬೆನ್ನಲ್ಲೇ ನಗರದ ಬಿಜೈನಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್‌ವೊಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾದ ಘಟನೆ ನಡೆದಿದೆ. ಬ್ಯಾಗ್ ವಿಚಾರ ತಿಳಿದ ತಕ್ಷಣ ಬಾಂಬ್ ನಿಷ್ಕ್ರಿಯ ದಳ ,ಶ್ವಾನದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಪರಿಶೀಲನೆ