Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಕೊಪ್ಪಳ: ನನ್ನ ಮತ್ತು ಬಿ ಎಸ್ ಯಡಿಯೂರಪ್ಪನವರ ಮಧ್ಯೆ ತಂದೆ-ಮಗನ ಸಂಬಂಧವಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅದರಲ್ಲಿ ಅಪಸ್ವರ ಬರಲು ಸಾಧ್ಯವಿಲ್ಲ, ಅವರು ಸರ್ವೋಚ್ಛ ನಾಯಕರು, ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಪಕ್ಷದ ಕೆಲಸ-ಕಾರ್ಯಗಳು, ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಕೊಪ್ಪಳದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಮ್ಮ

ನವದೆಹಲಿ: ಭಾರತ ಮತ್ತು ಚೀನಾ ಸೈನಿಕರ ನಡುವೆ ತವಾಂಗ್ ನ ಯಾಂಗ್ಟ್ಸೆ ಪ್ರದೇಶದಲ್ಲಿ ನಡೆದ ಘರ್ಷಣೆಯ ಕುರಿತು ಲೋಕಸಭೆಗೆ ಇಂದು ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದರು. ನಮ್ಮ ಸೈನಿಕರಿಗೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಗಡಿಯೊಳಗೆ ಚೀನೀ ಸೈನಿಕರ ಉಲ್ಲಂಘನೆಯ ಪ್ರಯತ್ನವನ್ನು ನಿಲ್ಲಿಸಲು

ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್  ಅಧಿಕಾರ ವಹಿಸಿಕೊಂಡರು. ಮುಕೇಶ್ ಅಗ್ನಿಹೋತ್ರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರಳೇಕರ್ ಪ್ರಮಾಣ ವಚನ

ಉಡುಪಿ: ಹಗರಣಗಳಲ್ಲಿ ಉಡುಪಿಯು ಬಹಳಷ್ಟು ಮು೦ದಿದ್ದು ಇದೀಗ ಇನ್ನೊ೦ದು ಹಗರಣವು ಇಡೀ ಉಡುಪಿ ನಗರದ ಜನರನ್ನೇ ಬೆಚ್ಚಿಬೀಳಿಸುವ೦ತೆ ಮಾಡಿದೆ. ಅದೇನದು ಅ೦ದರೆ ಪರ್ಕಳ-ಹೆಬ್ರಿಯವರೆಗೆ ಹೆದ್ದಾರಿ ರಸ್ತೆಯು ಅಗಲೀಕರಣಗೊಳ್ಳುವ ಕೆಲಸವು ಆರ೦ಭವಾಗಿದ್ದು ಈ ಸ್ಥಳದಲ್ಲಿ ಬಜೆ ಡ್ಯಾ೦ನಿ೦ದ ಉಡುಪಿ ನಗರಕ್ಕೆ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸಲಾಗಿದೆ. ಇದಕ್ಕಾಗಿ ಸಾವಿರಾರು

ಬೆಂಗಳೂರು : ಎಚ್​​ಎಲ್ ಕುಂದನಹಳ್ಳಿ ಗೇಟ್​ ಬಳಿ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಯುವಕರ ಮೇಲೆ ರೌಡಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕರನ್ನು ಬೈಂದೂರು ಮೂಲದ ನವೀನ್ ಹಾಗೂ ಪ್ರಜ್ವಲ್ ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಂದೂರಿನ ಯುವಕರು  ಬ್ರಹ್ಮಲಿಂಗೇಶ್ವರ ಬೇಕರಿಯಲ್ಲಿ ಕೆಲಸ

ಉಡುಪಿ, ಡಿ 11:ಉಡುಪಿ ಸಬ್ ಜೈಲಿನಲ್ಲಿ ವಿಚಾರಣಾ ದಿನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಮುಂಜಾನೆ ಸುಮಾರು 5 ಗಂಟೆಗೆ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣು

ಶಿಮ್ಲಾ: ಹಿಮಾಚಲ ಪ್ರದೇಶದ  ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಪ್ರತಿಭಾ ವೀರಭದ್ರ ಸಿಂಗ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದು, ಅವರ ಕೆಳಗೆ ನಾವೆಲ್ಲ ಕೆಲಸ ನಿರ್ವಹಿಸುತ್ತೇವೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಕೆಯನ್ನು

ಶಿವಮೊಗ್ಗ: ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ನಡೆದು ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ ಕಾರ್ತಿಕ್, ವಿವೇಕ್, ಮೋಹನ್ ಎಂದು ಗುರುತಿಸಲಾಗಿದ್ದು, ದುರ್ಘಟನೆಯಲ್ಲಿ ರುದ್ರೇಶ್ ಪಾಟೀಲ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಶಿವಮೊಗ್ಗದ ಕಲ್ಲುಕೊಪ್ಪ ಬಳಿ ಈ ಘಟನೆ ನಡೆದಿದೆ.

ಬೆಂಗಳೂರು: ರಾಜಭವನದಲ್ಲಿಂದು ಒಟ್ಟು 90 ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಷ್ಟ್ರಪತಿ ಪದಕ ಪ್ರದಾನ ಮಾಡಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಂತರ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸೈಬರ್ ಕ್ರೈಂ ಎದುರಿಸಲು ಇನ್ನೂ ಹೆಚ್ಚಿನ

ಕಟಪಾಡಿ, ಡಿ 10. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಬೈಕ್ ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದುಗುರುತಿಸಲಾಗಿದೆ. ಪಾದಾಚಾರಿ ಸತೀಶ್‌ ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕ್‌ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು