Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ನವದೆಹಲಿ: ಜಗತ್ತು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಈ ಅಸ್ಥಿರತೆಯ ಸ್ಥಿತಿ ಎಷ್ಟು ಕಾಲ ಇರುತ್ತದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್ ಶೃಂಗಸಭೆಯಲ್ಲಿ ತಮ್ಮ ಆರಂಭಿಕ ಭಾಷಣದಲ್ಲಿ ಮಾತನಾಡಿದ ಮೋದಿಯವರು, ಸಂಘರ್ಷ, ಯುದ್ಧ ಮತ್ತು ಭಯೋತ್ಪಾದನೆಯಿಂದ ಉದ್ಭವಿಸುವ

ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ. ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು  ತುಳಸಿಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಕರ್ನಾಟಕದ 'ನಾರಿ ಶಕ್ತಿ ವಿಷಯದ ಸ್ತಬ್ಧ ಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಧಿಕೃತ ಪ್ರಚಾರಾಂದೋಲನಕ್ಕೆ ಬುಧವಾರ ಅಧಿಕೃತ ಚಾಲನೆ ನೀಡಿರುವ ರಾಜ್ಯ ಕಾಂಗ್ರೆಸ್ ಪಕ್ಷವು, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ತಂಗಿದ್ದ ಬೆಳಗಾವಿಯ ಗಾಂಧಿಭಾವಿಯಲ್ಲಿ ಪ್ರಜಾಧ್ವನಿ ಜಂಟಿ ಯಾತ್ರೆಗೆ ಬುಧವಾರ ಚಾಲನೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ 'ಪ್ರಜಾ ಧ್ವನಿ' ಬಸ್ ಯಾತ್ರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್

ಸ್ವಾಮಿ ವಿವೇಕಾನ೦ದರ 160ನೇ ಜಯ೦ತಿಯನ್ನು ಕಲ್ಯಾಣಪುರ ಲಕ್ಷ್ಮೀನಾರಾಯಣ ನಾಯಕ್ ಅವರು ವಿಶೇಷವಾಗಿ ಕೇ೦ದ್ರ ಸರಕಾರ 2013ರಲ್ಲಿ ಬಿಡುಗಡೆಮಾಡಿದ ಸ್ವಾಮಿವಿವೇಕಾನ೦ದರ ರೂ.150ರ ಹಾಗೂ 5ರೂ ಮುಖಬೆಲೆಯ ನಾಣ್ಯವನ್ನು ಅ೦ಚೆ ಹೊರತ೦ದ ಸ್ಟ್ಯಾ೦ಪನ್ನು ತಮ್ಮ ಮನೆಯಲ್ಲಿ ಪ್ರದರ್ಶನ ಇಡುವ ಮೂಲಕ ಆಚರಿಸಿದರು.

ಪುತ್ತೂರು:ಜ 11. ಎ.ಪಿ.ಎಂ.ಸಿ ರಸ್ತೆಯ ಸೂತ್ರಬೆಟ್ಟುವಿನ ಬಾಡಿಗೆ ಮನೆಯಲ್ಲಿ ವಾಸವಿರುವ ವಿವೇಕಾನಂದ ಯಾನೆ ಸತ್ಯನಾರಾಯಣ ಅವರ ಮನೆಯಿಂದ ಸುಮಾರು 75 ಸಾವಿರ ಮೌಲ್ಯದ ವಿವಿಧ ಸೊತ್ತುಗಳನ್ನು ಕಳವು ಗೈದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೂರ್ನಡ್ಕ ನಿವಾಸಿಗಳಾದ ಮಹಮ್ಮದ್ ಮುಸ್ತಫ್ಪ(28) ಹಾಗೂ ಸವಣೂರು ಚಾಪಳ್ಳ ಶಮೀರ್(24) ಬಂಧಿತ ಆರೋಪಿಗಳಾಗಿದ್ದಾರೆ. ಮನೆಯಲ್ಲಿ ಸತ್ಯನಾರಾಯಣ

ನವದೆಹಲಿ: 9 ಹೈಕೋರ್ಟ್ ಜಡ್ಜ್‌ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಪ್ರೀಂ ಕೋರ್ಟ್ (Supreme Court) ಕೊಲಿಜಿಯಂ ಸಭೆಯಲ್ಲಿ 7 ನ್ಯಾಯಾಧೀಶರು ಮತ್ತು ಇಬ್ಬರು ನ್ಯಾಯವಾದಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಯಾಗಿ

ಬೆಂಗಳೂರು: ಈ ಹಿಂದೆ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸ್ಯಾಂಟ್ರೋ ರವಿ ಪರವಾಗಿ ಕೆಲಸ ಮಾಡಿದ್ದ ಆರೋಪದ ಮೇಲೆ  ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್  ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಅತ್ಯಾಚಾರ, ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್‌. ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ

ಶಿವಮೊಗ್ಗ: ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಬುಧವಾರ ತಿಳಿದುಬಂದಿದೆ. 5 ಕಾರುಗಳಲ್ಲಿ ಬಂದಿರುವ ಸುಮಾರು 15ಕ್ಕೂ ಹೆಚ್ಚು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೂವರು ಶಂಕಿತ ಉಗ್ರರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಜ್ ಮುನೀರ್, ಶಾರೀಕ್ ಮನೆ ಸೇರಿದಂತೆ

ಬೆಂಗಳೂರು: ಮೆಟ್ರೋ ಪಿಲ್ಲರ್ ದುರಂತ ಹಾಗೂ ನಗರದಲ್ಲಿ ನಡೆದ ಸಾಲು ಸಾಲು ಪ್ರತಿಭಟನೆಯಿಂದಾಗಿ ನಗರದ ಹಲವೆಡೆ ವಿಪರೀತ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕಂಗಾಲಾದ ಬೆಳವಣಿಗೆ ಮಂಗಳವಾರ ಕಂಡು ಬಂದಿತು. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಪರವಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಹಾಗೂ ವಿರುದ್ಧವಾಗಿ