Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ವಡೋದರ: ಗುಜರಾತ್‌ನ ಪಂಚಮಹಲ್ ಜಿಲ್ಲೆಯ ದೆಲ್ವೋಲ್ ಗ್ರಾಮದಲ್ಲಿ ಗೋದ್ರಾ ಘಟನೆಯ ಬಳಿಕ ನಡೆದ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದ 22 ಆರೋಪಿಗಳನ್ನು ಹಲೋಲ್ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ. 2002ರ ಗೋಧ್ರಾ ಹತ್ಯಾಕಾಂಡದ ನಂತರ ನಡೆದ ಕೋಮುಗಲಭೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ

ಚಾಮರಾಜನಗರ: ಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಪ್ರವಾಸಿ ಬಸ್ ಉರುಳಿ  ಬಿದ್ದಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಇದಾಗಿತ್ತು ಎನ್ನಲಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರವಾಸಿಗರಿದ್ದರು ಎನ್ನಲಾಗಿದ್ದು, ಈ ಪೈಕಿ 15 ಮಂದಿಗೆ ಗಾಯಗಳಾಗಿವೆ. ಗುಜರಾತ್‌ ನೋಂದಣಿ ಹೊಂದಿದ್ದ ಬಸ್‌ ಇದಾಗಿದೆ.

ಬ್ರಹ್ಮಾವರ:ಜ 23 ಖ್ಯಾತ ಗಮಕಿ, ಗಾಯಕ, ನಿವೃತ್ತ ಕನ್ನಡ ಭಾಷಾ ಅಧ್ಯಾಪಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ (73) ಅವರು ಬ್ರಹ್ಮಾವರದಲ್ಲಿ ಜ. 24ರ ಮಂಗಳವಾರ ನಿಧನರಾಗಿದ್ದಾರೆ. ಚಂದ್ರಶೇಖರ ಕೆದ್ಲಾಯ ಅವರು ಪ್ರಸಿದ್ಧ ಗಾಯಕರಾಗಿದ್ದು, ಪರಿಣಿತ ಗಮಕ ಕಲಾವಿದರಾಗಿದ್ದರು. ಬ್ರಹ್ಮಾವರದ ನಿರ್ಮಲಾ ಪ್ರೌಢಶಾಲೆಯಲ್ಲಿ 35 ವರ್ಷಗಳ ಕಾಲ ಕನ್ನಡ ಶಿಕ್ಷಕರಾಗಿ ಸೇವೆ

ಕಾಫಿನಾಡ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ಹಲವು ತಾಸು ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಮತ್ತಿಕಟ್ಟೆ, ನಿಡುವಾಳೆ, ಗುತ್ತಿ, ಭೈರಾಪುರ, ಕಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಜನವರಿಯಲ್ಲಿ ಮಳೆ ಕಂಡು ಮಲೆನಾಡಿಗರು

ಹಳೆಯ ದ್ವೇಷದಿಂದ ದುಷ್ಕರ್ಮಿಗಳು ಅಂಗಡಿ, ವಾಹನಕ್ಕೆ ಬೆಂಕಿ ಹಚ್ಚಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಮಂಗಳೂರು ನಗರದ ಬಂದರು ಠಾಣೆಗೆ ದೂರು ನೀಡಲಾಗಿದೆ. ನಗರದ ಕಾಳಿಕಾಂಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ವಚನರಾಮ್ ರಾಯ್ಕ್ ಕಳೆದ 7 ವರ್ಷಗಳಿಂದ ಹಾರ್ಡ್‌ವೇರ್ ಮತ್ತು ವುಡನ್ ಮೋಲ್ಡಿಂಗ್ ವ್ಯವಹಾರದ

ಬೆಂಗಳೂರು: ಆಕಾಶದಿಂದ ಹಣ ಸುರಿದರೆ ಹೇಗಿರತ್ತೆ.. ಹೀಗೆ ಎಷ್ಟೋ ಬಾರಿ ನಾವು ಅಂದುಕೊಂಡಿದ್ದೂ ಇದೆ.. ಆದರೆ ಇದು ನಿಜವಾದರೆ.. ಅಕ್ಷರಶಃ ನಿಜ.. ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಆಕಾಶದಿಂದ ಹಣದ ಸುರಿಮಳೆಯೇ ಸುರಿದಿದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಕೆಆರ್‌ ಮಾರುಕಟ್ಟೆ ಫ್ಲೈಒವರ್‌ನಿಂದ ಹಣದ ಮಳೆ ಸುರಿದಿದ್ದು, ಹತ್ತು ರೂಪಾಯಿ ನೋಟುಗಳ ಈ ಮಳೆಯಿಂದ

ನವದೆಹಲಿ: ನೆರೆಯ ನೇಪಾಳದಲ್ಲಿ ಮಂಗಳವಾರ ಮಧ್ಯಾಹ್ನ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶದ ಸುತ್ತಮುತ್ತಲಿನ ನಗರಗಳಲ್ಲಿ ಮತ್ತು ಜೈಪುರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದಿು ಮಧ್ಯಾಹ್ನ 2:28 ಕ್ಕೆ ಭೂಮಿ ಕಂಪಿಸಿದ್ದು, ಉತ್ತರಾಖಂಡದ ಪಿಥೋರಘಢ್ ನಿಂದ ಪೂರ್ವಕ್ಕೆ 148 ಕಿಮೀ ದೂರದ ನೇಪಾಳದಲ್ಲಿ ಭೂಕಂಪನದ ಕೇಂದ್ರಬಿಂದು

ಅಹಮದಾಬಾದ್‌: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿವಿ ದೋಷಿ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ಯಾತ ಭಾರತೀಯ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ಅವರು ಮಂಗಳವಾರ ಅಹಮದಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಆರ್ಕಿಟೆಕ್ಚರ್ ಡೈಜೆಸ್ಟ್ ಆಫ್ ಇಂಡಿಯಾ ಇನ್ಸ್ಟಾಗ್ರಾಮ್ ನಲ್ಲಿ ಈ ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ದೋಷಿ ಅವರಿಗೆ ಸಂತಾಪ ಸೂಚಿಸಿದೆ. "ರೂಪ ಮತ್ತು

ಹಾಸನ: ಫೆ.3ರಂದು ಅರಸೀಕೆರೆಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಆಯೋಜಿಸುವ ಮೂಲಕ ಅರಸೀಕೆರೆ ಹಾಲಿ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಗೆ ದೊಡ್ಡ ಹೊಡೆತ ನೀಡಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯ ಗುರಿ ಹೊಂದಿರುವ ಜೆಡಿಎಸ್ ನಾಯಕರಿಗೆ ಈ ಸಮಾವೇಶ ಮಹತ್ವದ್ದಾಗಿದೆ. ಲಿಂಗಾಯತ ಪ್ರಾಬಲ್ಯದ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್