Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಸಂಶಯಗೊಂಡ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಸಾಲೆತ್ತೂರು ಭಾಗದಲ್ಲಿ 6 ಯುವತಿಯರ ಸಹಿತ 11 ಮಂದಿಯ ತಂಡವೊಂದು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿತ್ತು‌. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಅವರನ್ನು ವಿಚಾರಿಸಿದ್ದು,

ಸಿಡ್ನಿ: ಆಸ್ಟ್ರೇಲಿಯದ ಟಿ-20 ತಂಡದ ಆ್ಯರೋನ್‌ ಫಿಂಚ್‌ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಪರವಾಗಿ ದಾಖಲೆಯ 76 ಟಿ20 ಮತ್ತು 55 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಫಿಂಚ್​ ಕ್ರಿಕೆಟ್​ ವೃತ್ತಿ ಬದುಕಿನಿಂದ ಹಿಂದೆ ಸರಿದಿದ್ದಾರೆ. "ನಾನು 2024 ರ ಮುಂದಿನ ಟಿ20 ವಿಶ್ವಕಪ್‌ನವರೆಗೆ ಆಡುವುದಿಲ್ಲ ಎಂದು ಅರಿತುಕೊಂಡಿದ್ದೇನೆ.

ಇತ್ತೀಚಿನ ದಿನಗಳಲ್ಲಿ ರಾಖಿ ಸಾವಂತ್ ಅವರ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳು ಆಗುತ್ತಿವೆ. ಆದಿಲ್ ಖಾನ್ ಜೊತೆ ಮದುವೆಯಾದ ನಂತರ ಶುರುವಾದ ಒಡಕು ಫೆಬ್ರವರಿಯಲ್ಲಿಯೂ ಮುಂದುವರಿಯುತ್ತದೆ. ರಾಖಿ ಸಾವಂತ್ ಇದೇ ವಾರದಲ್ಲಿ ತಾಯಿಯನ್ನು ಕಳೆದುಕೊಂಡು ನೋವಿನಲ್ಲಿದ್ದರು. ಇನ್ನು ಆದಿಲ್ ತನಗೆ ದ್ರೋಹ ಬಗೆದಿದ್ದಾರೆ. ಅವನು ಸರಿಯಿಲ್ಲ ಎಂದೆಲ್ಲಾ ಬಹಿರಂಗವಾಗಿ ಹೇಳುತ್ತಿದ್ದ

ಮಂಗಳೂರು: ಕಲುಷಿತ ಆಹಾರ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ರಾಜೇಶ್ ಅವರು ಮಾಹಿತಿ ನೀಡಿದ್ದು, ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ

ಬೆಂಗಳೂರು: ನಗರದ ರಸ್ತೆಗಳ ಗುಂಡಿ ಮುಚ್ಚಲು ಈ ವರೆಗೂ ರೂ.119 ಕೋಟಿ ವ್ಯಯಿಸಿದರೂ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲು

ಬೆಂಗಳೂರು: ನಟ ಚೇತನ್ ಒಂದಿಲ್ಲೊಂದು ಕಾರಣದಿಂದ ಸದಾ ಸುದ್ದಿಯಲ್ಲಿರುತ್ತಾರೆ, ಸದ್ಯ ರಾಜ್ಯದಲ್ಲಿ ಬ್ರಾಹ್ಮಣ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಚೇತನ್ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೇತನ್ ಕುಮಾರ್,  ಬ್ರಾಹ್ಮಣ ಮತ್ತು ಗಂಡಸು ಆಗಿ ‘ಆಕಸ್ಮಿಕವಾಗಿ' ಜನಿಸಿದವರೆಲ್ಲರೂ ಒಂದೇ ಆಗಿರುವುದಿಲ್ಲ, ಉದಾರವಾದಿ ಬ್ರಾಹ್ಮಣ ಪುರುಷರು

ಓಮನ್:ಫೆ.6:ಮಸ್ಕತ್ ಓಮನ್ ನ ಶ್ರೀಕೃಷ್ಣ ದೇವಸ್ಥಾನದ ಸಭಾಗ೦ಗಣದಲ್ಲಿ ಅಮ್ಚಿಗೆಲೆ ಕುಟು೦ಬ್ ಓಮನ್ ಗ್ರೂಪ್ ವತಿಯಿ೦ದ ಶುಕ್ರವಾರದ೦ದು ಸಾಮೂಹಿಕ ಸತ್ಯನಾರಾಯಣ ಪೂಜಾಕಾರ್ಯಕ್ರಮವು ವಿಜೃ೦ಭಣೆಯಿ೦ದ ಜರಗಿತು. ದೇವತಾ ಪ್ರಾರ್ಥನೆ,ವಿಶೇಷ ಹೂವಿನ ಅಲ೦ಕಾರಸೇವೆ,ನಾಮಕಠಣ,ಮಹಾ ಮ೦ಗಳಾರತಿಯೊ೦ದಿಗೆ ಧಾರ್ಮಿಕ ವಿಧಿ-ವಿಧಾನಗಳು ಭರತ್ ಭಟ್ ಮ೦ಜೇಶ್ವರ ಇವರ ಪೌರೋಹಿತ್ಯದಲ್ಲಿ ನಡೆಯಿತು. ಮ೦ಜುನಾಥ ನಾಯಕ್ ,ಮ೦ಗೇಶ್ ಶ್ಯಾನಭಾಗ್,ರಾಮಕೃಷ್ಣ ಪ್ರಭು,ಸಚಿನ್ ಕಾಮತ್,ರಾಜೇಶ್ ಕಾಮತ್,ಚಿತ್ರಾನ೦ದ

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 1,300 ದಾಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಮುಂಜಾನೆ ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕಂಪನದ ತೀವ್ರತೆಯ ಪರಿಣಾಮ ಉಭಯ ದೇಶಗಳಲ್ಲಿ ನೂರಾರು ಕಟ್ಟಡಗಳು ಧರೆಗುರುಳಿದಿವೆ. ಕಂಪನದಿಂದಾಗಿ ಈ

ಗುವಾಹತಿ: ಪ್ರತಿಪಕ್ಷಗಳ ಟೀಕೆ ಮತ್ತು ತೀವ್ರ ಪ್ರತಿಭಟನೆಗಳ ನಡುವೆಯೇ ಅಸ್ಸಾಂ ಪೊಲೀಸರು ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ. ಬಾಲ್ಯವಿವಾಹ ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ

ಪಾಟ್ನಾ: ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಅಪರಿಚಿತ ಕಳ್ಳರು ಎರಡು ಕಿಮೀ ಉದ್ದದ ರೈಲ್ವೆ ಹಳಿಯನ್ನು ಕದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕದ್ದ ಟ್ರ್ಯಾಕ್ ಲೋಹತ್ ಸಕ್ಕರೆ ಕಾರ್ಖಾನೆಯನ್ನು ಪಂಡೌಲ್ ರೈಲು ನಿಲ್ದಾಣದೊಂದಿಗೆ ಸಂಪರ್ಕಿಸುತ್ತಿತ್ತು. ಕಳೆದ ಕೆಲವು ವರ್ಷಗಳಿಂದ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಈ ಮಾರ್ಗದಲ್ಲಿ ಸಂಚಾರವೇ ಇರಲಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು